Lightning Strike-ಪೆರಾಬೆಯಲ್ಲಿ ಸಿಡಿಲು ಬಡಿದು ಸಂಪೂರ್ಣ ಸುಟ್ಟು ಹೋದ ತೆಂಗಿನ ಮರ

kadaba times

ಕಡಬ ತಾಲೂಕಿನ ಪೆರಾಬೆ ಗ್ರಾಮದ ಸುರುಳಿಯಲ್ಲಿ ಸಿಡಿಲು ಬಡಿದು ತೆಂಗಿನ ಮರ ಭಸ್ಮವಾಗಿದೆ. ಕಳೆದ ಒಂದು ವಾರದಲ್ಲಿ ಇದು ಎರಡನೇ ಘಟನೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.

kadaba times
uniq

ಕಡಬ: ಕಡಬ ತಾಲೂಕಿನಾದ್ಯಂತ ಶುಕ್ರವಾರ ಸಂಜೆ ಗುಡುಗು ಸಹಿತ ಭಾರಿ ಗಾಳಿ ಮಳೆಯಾಗಿದ್ದು, ಪೆರಾಬೆ ಗ್ರಾಮದಲ್ಲಿ ಸಿಡಿಲು ಬಡಿದು ತೆಂಗಿನ ಮರವೊಂದು ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ವರದಿಯಾಗಿದೆ.

ಪೆರಾಬೆ ಗ್ರಾಮದ ಸುರುಳಿ ನಿವಾಸಿ ಲೋಲಾಕ್ಷ ಶೆಟ್ಟಿ ಎಂಬವರಿಗೆ ಸೇರಿದ ತೋಟದಲ್ಲಿ ಈ ಘಟನೆ ಸಂಭವಿಸಿದೆ. ಶುಕ್ರವಾರ ಸಂಜೆ ಸುರಿದ ಭೀಕರ ಮಳೆಯ ವೇಳೆ ತೋಟದಲ್ಲಿದ್ದ ತೆಂಗಿನ ಮರವೊಂದಕ್ಕೆ ನೇರವಾಗಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಮರವು ತಕ್ಷಣವೇ ಬೆಂಕಿ ಹತ್ತಿಕೊಂಡು ಉರಿಯಲಾರಂಭಿಸಿದ್ದು, ಕೆಲವೇ ಕ್ಷಣಗಳಲ್ಲಿ ಮರ ಪೂರ್ಣವಾಗಿ ಸುಟ್ಟು ಕರಕಲಾಗಿದೆ.

kadaba times
kadaba times

ಸಿಡಿಲು ಬಡಿಯುವ ಭೀಕರ ದೃಶ್ಯ ಕಂಡ ಸ್ಥಳೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಕಳೆದ ಒಂದು ವಾರದ ಹಿಂದೆಯಷ್ಟೇ ಆಲಂಕಾರು ಸಮೀಪ ಕೂಡ ಇದೇ ರೀತಿ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿತ್ತು. ವಾರದ ಅಂತರದಲ್ಲಿ ಈ ಭಾಗದಲ್ಲಿ ಎರಡನೇ ಬಾರಿಗೆ ಇಂತಹ ಘಟನೆ ಮರುಕಳಿಸಿರುವುದು ತೋಟದ ಮಾಲೀಕರು ಹಾಗೂ ಜನಸಾಮಾನ್ಯರಲ್ಲಿ ಭೀತಿ ಮೂಡಿಸಿದೆ.

ಕಡಬ ಸುತ್ತಮುತ್ತಲ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಅಕಾಲಿಕ ಮಳೆಯೊಂದಿಗೆ ಸಿಡಿಲಿನ ಆರ್ಭಟ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Related Articles

Latest Articles