ಕಡಬ: ಕಾಡುಕೋಣ ಬೇಟೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅರಣ್ಯಾಧಿಕಾರಿಗಳಿಂದ ಹಲ್ಲೆ ಆರೋಪ

kadaba times

ಕಡಬದ ಐತ್ತೂರು ಕಾಡುಕೋಣ ಬೇಟೆ ಪ್ರಕರಣದಲ್ಲಿ  ಓರ್ವನ ಮೇಲೆ ಹಲ್ಲೆ ಆರೋಪ ಮತ್ತು ವನ್ಯಜೀವಿ ಸಂರಕ್ಷಣಾ ಕಾಯಿದೆಯಡಿ ದಾಖಲಾಗಿರುವ ಪ್ರಕರಣದ ಮಾಹಿತಿ.

kadaba times
uniq

ಕಡಬ: ಐತ್ತೂರಿನಲ್ಲಿ ನಡೆದ ಕಾಡುಕೋಣ ಬೇಟೆ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಧಿಸಿ  ಅರಣ್ಯಾಧಿಕಾರಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಓರ್ವ  ಆರೋಪಿಸಿದ್ದಾರೆ.

ಘಟನೆಯ ಹಿನ್ನೆಲೆ: ವನ್ಯಜೀವಿ ಕಾಯಿದೆಯಡಿ ದಾಖಲಾಗಿರುವ ಈ ಪ್ರಕರಣದಲ್ಲಿ ನ್ಯಾಯಾಲಯವು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.ನ್ಯಾಯಾಲಯವು ಆರೋಪಿಗಳಿಗೆ ಜಾಮೀನು ನೀಡುವಾಗ “ತನಿಖೆಗೆ ಸಂಪೂರ್ಣ ಸಹಕರಿಸಬೇಕು” ಮತ್ತು “ಸಾಕ್ಷ್ಯ ನಾಶಪಡಿಸಬಾರದು” ಎಂಬ ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಿತ್ತು.

 ಅರಣ್ಯಾಧಿಕಾರಿಗಳ ಕಚೇರಿಗೆ ಹಾಜರಾಗುವುದು ಈ ತನಿಖೆಯ ಭಾಗವಾಗಿದೆ. ವಿಚಾರಣೆ ಮುಗಿದ ಬಳಿಕ ಇಬ್ಬರೂ ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ದೃಢಪತ್ರ ನೀಡುವಂತೆ ಅರಣ್ಯಾಧಿಕಾರಿಗಳು ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಿಗೆ ವಿನಂತಿಸಿದ್ದರು. ಹೀಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳೇ ಜೀವನ್ ಹಾಗೂ ಜೈನ್ ವರ್ಕಿ ಅವರನ್ನು ಕಡಬ ಸರಕಾರಿ ಆಸ್ಪತ್ರೆಗೆ ಕರೆ ತಂದರು ಎನ್ನಲಾಗಿದೆ.

ತನಿಖೆಯ ಹೆಸರಿನಲ್ಲಿ ಆರೋಪಿತರನ್ನು ಕಚೇರಿಗೆ ಕರೆಸಿ ಹಲ್ಲೆ ನಡೆಸಲಾಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತವಾಗಿದೆ.  ಘಟನೆಯ ಕುರಿತು ಉನ್ನತ ಪೊಲೀಸ್ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆಗ್ರಹವೂ ಮತ್ತೊಂದೆಡೆ  ಕೇಳಿ ಬಂದಿದೆ .

kadaba times
kadaba times

ಹಲ್ಲೆ ಆರೋಪವೋ ಅಥವಾ ಹೈಡ್ರಾಮವೋ? : ಆದರೆ  ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜೀವನ್, “ವಿಚಾರಣೆಯ ವೇಳೆ ಅರಣ್ಯಾಧಿಕಾರಿಗಳು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ವೀಡಿಯೋ ಹೇಳಿಕೆ ನೀಡಿದ್ದಾರೆ.  ಇತ್ತ  ವೈದ್ಯಕೀಯ ವರದಿಯಲ್ಲಿ ಕಿವಿಯ ಹಿಂಭಾಗ, ಎದೆ ನೋವು ಮತ್ತು ಎಡಗಾಲಿನ ಮೊಣಕಾಲಿನಲ್ಲಿ ನೋವು ಇರುವುದು ದಾಖಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಪುತ್ತೂರು ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿರುವುದು ಹಲ್ಲೆ ಆರೋಪಕ್ಕೆ ಇನ್ನಷ್ಟು ಬಲ ಸಿಕ್ಕಿದಂತಾಗಿದೆ.

ಅನುಮಾನಕ್ಕೆ ಕಾರಣವಾದ ಅರಣ್ಯ ಇಲಾಖೆಯ ನಡೆ: ಈ ಗಂಭೀರ ಪ್ರಕರಣದಲ್ಲಿ ಆರೋಪಿಗಳು ಜಾಮೀನು ಪಡೆದು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ ಎನ್ನುವ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಕಾಡುಕೋಣ ಬೇಟೆಗೆ ಬಳಸಿದ ಕೋವಿಯನ್ನು (ಬಂದೂಕು) ವಶಪಡಿಸಿಕೊಳ್ಳುವಲ್ಲಿ ಅರಣ್ಯಾಧಿಕಾರಿಗಳು ವಿಫಲರಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಒಂದೆಡೆ, ಅರಣ್ಯ ಇಲಾಖೆಯ ತನಿಖೆಯಲ್ಲಿ ಲೋಪಗಳಾದಲ್ಲಿ ಅಧಿಕಾರಿಗಳ ವಿರುದ್ಧವೇ ಕ್ರಮ ಕೈಗೊಳ್ಳುವಂತೆ ಮೇಲಧಿಕಾರಿಗಳಿಂದ ಸೂಚನೆ ಬಂದಿದೆ. ಇದರ ಬೆನ್ನಲ್ಲೇ ಆರೋಪಿಗಳು ಹಲ್ಲೆಯ ಆರೋಪ ಮಾಡಿರುವುದು ತನಿಖೆಯನ್ನು ಹಾದಿ ತಪ್ಪಿಸುವ ತಂತ್ರವೇ ಅಥವಾ ನಿಜಕ್ಕೂ ಅಧಿಕಾರಿಗಳು ಕಾನೂನು ಮೀರಿ ವರ್ತಿಸಿದ್ದಾರೆಯೇ ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ.

Related Articles

Latest Articles