ಮದುವೆಯಾಗುವುದಾಗಿ ನಂಬಿಸಿ ಯುವತಿಯ ಖಾಸಗಿ ವಿಡಿಯೋ ಹಂಚಿಕೆ: ಇಬ್ಬರ ವಿರುದ್ದ ಉಪ್ಪಿನಂಗಡಿ ಠಾಣೆಯಲ್ಲಿ FIR ದಾಖಲು

kadaba times

ಮದುವೆಯಾಗುವುದಾಗಿ ನಂಬಿಸಿ ಯುವತಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಹರಿಬಿಟ್ಟ ಸುಶಾಂತ್ ಪೂಜಾರಿ ಹಾಗೂ ಆತನ ಸಹೋದರಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು.

kadaba times
uniq

ಉಪ್ಪಿನಂಗಡಿ: ಪ್ರೀತಿಸುವುದಾಗಿ ನಂಬಿಸಿ ಯುವತಿಯೋರ್ವಳ ಖಾಸಗಿ ವಿಡಿಯೋವನ್ನು ರೆಕಾರ್ಡ್ ಮಾಡಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಗಂಭೀರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ. ಈ ಸಂಬಂಧ ಆರೋಪಿ ಸುಶಾಂತ್ ಪೂಜಾರಿ ಹಾಗೂ ಆತನ ಸಹೋದರಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

 ಯುವತಿಗೆ ಸುಮಾರು ಆರು ತಿಂಗಳ ಹಿಂದೆ ಇನ್‌ಸ್ಟಾಗ್ರಾಮ್ (Instagram) ಮೂಲಕ ಸುಶಾಂತ್ ಪೂಜಾರಿಯ ಪರಿಚಯವಾಗಿತ್ತು. ತಾನು ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸದ್ಯ ಊರಿನಲ್ಲಿದ್ದೇನೆ ಎಂದು ನಂಬಿಸಿದ್ದ ಸುಶಾಂತ್, ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದ. ಈ ಸ್ನೇಹ ಕಾಲಕ್ರಮೇಣ ಪ್ರೀತಿಗೆ ತಿರುಗಿ, ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು ಎನ್ನಲಾಗಿದೆ.

ಪ್ರೀತಿಯ ನಾಟಕವಾಡಿದ್ದ ಸುಶಾಂತ್, ಯುವತಿಗೆ ಪದೇ ಪದೇ ಖಾಸಗಿ ವಿಡಿಯೋ ಕಳುಹಿಸುವಂತೆ ಹಾಗೂ ನಗ್ನವಾಗಿ ವಿಡಿಯೋ ಕಾಲ್ ಮಾಡುವಂತೆ ಒತ್ತಾಯಿಸುತ್ತಿದ್ದ. ಮದುವೆಯಾಗುವ ಭರವಸೆ ನೀಡಿದ್ದರಿಂದ ಆತನ ಮಾತನ್ನು ನಂಬಿದ ಯುವತಿ, ತಾನು ಸ್ನಾನ ಮಾಡುವ ಸಂದರ್ಭದಲ್ಲಿ ವಿಡಿಯೋ ಕಾಲ್ ಮಾಡಿದ್ದಳು ಎನ್ನಲಾಗಿದೆ.

kadaba times
kadaba times

ಈ ಸಂದರ್ಭವನ್ನು ಬಳಸಿಕೊಂಡ ಆರೋಪಿ ಸುಶಾಂತ್, ಯುವತಿಯ ಖಾಸಗಿ ದೃಶ್ಯಗಳನ್ನು ಗುಟ್ಟಾಗಿ ರೆಕಾರ್ಡ್ ಮಾಡಿಕೊಂಡಿದ್ದಲ್ಲದೆ, ಅದನ್ನು ವಾಟ್ಸ್‌ಅಪ್ (WhatsApp) ಮೂಲಕ ಇತರರಿಗೆ ಹಂಚಿ ವಿಕೃತಿ ಮೆರೆದಿದ್ದಾನೆ. ಈ ಕೃತ್ಯಕ್ಕೆ ಆರೋಪಿಯ ಸಹೋದರಿಯೂ ಸಹಕಾರ ನೀಡಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಿಡಿಯೋ ವೈರಲ್ ಆಗಿರುವುದು ತಿಳಿಯುತ್ತಿದ್ದಂತೆ ಆಘಾತಕ್ಕೊಳಗಾದ ಯುವತಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಸುಶಾಂತ್ ಪೂಜಾರಿ ಹಾಗೂ ಆತನ ತಂಗಿಯ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related Articles

Latest Articles