ಹೊಸಮಠ ಬಳಿ ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ: ಪಿಕ್ ಅಪ್, ಮರಳು ಸಹಿತ ಮೂವರು ಕಡಬ ಪೊಲೀಸರ ವಶಕ್ಕೆ

kadaba times

ಕಡಬ ತಾಲೂಕಿನ ಬಲ್ಯ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಗುಂಡ್ಯ ಹೊಳೆಯಿಂದ ಅಕ್ರಮವಾಗಿ ಮರಳು ಸಂಗ್ರಹಿಸುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ . 5 ಲಕ್ಷ ಮೌಲ್ಯದ ಪಿಕ್‌ಅಪ್ ಹಾಗೂ ಮರಳು ವಶಪಡಿಸಿಕೊಳ್ಳಲಾಗಿದೆ.

kadaba times
uniq

ಕಡಬ: ತಾಲೂಕಿನ ಬಲ್ಯ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಗುಂಡ್ಯ ಹೊಳೆಯಿಂದ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸುತ್ತಿದ್ದ  ತಂಡವೊಂದನ್ನು ಕಡಬ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

ಕಾರ್ಯಾಚರಣೆಯ ವೇಳೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.  ಮರಳು ಮತ್ತು ಸಾಗಾಟಕ್ಕೆ ಬಳಸುತ್ತಿದ್ದ ಪಿಕ್‌ಅಪ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಏಪ್ರಿಲ್ 26 ರಂದು ಕಡಬ ಪೊಲೀಸ್ ಉಪನಿರೀಕ್ಷಕ  ಜಂಬುರಾಜ್ ಮಹಾಜನ್ ಅವರು ಸಿಬ್ಬಂದಿಗಳೊಂದಿಗೆ ತನಿಖೆಗಾಗಿ ಬಲ್ಯ ಗ್ರಾಮದ ಕಡೆಗೆ ತೆರಳುತ್ತಿದ್ದರು. ಈ ವೇಳೆ  ಹೊಸ್ಮಠ ಎಂಬಲ್ಲಿ ಅಕ್ರಮ ಮರಳುಗಾರಿಕೆಯ ಬಗ್ಗೆ ಖಚಿತ ಮಾಹಿತಿ ಲಭಿಸಿದೆ. ಕೂಡಲೇ ಎಚ್ಚೆತ್ತ ಪೊಲೀಸರು ಕೊಲ್ಯದಕಟ್ಟದ ಗುಂಡ್ಯ ಹೊಳೆಯ ದಡಕ್ಕೆ ದಾಳಿ ನಡೆಸಿದ್ದಾರೆ.

kadaba times
kadaba times

ಅರಣ್ಯ ಪ್ರದೇಶದ ವ್ಯಾಪ್ತಿಗೆ ಬರುವ ಈ ಸ್ಥಳದಲ್ಲಿ ಅಕ್ರಮವಾಗಿ ಮರಳನ್ನು ರಾಶಿ ಹಾಕಿ ಸಾಗಾಟಕ್ಕೆ ಸಿದ್ಧತೆ ನಡೆಸುತ್ತಿರುವುದು ಕಂಡುಬಂದಿದೆ. ಸ್ಥಳದಲ್ಲಿದ್ದ ಮೂವರು ವ್ಯಕ್ತಿಗಳನ್ನು ವಿಚಾರಿಸಿದಾಗ, ಯಾವುದೇ ಪರವಾನಿಗೆ ಇಲ್ಲದೆ ಮರಳನ್ನು ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸುತ್ತಿರುವುದು ಬೆಳಕಿಗೆ ಬಂದಿದೆ.

 ಸುಮಾರು 5,06,000 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಒಂದು ಪಿಕ್‌ಅಪ್ ಲೋಡ್ ಮರಳು (ಅಂದಾಜು ಮೌಲ್ಯ 5,000 ರೂ.), KA 21 B 2852 ಸಂಖ್ಯೆಯ ಬೊಲೆರೊ ಪಿಕ್‌ಅಪ್ ವಾಹನ (ಅಂದಾಜು ಮೌಲ್ಯ 5 ಲಕ್ಷ ರೂ.), ಮರಳು ತೆಗೆಯಲು ಬಳಸುತ್ತಿದ್ದ ಕಬ್ಬಿಣ ಹಾಗೂ ಕಟ್ಟಿಗೆ ಹಿಡಿಯ ಸಲಕೆಗಳು ಮತ್ತು ಪ್ಲಾಸ್ಟಿಕ್ ಬುಟ್ಟಿಗಳು. ಸ್ಥಳದಲ್ಲಿದ್ದ  ನಾರಾಯಣ (54 ವರ್ಷ),ಪ್ರಸನ್ನ (33 ವರ್ಷ), ಗಿರೀಶ್ (41 ವರ್ಷ) ವಶಕ್ಕೆ ಪಡೆದಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 52/2026 ರಂತೆ ಪ್ರಕರಣ ದಾಖಲಾಗಿದೆ. ಆರೋಪಿಗಳ ಮೇಲೆ ಕರ್ನಾಟಕ ಮೈನರ್ ಮಿನರಲ್ ಕನ್ಸಿಸ್ಟೆಂಟ್ ರೂಲ್ 1994, MMDR ಕಾಯ್ದೆ 1957 ರ ವಿವಿಧ ಕಲಂಗಳು ಹಾಗೂ ಬಿಎನ್‌ಎಸ್ (BNS-2023) ಸೆಕ್ಷನ್ 303(2) ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ.

Related Articles

Latest Articles