ಆಲಂಕಾರಿಗೆ ಕೆಲಸದ ನಿಮಿತ್ತ ತೆರಳಿ ವಾಪಸ್ ಬರುತ್ತಿದ್ದಾಗ ಯಮ ಸ್ವರೂಪಿಯಾಗಿ ಬಂದ ಟ್ಯಾಂಕರ್

kadaba times

ಕಡಬ ತಾಲೂಕಿನ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಲ್ಲಡ್ಕ ಮೂಲದ ಯುವಕ ಮೃತಪಟ್ಟಿದ್ದಾರೆ. ನಿಯಂತ್ರಣ ತಪ್ಪಿದ ಟ್ಯಾಂಕರ್ ಕಂದಕಕ್ಕೆ ಉರುಳಿದ್ದು, ಸಹಸವಾರ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.

kadaba times
uniq

ಸವಣೂರು: ಸುಬ್ರಹ್ಮಣ್ಯ-ಮಂಜೇಶ್ವರ ಅಂತಾರಾಜ್ಯ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ಎಂಬಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸಹಸವಾರ ಸೇರಿದಂತೆ ಒಟ್ಟು ಮೂವರು ಗಾಯಗೊಂಡಿದ್ದಾರೆ.

ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಗೊಳ್ತಮಜಲು ನಿವಾಸಿ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಇವರು ತಮ್ಮ ಸಹಸವಾರನೊಂದಿಗೆ ಕಡಬ ತಾಲೂಕಿನ ಆಲಂಕಾರಿಗೆ ಕೆಲಸದ ನಿಮಿತ್ತ ತೆರಳಿ ವಾಪಸ್ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ.

kadaba times
kadaba times

ಸಂಜೆ ಸುಮಾರು 5 ಗಂಟೆಯ ವೇಳೆ ಚಾಪಳ್ಳ ತಿರುವಿನಲ್ಲಿ ಸ್ಕೂಟರ್ ಚಲಿಸುತ್ತಿದ್ದಾಗ, ಎದುರಿನಿಂದ ಮುಗೆರೋಡಿ ಕನ್ಸ್ಟ್ರಕ್ಷನ್‌ಗೆ ಸೇರಿದ ನೀರಿನ ಟ್ಯಾಂಕರ್ ಬಂದಿದೆ. ಬೈ ಕ್ ಗೆ ಡಿಕ್ಕಿ ತಪ್ಪಿಸಲು ಟ್ಯಾಂಕರ್ ಚಾಲಕ ವಾಹನವನ್ನು ಎಡಕ್ಕೆ ತಿರುಗಿಸಿದಾಗ, ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆ ಬದಿಯ ಕಂದಕಕ್ಕೆ ಉರುಳಿದೆ. ದುರದೃಷ್ಟವಶಾತ್, ಈ ವೇಳೆ ಸ್ಕೂಟರ್ ಟ್ಯಾಂಕರ್‌ನ ಚಕ್ರದ ಅಡಿಗೆ ಸಿಲುಕಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್ ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಅಪಘಾತವನ್ನು ಕಂಡು ಗಾಬರಿಯಿಂದ ಬ್ರೇಕ್ ಹಾಕಿದ ಮತ್ತೊಂದು ಬೈಕ್ ಕೂಡ ಸ್ಕಿಡ್ ಆಗಿದ್ದು, ಅದರಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅಪಘಾತದ ತೀವ್ರತೆಗೆ ಟ್ಯಾಂಕರ್ 90 ಡಿಗ್ರಿ ತಿರುಗಿ ಕಂದಕಕ್ಕೆ ಉರುಳಿದ್ದು, ಸ್ಥಳದಲ್ಲಿ ಕೆಲಕಾಲ ವಾಹನ ಸಂಚಾರ ವ್ಯತ್ಯಯಗೊಂಡಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Latest Articles