RAMAKUNJA: ಅಜಾಗರೂಕತೆಯಿಂದ ಓಮ್ನಿ ಚಲಾಯಿಸಿ ಪಾದಚಾರಿಗೆ ಡಿಕ್ಕಿ: ಕಡಬ ಠಾಣೆಯಲ್ಲಿ FIR ದಾಖಲು

kadaba times

ಕಡಬ ತಾಲೂಕಿನ ಗೋಳಿತ್ತಡಿಯಲ್ಲಿ ಓಮ್ನಿ ವಾಹನ ಡಿಕ್ಕಿಯಾಗಿ ಪಾದಚಾರಿ ಶಿವಪ್ಪ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಲಕನ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

kadaba times
uniq

ಕಡಬ: ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಓಮ್ನಿ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಗೋಳಿತ್ತಡಿಯಲ್ಲಿ ನಡೆದಿದೆ.

ಹಳೆನೇರಂಕಿ ಗ್ರಾಮದ ನಿವಾಸಿ ಶಿವಪ್ಪ ಎಂಬವರು ಫೆಬ್ರವರಿ 21ರಂದು ಸಂಜೆ ಗೋಳಿತ್ತಡಿಯಿಂದ ರಾಮಕುಂಜ ಕಡೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ರಾಮಕುಂಜ ಕಡೆಯಿಂದ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬಂದ KA-21-P-7513 ಸಂಖ್ಯೆಯ ಓಮ್ನಿ ವಾಹನವು ಶಿವಪ್ಪ ಅವರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಶಿವಪ್ಪ ಅವರ ಬಲಗಾಲು, ಸೊಂಟ, ಎಡಗಾಲು, ತಲೆ ಮತ್ತು ಮುಖಕ್ಕೆ ರಕ್ತಸಿಕ್ತ ಗಾಯಗಳಾಗಿವೆ. ಘಟನೆಯನ್ನು ಕಂಡ ರಿಕ್ಷಾ ಚಾಲಕರಾದ ಮಾಧವ ಮತ್ತು ಧರ್ಮಪಾಲ ಅವರು ತಕ್ಷಣ ಶಿವಪ್ಪ ಅವರ ಪತ್ನಿ ಶೈಲಜಾ ಅವರಿಗೆ ಮಾಹಿತಿ ನೀಡಿದ್ದಾರೆ.

kadaba times
kadaba times

ಗಾಯಾಳುವನ್ನು ತಕ್ಷಣವೇ ಕೊಯಿಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಗಾಯದ ತೀವ್ರತೆ ಹೆಚ್ಚಿದ್ದರಿಂದ ವೈದ್ಯರ ಸಲಹೆಯಂತೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಸದ್ಯ ಶಿವಪ್ಪ ಅವರು ಅಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಓಮ್ನಿ ಚಾಲಕ ಸಂಜೀವ ಎಂಬಾತನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಗಾಯಾಳುವಿನ ಪತ್ನಿ ಶೈಲಜಾ ಅವರು ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಅ.ಕ್ರ 22/2026, ಕಲಂ: 281, 125(a) BNS-2023 ಅಡಿಯಲ್ಲಿ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related Articles

Latest Articles