ಗೆಳೆಯರೊಂದಿಗೆ ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲು

kadaba times

ಬೆಳ್ತಂಗಡಿ: ಏಳು ಜನರ ವಿದ್ಯಾರ್ಥಿಗಳ ತಂಡವೊಂದು ನದಿಗೆ ಈಜಲು ಹೋದಾಗ, ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯ ನೀರಿನಲ್ಲಿ ಮುಳುಗಿ ನೀರುಪಾಲಾಗಿರುವ ದಾರುಣ ಘಟನೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಪಜೀರಡ್ಕ ಎಂಬಲ್ಲಿ ಮೇ 19ರಂದು ಸಂಜೆ ನಡೆದಿದೆ.

kadaba times
uniq

ನೀರುಪಾಲಾದ ಯುವಕನನ್ನು ಉಜಿರೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ಇಸಿಇ (ECE) ವಿದ್ಯಾರ್ಥಿ, ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ.

ಮಂಗಳವಾರ ಮೇ 19ರಂದು ಸಂಜೆ ಸುಮಾರು 4 ಗಂಟೆಯ ವೇಳೆಗೆ ಏಳು ಜನ ಸ್ನೇಹಿತರ ತಂಡವು ಪಜೀರಡ್ಕದ ನೇತ್ರಾವತಿ ನದಿಗೆ ಈಜಾಡಲು ತೆರಳಿತ್ತು. ಈ ವೇಳೆ ನೀರಿನ ಸೆಳವಿಗೆ ಸಿಲುಕಿದ ಶ್ರೀಪೂರ್ಣ ನದಿಯಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಸ್ಥಳಕ್ಕೆ ಧಾವಿಸಿ ಭರದ ಹುಡುಕಾಟ ನಡೆಸಿದರು.

kadaba times
kadaba times
ನಾಳೆಗೆ ಮುಂದೂಡಲ್ಪಟ್ಟ ಕಾರ್ಯಾಚರಣೆ:

ರಾತ್ರಿ 9:25ರ ವರೆಗೂ ಮೃತದೇಹಕ್ಕಾಗಿ ತೀವ್ರ ಹುಡುಕಾಟ ನಡೆಸಲಾಯಿತಾದರೂ, ಕತ್ತಲೆಯಾದ ಕಾರಣ ಯುವಕನ ಪತ್ತೆ ಸಾಧ್ಯವಾಗಿಲ್ಲ. ಹೀಗಾಗಿ ಇಂದಿನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದ್ದು, ನಾಳೆ (ಮೇ 20) ಮುಂಜಾನೆಯಿಂದಲೇ ಮತ್ತೆ ಶೋಧ ಕಾರ್ಯ ಮುಂದುವರಿಯಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರ ನೆರವಿನೊಂದಿಗೆ ಕಾರ್ಯಾಚರಣೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Related Articles

Latest Articles