Mangaluru POCSO Court -ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

kadaba times

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ನ್ಯಾಯಾಲಯ 20 ವರ್ಷ ಕಠಿಣ ಸಜೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

kadaba times
uniq

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಳ್ಳಾಲ ಮೂಲದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷಗಳ ಕಠಿಣ ಸಜೆ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.

ಉಳ್ಳಾಲದ ನಿವಾಸಿ ಅಬೂಬಕರ್ (53) ಶಿಕ್ಷೆಗೆ ಗುರಿಯಾದ ಆರೋಪಿ. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಪೋಕ್ಸೊ-ಎಫ್ ಟಿ ಎಸ್ ಸಿ 2) ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು ಈ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ.

ಪ್ರಕರಣದ ಹಿನ್ನೆಲೆ:

2025ರ ಮಾರ್ಚ್ 29ರಂದು ನೆರೆಮನೆಯ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಅಬೂಬಕರ್ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಅಷ್ಟೇ ಅಲ್ಲದೆ, ಈ ವಿಷಯವನ್ನು ಯಾರಿಗೂ ತಿಳಿಸದಂತೆ ಬಾಲಕಿಗೆ ಪ್ರಾಣ ಬೆದರಿಕೆ ಹಾಕಿದ್ದ. ತನಿಖೆಯ ವೇಳೆ ಆರೋಪಿಯು ಈ ಹಿಂದೆಯೂ ಮೂರು ಬಾರಿ ಬಾಲಕಿಯ ಮೇಲೆ ದೌರ್ಜನ್ಯ ಎಸಗಿರುವುದು ಬೆಳಕಿಗೆ ಬಂದಿತ್ತು.

kadaba times
kadaba times

ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್ ಶಿವಕುಮಾರ್ ಬಿ. ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶರು ಮಂಗಳವಾರದಂದು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಬಿಎನ್ ಎಸ್ ಕಲಂ 64(1) ಹಾಗೂ ಪೋಕ್ಸೊ ಕಾಯಿದೆಯ ಕಲಂ 6 ರಡಿ ಆರೋಪಿಗೆ 20 ವರ್ಷಗಳ ಕಠಿನ ಸಜೆ ಹಾಗು 45,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ 4 ತಿಂಗಳು ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ಬಿಎನ್ ಎಸ್ ಕಲಂ 351(2) ನಡಿಯಲ್ಲಿ 3 ತಿಂಗಳ ಸಾದಾ ಸಜೆ ಮತ್ತು 5,000 ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ 15 ದಿನ ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.

ಸಂತ್ರಸ್ತೆಗೆ ದಂಡದ ಮೊತ್ತವಾದ 50,000 ರೂ. ಹಾಗೂ ಪ್ರತ್ಯೇಕವಾಗಿ 3.50 ಲ.ರೂ.ಗಳನ್ನು ಪರಿಹಾರವಾಗಿ ನೀಡುವಂತೆ ನ್ಯಾಯಾಧೀಶರು ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಪೋಕ್ಸೋ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದಿಸಿದ್ದರು.

Related Articles

Latest Articles