ಕಡಬ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಐವರು ಸಿಬ್ಬಂದಿಗಳಿಗೆ ಬೀಳ್ಕೊಡುಗೆ

kadaba times

ಕಡಬದ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಭಾಂಗಣದಲ್ಲಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ವತಿಯಿಂದ ವರ್ಗಾವಣೆಗೊಂಡ SKDRDP ವಲಯ ಮೇಲ್ವಿಚಾರಕರಿಗೆ ಬೀಳ್ಕೊಡುಗೆ ಸಮಾರಂಭ ಜರಗಿತು.

kadaba times
uniq

ಕಡಬ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಕಡಬ ತಾಲೂಕಿನ ವಿವಿಧ ವಲಯಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿ, ಪ್ರಸ್ತುತ ವರ್ಗಾವಣೆಗೊಂಡಿರುವ ವಲಯ ಮೇಲ್ವಿಚಾರಕರುಗಳಿಗೆ ಹಾಗೂ ಸಿಬ್ಬಂದಿಗಳಿಗೆ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಕಡಬ ಇದರ ವತಿಯಿಂದ ಏಪ್ರಿಲ್ 18ರಂದು ಅಭಿನಂದನಾ ಪೂರ್ವಕ ಬೀಳ್ಕೊಡುಗೆ ಸಮಾರಂಭ ಜರಗಿತು.

ಕಡಬದ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಸಂಸ್ಥೆಯ ಬೆಳವಣಿಗೆಗೆ ಶ್ರಮಿಸಿದ ಅಧಿಕಾರಿಗಳನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ವೀಣಾ ಕೆ (ಸವಣೂರು ವಲಯ ಮೇಲ್ವಿಚಾರಕಿ),  ಸುಜಾತ ಕೆ ( ಆಲಂಕಾರು ವಲಯ ಮೇಲ್ವಿಚಾರಕಿ), ಆನಂದ ಡಿ ಬಿ: (ನೆಲ್ಯಾಡಿ ವಲಯ ಮೇಲ್ವಿಚಾರಕ), ಜಯಶ್ರೀ( ಗೋಳಿತೊಟ್ಟು ವಲಯ ಮೇಲ್ವಿಚಾರಕಿ), ಶೀಲಾವತಿ( ಲೆಕ್ಕ ಪರಿಶೋಧಕಿ)  ಅವರ ಸೇವೆಯನ್ನು ಸ್ಮರಿಸಿ, ಜನ ಜಾಗೃತಿ ವೇದಿಕೆಯ ವತಿಯಿಂದ ಅಭಿನಂದಿಸಿ ಬೀಳ್ಕೊಡಲಾಯಿತು

kadaba times
kadaba times

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ಜನ ಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ ಸವಣೂರು ವಹಿಸಿದ್ದರು. ವೇದಿಕೆಯಲ್ಲಿ ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಜಿಲ್ಲಾ ಜನ ಜಾಗೃತಿ ವೇದಿಕೆಯ ಸದಸ್ಯ ಶಿವಪ್ರಸಾದ್ ರೈ ಮೈಲೇರಿ, ಕಡಬ ವಲಯ ಮೇಲ್ವಿಚಾರಕ ವಿಜೇಶ್ ಜೈನ್, ಬಿಳಿನೆಲೆ ವಲಯ ಮೇಲ್ವಿಚಾರಕ ರವಿ ಪ್ರಸಾದ್ ಕೆ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕಡಬ ಯೋಜನಾ ಕಛೇರಿಯ ಸಿಬ್ಬಂದಿಗಳಾದ ಸುಜಾತ ಮತ್ತು ಸಂತೋಷ್ ಉಪಸ್ಥಿತರಿದ್ದು, ವರ್ಗಾವಣೆಗೊಂಡ ಸಹೋದ್ಯೋಗಿಗಳಿಗೆ ಶುಭ ಹಾರೈಸಿದರು. ಸಮಾಜಮುಖಿ ಕಾರ್ಯಗಳಲ್ಲಿ ಯೋಜನೆಯ ಅಧಿಕಾರಿಗಳ ಪಾತ್ರ ಮತ್ತು ಜನ ಜಾಗೃತಿ ವೇದಿಕೆಯೊಂದಿಗೆ ಅವರ ಸಮನ್ವಯತೆಯನ್ನು ಕಾರ್ಯಕ್ರಮದಲ್ಲಿ ಶ್ಲಾಘಿಸಲಾಯಿತು.

Related Articles

Latest Articles