ಮಗನಿಗೆ ಕತ್ತಿಯಿಂದ ಕಡಿದ ಹೆತ್ತ ತಾಯಿ: ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು

kadaba times

ಕ್ಷುಲ್ಲಕ ಕಾರಣಕ್ಕೆ ತಾಯಿಯೇ ಮಗನಿಗೆ ಕತ್ತಿಯಿಂದ ಕಡಿದ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಮಗ ರಾಮಚಂದ್ರ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

kadaba times
uniq

ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿ, ತಾಯಿಯೇ ಮಗನಿಗೆ ಕತ್ತಿಯಿಂದ ಕಡಿದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಸುಳ್ಯ ತಾಲೂಕಿನ ಎಮರ್ಕಂಜ ಗ್ರಾಮದ ಹೈದಂಗೂರು ಎಂಬಲ್ಲಿ ವರದಿಯಾಗಿದೆ.

 ಏಪ್ರಿಲ್ 26ರಂದು ರಾತ್ರಿ ಈ ಘಟನೆ ನಡೆದಿದ್ದು, ಹೈದಂಗೂರು ನಿವಾಸಿ ರಾಮಚಂದ್ರ ಗಾಯಗೊಂಡ ಮಗ. ಇವರ ತಾಯಿ ಯಶೋದಾ ಕೃತ್ಯ ಎಸಗಿದವರು ಎಂದು ಗುರುತಿಸಲಾಗಿದೆ.

kadaba times
kadaba times

ಲಭ್ಯವಿರುವ ಮಾಹಿತಿಯ ಪ್ರಕಾರ, ರಾತ್ರಿ ಮಗ ರಾಮಚಂದ್ರ ಅಮಲು ಪದಾರ್ಥ ಸೇವಿಸಿ ಮನೆಗೆ ಬಂದಿದ್ದರು ಎನ್ನಲಾಗಿದೆ. ಈ ವೇಳೆ ತಾಯಿ ಮತ್ತು ಮಗನ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಜಗಳ ತಾರಕಕ್ಕೇರಿದ ಸಂದರ್ಭದಲ್ಲಿ ಆಕ್ರೋಶಗೊಂಡ ತಾಯಿ  ಮನೆಯಲ್ಲಿದ್ದ ಕತ್ತಿಯಿಂದ ಮಗನಿಗೆ ಕಡಿದಿದ್ದಾರೆ ಎಂದು ತಿಳಿದು ಬಂದಿದೆ.

ಕತ್ತಿ ಏಟಿನಿಂದ ತೀವ್ರವಾಗಿ ಗಾಯಗೊಂಡ ರಾಮಚಂದ್ರ ಅವರನ್ನು ತಕ್ಷಣವೇ ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Related Articles

Latest Articles