ಸುಬ್ರಹ್ಮಣ್ಯ: ಮೈಲುತುತ್ತು ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

kadaba times

ಕಲ್ಮಕ್ಕಾರು ಗ್ರಾಮದ ತುಕರಾಮ ಗೌಡ ಎಂಬುವವರು ಅನಾರೋಗ್ಯದ ಕಾರಣದಿಂದ ಮನನೊಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

kadaba times
uniq

ಸುಬ್ರಹ್ಮಣ್ಯ: ದೀರ್ಘಕಾಲದ ಅನಾರೋಗ್ಯ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕ್ರಿಮಿನಾಶಕ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಕ್ಕಾರು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಕಲ್ಮಕ್ಕಾರು ಗ್ರಾಮದ ನಿವಾಸಿ ತುಕರಾಮ ಗೌಡ (63) ಎಂದು ಗುರುತಿಸಲಾಗಿದೆ. ಕಳೆದ ಕೆಲವು ಸಮಯದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದರಿಂದ ತೀವ್ರ ಮಾನಸಿಕ ಖಿನ್ನತೆಗೊಳಗಾಗಿದ್ದ ಅವರು, ಎಪ್ರಿಲ್ 16 ರಂದು ಬೆಳಿಗ್ಗೆ ಮನೆಯಲ್ಲಿದ್ದ ವೇಳೆ ವಿಷಕಾರಿ ಮೈಲುತುತ್ತು ಕ್ರಿಮಿನಾಶಕವನ್ನು ಸೇವಿಸಿದ್ದಾರೆ.

kadaba times
kadaba times

ಘಟನೆ ಗಮನಕ್ಕೆ ಬರುತ್ತಿದ್ದಂತೆ ಮನೆಯಲ್ಲಿದ್ದ ಮಗ ಪವನ್ ಕೃಷ್ಣ, ತಾಯಿ ಸರಸ್ವತಿ ಮತ್ತು ಚಿಕ್ಕಪ್ಪ ಪದ್ಮನಾಭ ಅವರು ತಕ್ಷಣವೇ ತುಕರಾಮ ಗೌಡ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿನ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಸುಳ್ಯದ ಕೆ.ವಿ.ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕೆ.ವಿ.ಜಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ತುಕರಾಮ ಗೌಡ ಅವರು ಚಿಕಿತ್ಸೆಗೆ ಸ್ಪಂದಿಸದೆ ಮಧ್ಯಾಹ್ನ ಸುಮಾರು 2:00 ಗಂಟೆಗೆ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಈ ಕುರಿತು ಮೃತರ ಮಗ ಪವನ್ ಕೃಷ್ಣ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಯುಡಿಆರ್ ನಂಬ್ರ: 08/2026 ಕಲಂ: 194 BNSS ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related Articles

Latest Articles