ಕಡಬ ಪೇಟೆಯಲ್ಲಿ ಮದ್ಯ ಸೇವಿಸಿ ಸ್ಕೂಟರ್ ಚಲಾಯಿಸುತ್ತಿದ್ದ ಯುವಕನ ವಿರುದ್ದ FIR ದಾಖಲು

kadaba times

ಕಡಬ ಪೇಟೆಯ ದುರ್ಗಾಂಬಿಕಾ ದೇವಸ್ಥಾನದ ಬಳಿ ಮದ್ಯ ಸೇವಿಸಿ ಸಾರ್ವಜನಿಕರಿಗೆ ಅಪಾಯವಾಗುವಂತೆ ಸ್ಕೂಟರ್ ಚಲಾಯಿಸುತ್ತಿದ್ದ ಜೋಜಿ ಕೆ.ಜೆ ಎಂಬಾತನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

kadaba times
uniq

ಕಡಬ: ಸಾರ್ವಜನಿಕ ರಸ್ತೆಯಲ್ಲಿ ಅತಿಯಾಗಿ ಮದ್ಯ ಸೇವಿಸಿ, ಇತರರ ಜೀವಕ್ಕೆ ಅಪಾಯಕಾರಿಯಾಗುವ ರೀತಿಯಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಕಡಬ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಯ ವಿವರ: ಫೆ 20 ರಂದು  ಸಂಜೆ  ಪೊಲೀಸ್ ಠಾಣೆಯ ಸಿಬ್ಬಂದಿ ಮಹೇಶ್ ಎಚ್.ಬಿ. ಅವರು ಕರ್ತವ್ಯ ನಿಮಿತ್ತ ಕಡಬ ಪೇಟೆಯ ದುರ್ಗಾಂಬಿಕಾ ದೇವಸ್ಥಾನದ ಬಳಿ ಇದ್ದರು. ಈ ವೇಳೆ ಕಡಬ-ಉಪ್ಪಿನಂಗಡಿ ಸಾರ್ವಜನಿಕ ರಸ್ತೆಯಲ್ಲಿ ವ್ಯಕ್ತಿಯೊಬ್ಬ ತನ್ನ ಹೋಂಡಾ ಆಕ್ಟಿವಾ ಸ್ಕೂಟರನ್ನು  ಅಜಾಗರೂಕತೆಯಿಂದ ಮತ್ತು ಅಡ್ಡಾದಿಡ್ಡಿಯಾಗಿ ಚಲಾಯಿಸುತ್ತಿರುವುದು ಕಂಡುಬಂದಿದೆ.

kadaba times
kadaba times

ಅಪಘಾತ ಸಂಭವಿಸುವ ಮುನ್ಸೂಚನೆ ಅರಿತ ಪೊಲೀಸ್ ಸಿಬ್ಬಂದಿ ಕೂಡಲೇ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಸವಾರ ಸರಿಯಾಗಿ ಮಾತನಾಡಲಾಗದ ಸ್ಥಿತಿಯಲ್ಲಿದ್ದು, ಆತನ ಬಾಯಿಯಿಂದ ಮದ್ಯದ ವಾಸನೆ ಬರುತ್ತಿತ್ತು. ಕೂಡಲೇ ಆತನನ್ನು ಠಾಣೆಗೆ ಕರೆದೊಯ್ದು ಬ್ರೀತ್ ಅನಾಲಿಜರ್ (Breathalyzer) ಪರೀಕ್ಷೆಗೆ ಒಳಪಡಿಸಿದಾಗ, ಆತನ ದೇಹದಲ್ಲಿ ಮದ್ಯದ ಪ್ರಮಾಣವು 461Mg/100ml ಇರುವುದು ದೃಢಪಟ್ಟಿದೆ.

ವಶಕ್ಕೆ ಪಡೆದ ಆರೋಪಿಯನ್ನು ಕೋಡಿಂಬಾಳ ಗ್ರಾಮದ ಅಜ್ಜಿಕಟ್ಟೆ ನಿವಾಸಿ ಜೋಜಿ ಕೆ.ಜೆ (34 ವರ್ಷ) ಎಂದು ಗುರುತಿಸಲಾಗಿದೆ. ಈತ ಕೆ.ವಿ. ಜೋಯ್ ಎಂಬವರ ಪುತ್ರ ಎಂದು ತಿಳಿದುಬಂದಿದೆ. ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 2023 ರ ಸೆಕ್ಷನ್ 281 ಹಾಗೂ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 185 ರ ಅಡಿಯಲ್ಲಿ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಸ್ತುತ ಹೆಡ್ ಕಾನ್‌ಸ್ಟೆಬಲ್ ರೋಹಿತಾಶ್ವ ಕೆ. ಅವರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Related Articles

Latest Articles