ಕುಕ್ಕೆ ಸುಬ್ರಹ್ಮಣ್ಯ: ರಥಬೀದಿಯಲ್ಲಿದ್ದ ದನವನ್ನು ಕಾರಿನಲ್ಲಿ ತುಂಬಿಸಿಕೊಂಡು ಹೋದ ಕಿರಾತಕರು

kadaba times

ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಬೆಳಗಿನ ಜಾವ ದನವೊಂದನ್ನು ಕಾರಿನಲ್ಲಿ ತುಂಬಿಸಿಕೊಂಡು ಕಳವು ಮಾಡಿರುವ ಘಟನೆ ನಡೆದಿದೆ. CCTV ದೃಶ್ಯಾವಳಿ ಲಭ್ಯವಿದ್ದು, ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

kadaba times
uniq

ಸುಬ್ರಹ್ಮಣ್ಯ: ಕಡಬ ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಬೆಳ್ಳಂಬೆಳಗ್ಗೆ ದನಗಳ್ಳರು ಕೈಚಳಕ ತೋರಿಸಿದ್ದಾರೆ. ರಸ್ತೆ ಬದಿಯಲ್ಲಿ ನಿಂತಿದ್ದ ದನವೊಂದನ್ನು ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಸಿಕೊಂಡು ಹೋಗಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.

 ದಿನಾಂಕ 06.05.2026 ರಂದು ಬೆಳಗಿನ ಜಾವ ಸುಮಾರು 02.30 ರಿಂದ 02.50 ಗಂಟೆಯ ನಡುವೆ ಸುಬ್ರಹ್ಮಣ್ಯ ಗ್ರಾಮದ ಷಷ್ಠಿ ಲಾಡ್ಜ್ ಎದುರಿನ ರಸ್ತೆಯಲ್ಲಿ ಈ ಕೃತ್ಯ ನಡೆದಿದೆ. ರಸ್ತೆ ಬದಿಯಲ್ಲಿ ಆಶ್ರಯ ಪಡೆದಿದ್ದ ದನವನ್ನು ಗುರಿಯಾಗಿಸಿಕೊಂಡು ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು, ಅತ್ಯಂತ ಕ್ರೂರವಾಗಿ ದನವನ್ನು ಹಿಡಿದು ಕಾರಿನೊಳಗೆ ತುರುಕಿದ್ದಾರೆ. ಬಳಿಕ ಕ್ಷಣಾರ್ಧದಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ.

ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ: ದನಗಳ್ಳತನದ ಈ ಸಂಪೂರ್ಣ ದೃಶ್ಯವು ಹತ್ತಿರದ ಅಂಗಡಿಯೊಂದರ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರಿನಲ್ಲಿ ಬಂದ ಆರೋಪಿಗಳು ದನವನ್ನು ಹಿಂಸಾತ್ಮಕವಾಗಿ ಎಳೆದಾಡಿ ವಾಹನಕ್ಕೆ ತುಂಬಿಸುವ ದೃಶ್ಯಗಳು ಈಗ ಪೊಲೀಸರ ಕೈಸೇರಿದೆ.

kadaba times
kadaba times

ಈ ಬಗ್ಗೆ ಸ್ಥಳೀಯ ನಿವಾಸಿ ಶೇಖರ .ಎ ಎಂಬವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಅ.ಕ್ರ: 16/2026 ರಂತೆ ವಿವಿಧ ಕಠಿಣ ಕಾಯ್ದೆಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಸುಬ್ರಹ್ಮಣ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಹಾಗೂ ವಾಹನದ ಸಂಖ್ಯೆಯ ಆಧಾರದ ಮೇಲೆ ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ. ಕ್ಷೇತ್ರದಲ್ಲಿ ಇಂತಹ ಘಟನೆ ನಡೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Related Articles

Latest Articles