ಶಾಲೆಗಳಲ್ಲಿ 6 ಚರಣಗಳ ‘ವಂದೇ ಮಾತರಂ’ ಕಡ್ಡಾಯ: ಕೇಂದ್ರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

kadaba times

ಶಾಲೆಗಳಲ್ಲಿ ವಂದೇ ಮಾತರಂನ ಎಲ್ಲಾ ಆರು ಚರಣಗಳನ್ನು ಹಾಡುವುದನ್ನು ಕಡ್ಡಾಯಗೊಳಿಸಿರುವ ಕೇಂದ್ರದ ಶಿಷ್ಟಾಚಾರ ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ.

kadaba times
uniq

ಬೆಂಗಳೂರು: ದೇಶದ ಶಾಲೆಗಳಲ್ಲಿ ಪ್ರತಿದಿನ ‘ವಂದೇ ಮಾತರಂ’ ಗೀತೆಯ ಎಲ್ಲಾ ಆರು ಚರಣಗಳನ್ನು ಕಡ್ಡಾಯವಾಗಿ ಹಾಡಬೇಕು ಎಂದು ಕೇಂದ್ರ ಸರ್ಕಾರ ಹೊರಡಿಸಿರುವ ಶಿಷ್ಟಾಚಾರ ಮಾರ್ಗಸೂಚಿಗಳನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದೆ.

ಬೆಂಗಳೂರಿನ ವಕೀಲರಾದ ಸೋಮಶೇಖರ್ ರಾಜವಂಶಿ ಅವರು ಈ ಅರ್ಜಿ ಸಲ್ಲಿಸಿದ್ದು, ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ, ಶಿಕ್ಷಣ ಸಚಿವಾಲಯ, ರಾಜ್ಯ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗವನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ. ಈ ಅರ್ಜಿಯು ಶೀಘ್ರದಲ್ಲೇ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬರುವ ಸಾಧ್ಯತೆಯಿದೆ.

ಅರ್ಜಿಯಲ್ಲಿನ ಪ್ರಮುಖ ಆಕ್ಷೇಪಣೆಗಳು:

  • ಸಂವಿಧಾನದ ಆಶಯಕ್ಕೆ ವಿರುದ್ಧ: ಸಂವಿಧಾನ ರಚನಾ ಸಭೆಯು ವಂದೇ ಮಾತರಂ ಗೀತೆಯ ಒಟ್ಟು ಆರು ಚರಣಗಳಲ್ಲಿ ಕೇವಲ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ನಿರ್ಧರಿಸಿತ್ತು. ಆದರೆ, ಪ್ರಸ್ತುತ ಗೃಹ ಇಲಾಖೆಯ ಆದೇಶವು ಎಲ್ಲಾ ಆರು ಚರಣಗಳನ್ನು ಕಡ್ಡಾಯಗೊಳಿಸಿರುವುದು ನಿಯಮಬಾಹಿರ ಎಂದು ಅರ್ಜಿದಾರರು ವಾದಿಸಿದ್ದಾರೆ.

    kadaba times
    kadaba times
  • ಧಾರ್ಮಿಕ ಅಂಶಗಳ ಸೇರ್ಪಡೆ: ಗೀತೆಯ 3 ರಿಂದ 6ನೇ ಚರಣಗಳಲ್ಲಿ ಹಿಂದೂ ದೇವತೆಗಳಾದ ದುರ್ಗಾ, ಲಕ್ಷ್ಮೀ (ಕಮಲಾ) ಮತ್ತು ಸರಸ್ವತಿ (ವಾಣಿ) ಅವರ ಸ್ತುತಿಯಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಇದನ್ನು ಕಡ್ಡಾಯವಾಗಿ ಹಾಡುವುದು ಸಂವಿಧಾನದ ಪರಿಚ್ಛೇದ 25 (ಧಾರ್ಮಿಕ ಸ್ವಾತಂತ್ರ್ಯ), 28 (ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಬೋಧನೆ ನಿಷೇಧ) ಮತ್ತು 14ರ (ಸಮಾನತೆ) ಉಲ್ಲಂಘನೆಯಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

  • ಪರಿಣಾಮಗಳ ಅಧ್ಯಯನಕ್ಕೆ ಮನವಿ: ಈ ಆದೇಶವು ಅಲ್ಪಸಂಖ್ಯಾತ ಸಮುದಾಯದವರ ಮತ್ತು ದೇವದ ನಂಬಿಕೆಯಿಲ್ಲದ ಕುಟುಂಬಗಳ ಮಕ್ಕಳ ಮೇಲೆ ಯಾವ ರೀತಿಯ ಮಾನಸಿಕ ಪರಿಣಾಮ ಬೀರಬಹುದು ಎಂಬುದನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಮತ್ತು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಲಾಗಿದೆ.

“ವಂದೇ ಮಾತರಂ ಗೀತೆಯನ್ನು ಯಾವುದೇ ಧಾರ್ಮಿಕ ಅಂಶಗಳನ್ನು ಒಳಗೊಳ್ಳದ ಮೊದಲ ಎರಡು ಚರಣಗಳಿಗೆ ಮಾತ್ರ ಸೀಮಿತಗೊಳಿಸಬೇಕು. ಈ ನಿಟ್ಟಿನಲ್ಲಿ ಹಳೆಯ ಶಿಷ್ಟಾಚಾರದ ಆದೇಶವನ್ನು ಪರಿಷ್ಕರಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು,” ಎಂದು ಅರ್ಜಿದಾರರು ನ್ಯಾಯಾಲಯವನ್ನು ಪ್ರಾರ್ಥಿಸಿದ್ದಾರೆ.

Related Articles

Latest Articles