elephant tusks-ಆನೆದಂತ ಡೀಲ್ : ಕಡಬದ ಮಟನ್ ಸ್ಟಾಲ್ ಮಾಲೀಕ ಜೈಲುಪಾಲು

kadaba times

ಕಡಬ: ಆನೆದಂತವನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಜಾಲವೊಂದನ್ನು ಭೇದಿಸಿರುವ ಪೊಲೀಸ್ ಅರಣ್ಯ ಸಂಚಾರಿ ದಳ (Forest Mobile Squad), ಕಡಬದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

kadaba times
uniq

ಕಡಬ ಪೇಟೆಯಲ್ಲಿ ಮಟನ್ ಸ್ಟಾಲ್ ನಡೆಸುತ್ತಿದ್ದ ತಾಜು ಬಂಧಿತ ಆರೋಪಿ. ಈತ ಆನೆದಂತಗಳನ್ನು ತಂದು ಹಣಕ್ಕಾಗಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಎನ್ನಲಾಗಿದೆ.

ಖಚಿತ ಮಾಹಿತಿಯ ಮೇರೆಗೆ ಸೋಮವಾರ ಮಧ್ಯಾಹ್ನ ಕಡಬಕ್ಕೆ ಆಗಮಿಸಿದ ಮಂಗಳೂರಿನ ಪೊಲೀಸ್ ಅರಣ್ಯ ಸಂಚಾರಿ ದಳದ ತಂಡವು ಕಾರ್ಯಾಚರಣೆ ನಡೆಸಿತು.  ಆರೋಪಿಯನ್ನು ದಂತಗಳ ಸಮೇತ ವಶಕ್ಕೆ ಪಡೆಯಲಾಗಿದೆ,ಆನೆ ದಂತದ ತೂಕ ಅಂದಾಜು 26 ಕೆ.ಜೆ ಎಂದು ಹೇಳಲಾಗುತ್ತಿದೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ. ಈ ಪ್ರಕರಣದಲ್ಲಿ ಇನ್ನು ಕೆಲವರ ಬಂಧನ ಸಾಧ್ಯತೆ ಇದೆ .

kadaba times
kadaba times

ಕಡಬ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ವನ್ಯಜೀವಿಗಳಿಗೆ ಸಂಬಂಧಿಸಿದ ಅಕ್ರಮ ಚಟುವಟಿಕೆಗಳು ಕೇಳಿ ಬರುತ್ತಿದ್ದು, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ.

ಈ ಕಾರ್ಯಾಚರಣೆಯಲ್ಲಿ ಆನೆದಂತದ ಮೂಲ ಯಾವುದು? ಇದರ ಹಿಂದೆ ಬೇರೆ ಯಾರಾದರೂ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆಯೇ? ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಹೆಚ್ಚಿನ  ಮಾಹಿತಿಗಾಗಿ ನಮ್ಮ ವೆಬ್‌ಸೈಟ್ ಅನ್ನು ಗಮನಿಸುತ್ತಿರಿ.

Related Articles

Latest Articles