ಕಡಬ ತಾಲೂಕಿನಾದ್ಯಂತ ಕಾನೂನುಬಾಹಿರ ಗೋ ವಧೆ ತಡೆಗಟ್ಟಿ: ಪೊಲೀಸ್ ಇಲಾಖೆಗೆ ವಿಶ್ವ ಹಿಂದೂ ಪರಿಷತ್ ಮನವಿ

kadaba times

ಕಡಬ: ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಕಡಬ ತಾಲೂಕಿನಾದ್ಯಂತ ಕಾನೂನುಬಾಹಿರವಾಗಿ ನಡೆಯುವ ಗೋ ಸಾಗಾಟ ಹಾಗೂ ಗೋ ಹತ್ಯೆಯನ್ನು (ಕುರ್ಬಾನಿ) ಸಂಪೂರ್ಣವಾಗಿ ತಡೆಗಟ್ಟಲು ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಡಬ ಪ್ರಖಂಡದ ವತಿಯಿಂದ ಕಡಬ ಪೊಲೀಸ್ ಠಾಣಾಧಿಕಾರಿಗಳಿಗೆ ಗುರುವಾರ (ಮೇ 21) ಮನವಿ ಸಲ್ಲಿಸಿದೆ.

kadaba times
uniq

ರಾಜ್ಯದಲ್ಲಿ ಜಾನುವಾರು ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಕೆಲವು ಕಡೆಗಳಲ್ಲಿ ಕಾನೂನು ಉಲ್ಲಂಘಿಸಿ ಗೋಹತ್ಯೆ ಮಾಡುವ ಸಾಧ್ಯತೆ ಇರುವುದರಿಂದ ಪೊಲೀಸ್ ಇಲಾಖೆ ತೀವ್ರ ನಿಗಾ ವಹಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೀಟ್ ಪೊಲೀಸರನ್ನು ಸಕ್ರಿಯಗೊಳಿಸಿ, ಅಕ್ರಮ ಕಸಾಯಿಖಾನೆಗಳನ್ನು ಗುರುತಿಸಿ ಧಾಳಿ ನಡೆಸಿ ಶಾಶ್ವತವಾಗಿ ಮುಚ್ಚಬೇಕು.ಗೋಹತ್ಯೆ ನಡೆದ ಮನೆ, ಕಟ್ಟಡ ಅಥವಾ ಖಾಲಿ ಜಾಗಗಳನ್ನು ಜಪ್ತಿ ಮಾಡಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಬೇಕು. ಆರೋಪಿಗಳಿಗೆ 7 ವರ್ಷ ಶಿಕ್ಷೆ ಹಾಗೂ ಪ್ರತಿ ಜಾನುವಾರಿಗೆ 1 ಲಕ್ಷ ರೂ. ದಂಡ ವಿಧಿಸಬೇಕು. ಅಕ್ರಮ ಜಾನುವಾರು ಸಾಗಾಟ ತಡೆಯಲು ತಕ್ಷಣದಿಂದಲೇ 24 ಗಂಟೆಗಳ ಕಾಲ ಗಸ್ತು ಸ್ಕ್ವಾಡ್ ನಿಯೋಜಿಸಬೇಕು. ಅನುಮಾನಾಸ್ಪದ ಕಾರು, ಖಾಸಗಿ ವಾಹನಗಳು ಹಾಗೂ ಹಾಲಿನ ಡೈರಿ ಕಂಟೈನರ್‌ಗಳನ್ನು ತೀವ್ರ ತಪಾಸಣೆಗೆ ಒಳಪಡಿಸಬೇಕು. ಈಗಾಗಲೇ ಅಕ್ರಮ ಗೋಸಾಗಾಟ ಮತ್ತು ಗೋಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನಿನ ಮೇಲೆ ಹೊರಗಿರುವ ಆರೋಪಿಗಳನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಬೇಕು ಮತ್ತು ಅವರ ಮೇಲೆ ತೀವ್ರ ನಿಗಾ ಇರಿಸಬೇಕು. ಅಕ್ರಮ ಕಸಾಯಿಖಾನೆಗಳಿಂದ ಮಾಂಸ ಖರೀದಿಸುವವರನ್ನೂ ಅಪರಾಧಿ ಎಂದು ಪರಿಗಣಿಸಬೇಕು. ಹೊರ ರಾಜ್ಯದಿಂದ ಬೀಫ್ ತರಲಾಗಿದೆ ಎಂದು ಸುಳ್ಳು ಹೇಳಿ ಮಾರಾಟ ಮಾಡುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

kadaba times
kadaba times

ಸಂವಿಧಾನದ ಚೌಕಟ್ಟಿನಲ್ಲಿ ರಕ್ಷಣೆ: “ಹಿಂದೂಗಳಿಗೆ ಪೂಜನೀಯವಾಗಿರುವ ಗೋವಂಶವನ್ನು ಸಂವಿಧಾನದ ಚೌಕಟ್ಟಿನಲ್ಲಿ ರಕ್ಷಿಸಲು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಟಿಬದ್ಧವಾಗಿದೆ.  ಈ ಬಾರಿ ಯಾವುದೇ ಅಕ್ರಮ ಗೋಸಾಗಾಟ, ಗೋವಂಶ ಹತ್ಯೆ ನಡೆಯದಂತೆ ಪೊಲೀಸ್ ಇಲಾಖೆ ಕೈಗೊಳ್ಳುವ ಎಲ್ಲಾ ಕ್ರಮಗಳಿಗೆ ನಾವು ಸಂಪೂರ್ಣ ಸಹಕಾರ ನೀಡಲು ಸಿದ್ಧರಿದ್ದೇವೆ” ಎಂದು ಮನವಿಯಲ್ಲಿ ತಿಳಿಸಲಾಗಿದೆ.

ವಿವಿಧ ಕಾಯ್ದೆಗಳಾದ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020’, ‘ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ 1960 (PCA Act)’, ಹಾಗೂ ‘Central Motor Vehicle Act’ ಅಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ವಿನಂತಿಸಲಾಗಿದೆ. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಕಡಬ ಪ್ರಖಂಡದ ಅಧ್ಯಕ್ಷ  ಶಿವಣ್ಣ ಸುವರ್ಣ, ಕಾರ್ಯದರ್ಶಿ ರಾಮಚಂದ್ರ, ಬಜರಂಗದಳದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Latest Articles