ದಕ್ಷಿಣ ಕನ್ನಡದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಡಿಜಿಪಿ ಎಂ.ಎ. ಸಲೀಂ ಹೇಳಿದ್ದೇನು?

kadaba times

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ| ಎಂ.ಎ. ಸಲೀಂ ಶ್ಲಾಘಿಸಿದ್ದಾರೆ. ಮಂಗಳೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಅಧಿಕಾರಿಗಳಿಗೆ ಮಹತ್ವದ ನಿರ್ದೇಶನ ನೀಡಿದರು

kadaba times
uniq

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಕಾನೂನು ಮತ್ತು ಸುವ್ಯವಸ್ಥೆ ಉತ್ತಮ ಸ್ಥಿತಿಯಲ್ಲಿದ್ದು, ಇದೇ ರೀತಿಯ ಶಾಂತಿ ಮತ್ತು ಸೌಹಾರ್ದತೆಯನ್ನು ಮುಂದೆಯೂ ಕಾಪಾಡಿಕೊಂಡು ಹೋಗುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ| ಎಂ.ಎ. ಸಲೀಂ ಅವರು ಇಲಾಖಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಂಗಳೂರಿಗೆ ಭೇಟಿ ನೀಡಿದ ಅವರು, ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಜಿಲ್ಲೆಯ ಪೊಲೀಸ್ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳು ಹಾಗೂ ಭದ್ರತಾ ವ್ಯವಸ್ಥೆಗಳ ಕುರಿತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯಕ್ಕೆ ಆದ್ಯತೆ

ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಜಿಪಿ, “ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಯಾವುದೇ ಅಹಿತಕರ ಘಟನೆಗಳಿಲ್ಲದೆ ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ. ಪೊಲೀಸರು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಳ್ಳಬೇಕು. ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ಮೂಲಕ ಶಾಂತಿ ಕಾಪಾಡುವ ಪ್ರಕ್ರಿಯೆ ನಿರಂತರವಾಗಿರಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

kadaba times
kadaba times
ಪೊಲೀಸ್ ಸಿಬ್ಬಂದಿ ವರ್ಗಾವಣೆ ಬಗ್ಗೆ ಭರವಸೆ

ಉತ್ತರ ಕರ್ನಾಟಕ ಭಾಗದ ಅನೇಕ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬದವರು ತಮ್ಮ ಜಿಲ್ಲೆಗಳಿಗೆ ವರ್ಗಾವಣೆ ಕೋರಿ ಸಲ್ಲಿಸಿರುವ ಮನವಿಗಳ ಬಗ್ಗೆಯೂ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಈ ಕುರಿತು ಪ್ರತಿಕ್ರಿಯಿಸಿದ ಅವರು, “ಸಿಬ್ಬಂದಿಗಳ ವರ್ಗಾವಣೆ ಬೇಡಿಕೆಗಳನ್ನು ಹಂತ ಹಂತವಾಗಿ ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ವಿವಾದಾತ್ಮಕ ಪ್ರಶ್ನೆಗೆ ಮೌನವ್ರತ

ಇದೇ ವೇಳೆ, ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಡಿ.ಸಿ.ಆರ್.ಇ. ಎಸ್ಪಿ ಎಸ್.ಎಸ್. ಕಾಶಿ ಅವರು ಸಲ್ಲಿಸಿದ್ದಾರೆ ಎನ್ನಲಾದ ದೂರಿನ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆಗಳನ್ನು ಕೇಳಿದರು. ಆದರೆ, ಈ ವಿವಾದಾತ್ಮಕ ವಿಷಯದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಡಿಜಿಪಿ ಡಾ| ಎಂ.ಎ. ಸಲೀಂ ಅವರು ಮೌನವಾಗಿಯೇ ಸ್ಥಳದಿಂದ ನಿರ್ಗಮಿಸಿದರು.

Related Articles

Latest Articles