ಕಾಳು ಮೆಣಸು ಕೊಯ್ಯುತ್ತಿರುವ ವೇಳೆ ಅವಘಡ: ಏಣಿ ಸಹಿತ ಮರದಿಂದ ಜಾರಿ ಬಿದ್ದು ನಿವೃತ್ತ ಶಿಕ್ಷಕ ಮೃತ್ಯು

kadaba times

ಪುತ್ತೂರಿನ ಬೆಟ್ಟಂಪಾಡಿ ಗ್ರಾಮದ ಗುಮ್ಮಟೆಗದ್ದೆಯಲ್ಲಿ ಕಾಳುಮೆಣಸು ಕೊಯ್ಯುವಾಗ ತೆಂಗಿನ ಮರದಿಂದ ಬಿದ್ದು ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ನಾಯ್ಕ ಪೈಂತಿಮುಗೇರು ನಿಧನರಾಗಿದ್ದಾರೆ.

kadaba times
uniq

ಪುತ್ತೂರು: ಕಾಳು ಮೆಣಸು ಕೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ತೆಂಗಿನ ಮರದಿಂದ ಕೆಳಕ್ಕೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಜ.19ರಂದು ಬೆಟ್ಟಂಪಾಡಿ ಗ್ರಾಮದ ಗುಮ್ಮಟೆಗದ್ದೆಯಲ್ಲಿ ನಡೆದಿದೆ.

ಬೆಟ್ಟಂಪಾಡಿ ಗ್ರಾಮದ ಗುಮ್ಮಟೆಗದ್ದೆ ನಿವಾಸಿ ನಾರಾಯಣ ನಾಯ್ಕ ಪೈಂತಿಮುಗೇರು ಮೃತಪಟ್ಟ ದುರ್ದೈವಿ.

ಘಟನೆಯ ವಿವರ: ಸೋಮವಾರ ಬೆಳಿಗ್ಗೆ ನಾರಾಯಣ ನಾಯ್ಕ ಅವರು ತಮ್ಮ ಮನೆಯ ಮುಂಭಾಗದಲ್ಲಿದ್ದ ತೆಂಗಿನ ಮರಕ್ಕೆ ಹಬ್ಬಿದ್ದ ಕಾಳು ಮೆಣಸನ್ನು ಕೊಯ್ಯಲು ಅಲ್ಯೂಮಿನಿಯಂ ಏಣಿ ಏರಿದ್ದರು. ಈ ಸಂದರ್ಭದಲ್ಲಿ ಏಣಿ ಜಾರಿದ ಪರಿಣಾಮ ಅವರು ಮರದಿಂದ ಕೆಳಕ್ಕೆ ಬಿದ್ದಿದ್ದಾರೆ.

kadaba times
kadaba times

ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಲಾಯಿತಾದರೂ, ಅವರು ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಆಸ್ಪತ್ರೆಯ ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.ಮೃತರು ಪತ್ನಿ ಯಶೋಧ ಹಾಗೂ ಪುತ್ರರಾದ ತಿಲಕ್‌ರಾಜ್ ಮತ್ತು ಯತಿನ್ ರಾಜ್ ಅವರನ್ನು ಅಗಲಿದ್ದಾರೆ.

ಗಣ್ಯರ ಭೇಟಿ: ವಿಷಯ ತಿಳಿಯುತ್ತಿದ್ದಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ ಸೇರಿದಂತೆ ಹಲವು ಗಣ್ಯರು ಹಾಗೂ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ತಿಳಿಸಿದರು.

Related Articles

Latest Articles