
ಕಡಬದ ಐತ್ತೂರು ಗ್ರಾಮದ ಅರಬ್ಬಿ ತೋಡಿನಲ್ಲಿ ಸ್ನಾನಕ್ಕೆಂದು ಇಳಿದಿದ್ದ ಮರ್ದಾಳದ ಯುವಕ ರಕ್ಷಿತ್ (26) ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರ ಭೇಟಿ.


ಕಡಬ: ಸ್ನಾನಕ್ಕೆಂದು ನದಿಗಿಳಿದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿರುವ ದಾರುಣ ಘಟನೆ ಸೋಮವಾರ ಸಂಜೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಿಯರ್ ಎಂಬಲ್ಲಿ ನಡೆದಿದೆ.
ನಾಪತ್ತೆಯಾದ ಯುವಕನನ್ನು ಮಂಜು ಎಂಬವರ ಪುತ್ರ ರಕ್ಷಿತ್ (26 ವರ್ಷ) ಎಂದು ಗುರುತಿಸಲಾಗಿದೆ.
ಮೂಲತಃ ಮರ್ದಾಳದಲ್ಲಿ ಕುಟುಂಬದವರ ಜತೆ ಬಾಡಿಗೆ ಮನೆಯಲ್ಲಿ ವಾಸವಿದ್ದ ರಕ್ಷಿತ್ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ , ಸೋಮವಾರ ಸಂಜೆ 72 ಸಿ.ಆರ್.ಸಿ ಕಾಲನಿಯಲ್ಲಿರುವ ತನ್ನ ಸ್ನೇಹಿತರ ಗುಂಪಿನೊಂದಿಗೆ ಐತ್ತೂರು ಗ್ರಾಮದ ‘ಅರಬ್ಬಿ ತೋಡು’ ಎಂಬಲ್ಲಿ ಸ್ನಾನ ಮಾಡಲು ತೆರಳಿದ್ದರು ಎಂಬ ಮಾಹಿತಿ ಲಭ್ಯವಾಗಿದೆ .


ಈಜಲು ತಿಳಿದಿದ್ದರೂ ಸಹ, ನೀರಿನ ಸೆಳೆತ ಅಥವಾ ಆಳದ ಅರಿವಾಗದೆ ರಕ್ಷಿತ್ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.ಯುವಕ ನಾಪತ್ತೆಯಾದ ತಕ್ಷಣ ಸ್ನೇಹಿತರು ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಕಡಬ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರ ಸಹಕಾರದೊಂದಿಗೆ ನಾಪತ್ತೆಯಾದ ಯುವಕನಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಕತ್ತಲಾದ ಕಾರಣ ಕಾರ್ಯಾಚರಣೆಗೆ ಅಲ್ಪ ಹಿನ್ನಡೆಯಾಗಿದ್ದು, ಹೆಚ್ಚಿನ ಮಾಹಿತಿ ಇನ್ನು ನಿರೀಕ್ಷಿಸಲಾಗಿದೆ.
