2nd PUC Result 2026:ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್‌ನ ದಿಶಾಗೆ ರಾಜ್ಯಕ್ಕೆ ಮೊದಲ ಸ್ಥಾನ

kadaba times

2026ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸಾಧಕಿಯ ಸಂಪೂರ್ಣ ವಿವರ ಇಲ್ಲಿದೆ

kadaba times
uniq

ರಾಜ್ಯಾದ್ಯಂತ ಕುತೂಹಲ ಮೂಡಿಸಿದ್ದ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಮೂಡುಬಿದಿರೆಯ ಆಳ್ವಾಸ್ ಪಿಯು ಕಾಲೇಜು ರಾಜ್ಯಮಟ್ಟದಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿದೆ.

ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

kadaba times
kadaba times

ನೂರಕ್ಕೆ ನೂರು ಅಂಕ: ಮೂಡುಬಿದಿರೆ ಮೂಲದವರೇ ಆಗಿರುವ ದಿಶಾ ಅಪ್ರತಿಮ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದ ಆರೂ ವಿಷಯಗಳಲ್ಲಿ 600 (ಶೇ.100) ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರ ಈ ಸಾಧನೆಯು ಇಡೀ ರಾಜ್ಯದ ಗಮನ ಸೆಳೆದಿದೆ.

ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮ ಮನೆಮಾಡಿದೆ. ವಿದ್ಯಾರ್ಥಿನಿಯ ಸಾಧನೆಯನ್ನು ಕಂಡು ಹರ್ಷ ವ್ಯಕ್ತಪಡಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ದಿಶಾ ಅವರಿಗೆ ಅಭಿನಂದಿಸಿದರು.

Related Articles

Latest Articles