ಎಡಮಂಗಲ ಗ್ರಾಮ ಕಡಬ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿಸಿ: ಗೃಹ ಸಚಿವರಿಗೆ ಸುಳ್ಯ ಶಾಸಕಿ ಪತ್ರ ಬರೆದು  ಶಿಫಾರಸ್ಸು

ಶಾಸಕರಿಗೆ ಮನವಿ ಸಲ್ಲಿಸಿದ್ದ ಗ್ರಾಮಸ್ಥ

kadaba times

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲ ಗ್ರಾಮವನ್ನು ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಕಡಬ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿಸುವಂತೆ ಗ್ರಾಮಸ್ಥರ ಪರವಾಗಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

kadaba times
uniq

ಕಡಬ:  ಭೌಗೋಳಿಕ ಅಂತರ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲ ಗ್ರಾಮವನ್ನು ಪ್ರಸ್ತುತ ಇರುವ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಹೊರತುಪಡಿಸಿ, ಹತ್ತಿರದ ಕಡಬ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರ್ಪಡೆಗೊಳಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಈ ಸಂಬಂಧ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ರಾಜ್ಯದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದು ಶಿಫಾರಸ್ಸು ಮಾಡಿದ್ದಾರೆ.

ದೂರದ ಬೆಳ್ಳಾರೆಗಿಂತ ಹತ್ತಿರದ ಕಡಬವೇ ಲೇಸು:  ಎಡಮಂಗಲ ಗ್ರಾಮವು ಪ್ರಸ್ತುತ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಟ್ಟಿದೆ. ಆದರೆ, ಎಡಮಂಗಲ ಕೇಂದ್ರದಿಂದ ಬೆಳ್ಳಾರೆ ಪೊಲೀಸ್ ಠಾಣೆಗೆ ಇರುವ ದೂರ ಸುಮಾರು 13 ಕಿ.ಮೀ.. ಇದಕ್ಕೆ ವ್ಯತಿರಿಕ್ತವಾಗಿ, ಕಡಬ ಪೊಲೀಸ್ ಠಾಣೆಯು ಎಡಮಂಗಲದಿಂದ ಕೇವಲ 6 ಕಿ.ಮೀ. ದೂರದಲ್ಲಿದೆ. ತುರ್ತು ಸಂದರ್ಭಗಳಲ್ಲಿ ಗ್ರಾಮಸ್ಥರಿಗೆ ಹತ್ತಿರದ ಠಾಣೆಯನ್ನು ತಲುಪುವುದು ಇದರಿಂದ ಸುಲಭವಾಗಲಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

kadaba times
kadaba times

ಗ್ರಾಮ ಸಭೆಯಲ್ಲಿ ನಿರ್ಣಯ: ಈ ಬೇಡಿಕೆಯು ಇಂದು ನಿನ್ನೆಯದಲ್ಲ. ಕಳೆದ 2025ರ ಅಕ್ಟೋಬರ್ 16ರಂದು ನಡೆದ ಎಡಮಂಗಲ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಈ ಬಗ್ಗೆ ಅಧಿಕೃತವಾಗಿ ಬೇಡಿಕೆ ಮಂಡಿಸಿದ್ದರು. ಗ್ರಾಮ ಸಭೆಯ ನಿರ್ಣಯದಂತೆ ಎಡಮಂಗಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು 2025ರ ನವೆಂಬರ್ 26ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (SP) ಈ ಕುರಿತು ಪತ್ರ ಬರೆದು ಪ್ರಸ್ತಾವನೆ ಸಲ್ಲಿಸಿದ್ದರು.

ಶಾಸಕರಿಗೆ ಮನವಿ ಸಲ್ಲಿಸಿದ್ದ ಗ್ರಾಮಸ್ಥ : ಗ್ರಾಮದ ನಿವಾಸಿ ವಿನಯಚಂದ್ರ ಅವರು ಈ ಮರು ವಿಂಗಡಣೆ ಕುರಿತು ನಿರಂತರವಾಗಿ ಪತ್ರ ವ್ಯವಹಾರ ನಡೆಸುತ್ತಿದ್ದಾರೆ. ಇವರು ಎಡಮಂಗಲ ಗ್ರಾಮ ಪಂಚಾಯತ್ ಹಾಗೂ ಶಾಸಕರಿಗೂ ಈ ಬಗ್ಗೆ ಮನವಿ ಸಲ್ಲಿಸಿ, ಸಾರ್ವಜನಿಕ ಸುರಕ್ಷತೆ ಮತ್ತು ಆಡಳಿತಾತ್ಮಕ ಅನುಕೂಲಕ್ಕಾಗಿ ಈ ಬದಲಾವಣೆ ಅತ್ಯಗತ್ಯ ಎಂದು ಪ್ರತಿಪಾದಿಸಿದ್ದರು.

ಗೃಹ ಸಚಿವರಿಗೆ ಶಾಸಕಿ ಪತ್ರ: ಈ  ಮನವಿಗೆ ಸ್ಪಂದಿಸಿರುವ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಾರ್ಚ್ 9, 2026 ರಂದು ಗೃಹ ಸಚಿವರಿಗೆ ಪತ್ರ ಬರೆದು, “ಎಡಮಂಗಲ ಗ್ರಾಮವನ್ನು ಕಡಬ ಠಾಣಾ ವ್ಯಾಪ್ತಿಗೆ ಒಳಪಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು” ಎಂದು ಕೋರಿದ್ದಾರೆ. ಈ ಪತ್ರದ ಪ್ರತಿಯನ್ನು ಪೊಲೀಸ್ ಮಹಾ ನಿರ್ದೇಶಕರಿಗೂ (DG & IGP) ರವಾನಿಸಿ ಸೂಕ್ತ ಕ್ರಮ ಕೈಗೊಳ್ಳಲು ವಿನಂತಿಸಿದ್ದಾರೆ.

Related Articles

Latest Articles