
ಕಡಬ ತಾಲೂಕಿನ ಅಲಂಕಾರು ಗ್ರಾಮದ ನಗ್ರಿಯಲ್ಲಿ ಸತೀಶ ಎಂಬುವವರು ತಮ್ಮ ತೋಟದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕಡಬ: ತಾಲೂಕಿನ ಅಲಂಕಾರು ಗ್ರಾಮದ ನಗ್ರಿ ಎಂಬಲ್ಲಿ ವ್ಯಕ್ತಿಯೊಬ್ಬರು ತಮ್ಮ ತೋಟದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ (ಮಾ. 11) ನಡೆದಿದೆ.
ಅಲಂಕಾರು ಗ್ರಾಮದ ನಗ್ರಿ ನಿವಾಸಿ ಸತೀಶ ಎಂಬುವವರೇ ಮೃತಪಟ್ಟ ವ್ಯಕ್ತಿ. ಇವರು ಮಾರ್ಚ್ 11ರಂದು ಬೆಳಿಗ್ಗೆ ಸುಮಾರು 7:00 ಗಂಟೆಗೆ ತಮ್ಮ ತೋಟಕ್ಕೆ ತೆರಳಿದ್ದರು. ಆದರೆ, 7:45 ಗಂಟೆಯಾದರೂ ಅವರು ಮನೆಗೆ ಹಿಂತಿರುಗದಿದ್ದಾಗ, ಆತಂಕಗೊಂಡ ಅವರ ಪತ್ನಿ, ಮೊಮ್ಮಗಳಾದ ರಚನಾ ಮತ್ತು ಮೊಮ್ಮಗ ರಾಕೇಶ್ ತೋಟಕ್ಕೆ ಹುಡುಕಿಕೊಂಡು ಹೋಗಿದ್ದಾರೆ.


ಈ ಸಂದರ್ಭದಲ್ಲಿ ಸತೀಶ ಅವರು ತೋಟದಲ್ಲಿದ್ದ ಕಾಡು ಮರದ ಕೊಂಬೆಗೆ ತಮ್ಮ ಲುಂಗಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಈ ಬಗ್ಗೆ ಮೃತರ ಪುತ್ರಿ ಕಾಂಚನಾ ಅವರು ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು UDR ಸಂಖ್ಯೆ 08/2026, ಕಲಂ 194 BNSS-2023 ರಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
