ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಚಾಲಕ ಪರಾರಿ:ಬಲ್ಯದ ಸವಾರನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

kadaba times

ಕೊಕ್ಕಡದ ಉಪ್ಪಾರಪಳಿಕೆಯಲ್ಲಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಣೇಶ್ ಆಚಾರ್ಯ ಗಾಯಗೊಂಡಿದ್ದು, ಆಂಬುಲೆನ್ಸ್ ವಿಳಂಬಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ

kadaba times
uniq

ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು ಚಾಲಕ ನಿಲ್ಲಿಸದೆ ಪರಾರಿಯಾದ ಘಟನೆ ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಎಂಬಲ್ಲಿ ಏಪ್ರಿಲ್ 28ರಂದು ಬೆಳಿಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ, ಬಲ್ಯ ನಿವಾಸಿ ಗಣೇಶ್ ಆಚಾರ್ಯ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಬಲ್ಯ ನಿವಾಸಿಯಾದ ಗಣೇಶ್ ಆಚಾರ್ಯ ಅವರು ಕೊಕ್ಕಡ ಕೆನರಾ ಬ್ಯಾಂಕ್‌ನಲ್ಲಿ ಚಿನ್ನದ ಪರೀಕ್ಷಕರಾಗಿ (Gold Appraiser) ಕೆಲಸ ಮಾಡುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಅವರು ಕೊಕ್ಕಡದಿಂದ ಗೋಳಿತ್ತೊಟ್ಟು ಮಾರ್ಗವಾಗಿ ಉಪ್ಪಿನಂಗಡಿಗೆ ತೆರಳುತ್ತಿದ್ದಾಗ, ಉಪ್ಪಾರಪಳಿಕೆ ಬಳಿ ವೇಗವಾಗಿ ಬಂದ ಅಪರಿಚಿತ ಕಾರೊಂದು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಗಣೇಶ್ ಅವರು ಬೈಕ್ ಸಹಿತ ರಸ್ತೆಗೆ ಬಿದ್ದಿದ್ದಾರೆ. ಆದರೆ, ಮಾನವೀಯತೆ ಮರೆತ ಕಾರು ಚಾಲಕ ವಾಹನವನ್ನು ನಿಲ್ಲಿಸದೆ ಸ್ಥಳದಿಂದ ವೇಗವಾಗಿ ಪರಾರಿಯಾಗಿದ್ದಾನೆ.

kadaba times
kadaba times

ಅಪಘಾತದ ಬಳಿಕ ಸ್ಥಳೀಯರು ತಕ್ಷಣ ಧಾವಿಸಿ ಗಾಯಾಳು ಗಣೇಶ್ ಆಚಾರ್ಯ ಅವರನ್ನು ಕೊಕ್ಕಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದರು.ಆದರೆ, ದುರಾದೃಷ್ಟವಶಾತ್ ಕೊಕ್ಕಡ ಸರ್ಕಾರಿ ಆಸ್ಪತ್ರೆಯ 108 ಆಂಬುಲೆನ್ಸ್ ಕಳೆದ ಮೂರು ದಿನಗಳಿಂದ ದುರಸ್ತಿಗಾಗಿ ಗ್ಯಾರೇಜ್‌ನಲ್ಲಿತ್ತು. ಹೀಗಾಗಿ ಶಿರಾಡಿಯಿಂದ ಮತ್ತೊಂದು ಆಂಬುಲೆನ್ಸ್ ಬರಬೇಕಾದ ಅನಿವಾರ್ಯತೆ ಎದುರಾಯಿತು.

ಶಿರಾಡಿಯಿಂದ ವಾಹನ ಬರಲು ಅರ್ಧ ಗಂಟೆಗೂ ಹೆಚ್ಚು ಕಾಲ ವಿಳಂಬವಾಗಿದ್ದು, ಸಮಯಕ್ಕೆ ಸರಿಯಾಗಿ ಸ್ಪಂದಿಸದ ಇಲಾಖೆಯ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸದ್ಯ ಗಾಯಾಳು ಗಣೇಶ್ ಆಚಾರ್ಯ ಅವರು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪರಾರಿಯಾದ ಕಾರು ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related Articles

Latest Articles