ಕಡಬ: ಆರೆಸ್ಸೆಸ್ ಹಿರಿಯ ಕಾರ್ಯಕರ್ತ, ಅಯೋಧ್ಯೆ ಕರಸೇವಕ ನಿಧನ

kadaba times

ಕಡಬ ತಾಲೂಕಿನ ಕೊಣಾಲು ಗ್ರಾಮದ ಎಣ್ಣೆತ್ತೋಡಿ ನಿವಾಸಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಹಿರಿಯ ಕಾರ್ಯಕರ್ತ ಪೂವಪ್ಪ ಗೌಡ ಎಣ್ಣೆತ್ತೋಡಿ (66 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಮೇ 29ರಂದು ಬೆಳಗ್ಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

kadaba times
uniq

ಬಾಲ್ಯದಿಂದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಭಾರತೀಯ ಜನತಾ ಪಾರ್ಟಿಯ (BJP) ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ಪೂವಪ್ಪ ಗೌಡ ಅವರು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ಐತಿಹಾಸಿಕ ಕರಸೇವೆಯಲ್ಲಿ ಭಾಗವಹಿಸಿದ್ದರು. ಕರಸೇವಕರಾಗಿ ಅಯೋಧ್ಯೆಗೆ ತೆರಳಿ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಊರಿನಲ್ಲಿ ಕೃಷಿಯ ಜೊತೆಗೆ ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮೂರು ದಿನಗಳ ಹಿಂದೆ ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

kadaba times
kadaba times

ಮೃತರು ಪತ್ನಿ ಕುಶಾಲಾಕ್ಷಿ, ಪುತ್ರ ತಿಲಕ್‌ರಾಜ್, ಪುತ್ರಿ ರೋಶನಿ ಹಾಗೂ ನಾಲ್ವರು ಸಹೋದರರು ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಸಂತಾಪ ಸೂಚಿಸಿ ಪ್ರಮುಖ ರಾಜಕೀಯ ಧುರಿತರು, ಹಿಂದೂ ಸಂಘಟನೆಯ ಪ್ರಮುಖರು ಹಾಗೂ ಸ್ಥಳೀಯ ಗಣ್ಯರು ಎಣ್ಣೆತ್ತೋಡಿಯ ಅವರ ಗೃಹಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

Related Articles

Latest Articles