ಸುಬ್ರಹ್ಮಣ್ಯ:ಕುಮಾರಧಾರ ಸಮೀಪ ವಿದ್ಯುತ್ ಮಾರ್ಗ ಸ್ಥಳಾಂತರ ಕಾರ್ಯ: ಇಂದು( ಮೇ 7 ) ದಿನವಿಡೀ ವಿದ್ಯುತ್ ವ್ಯತ್ಯಯ

kadaba times

ಮೇ 7ರಂದು ಸುಬ್ರಹ್ಮಣ್ಯದ ಕುಮಾರಧಾರ ಸಮೀಪ ವಿದ್ಯುತ್ ಮಾರ್ಗ ಸ್ಥಳಾಂತರ ಕಾರ್ಯ ನಡೆಯಲಿದ್ದು, ಪ್ರಮುಖ ಗ್ರಾಮಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಹೆಚ್ಚಿನ ಮಾಹಿತಿ ಇಲ್ಲಿದೆ

kadaba times
uniq

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿಯ ನೂತನ ರಸ್ತೆ ನಿರ್ಮಾಣ ಕಾಮಗಾರಿಯ ಅಂಗವಾಗಿ, ಕುಮಾರಧಾರ ಸಮೀಪ ಹಾದುಹೋಗಿರುವ ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ತುರ್ತು ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 7ರ ಗುರುವಾರ ಸುಬ್ರಹ್ಮಣ್ಯ ವಿದ್ಯುತ್ ಉಪಕೇಂದ್ರದಿಂದ ಸರಬರಾಜಾಗುವ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ.

ಸಮಯ: ಮೇ 7ರ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ.

kadaba times
kadaba times

ಪ್ರದೇಶಗಳು: ಸುಬ್ರಹ್ಮಣ್ಯ ಉಪಕೇಂದ್ರದ 11 ಕೆವಿ ಫೀಡರ್‌ಗಳಾದ ಹರಿಹರ, ನಡುಗಲ್ಲು, ಕುಮಾರಧಾರ, ಆದಿಶೇಷ, ಕೈಕಂಬ ಮತ್ತು ಯೇನೆಕಲ್ಲು ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ರಸ್ತೆ ಅಭಿವೃದ್ಧಿ ಕಾಮಗಾರಿಯ ಹಿತದೃಷ್ಟಿಯಿಂದ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ಕೋರಿದೆ.

Related Articles

Latest Articles