ಕಾಲೇಜಿಗೆ ಹೊರಡುವ ಸಿದ್ಧತೆಯಲ್ಲಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

kadaba times

ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ನಡೆದಿದೆ.

kadaba times
uniq

ಮೃತ ವಿದ್ಯಾರ್ಥಿನಿಯನ್ನು ಧಾರವಾಡ ಜಿಲ್ಲೆಯ ಹಿರೇಗುಂಜಲ್-ಚಿಕ್ಕಗುಂಜಲ್ ಮೂಲದ ರಮೇಶ್ ಅವರ ಪುತ್ರಿ ಶ್ವೇತಾ (18) ಎಂದು ಗುರುತಿಸಲಾಗಿದೆ. ಈಕೆ ಬೆಳ್ತಂಗಡಿಯ ಹಳೆಕೋಟೆ ಪರಿಸರದ ಪದವಿ ಪೂರ್ವ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.

ಕೂಲಿ ಕೆಲಸ ಮಾಡುತ್ತಿದ್ದ ಪೋಷಕರು: ಮೂಲತಃ ಧಾರವಾಡದವರಾದ ಶ್ವೇತಾ ಅವರ ತಂದೆ-ತಾಯಿ ಕಳೆದ ಐದು ವರ್ಷಗಳಿಂದ ಕೊಕ್ಕಡ ಸಮೀಪದ ಹಳ್ಳಿಂಗೇರಿಯಲ್ಲಿ ವಾಸವಾಗಿದ್ದರು. ತಂದೆ-ತಾಯಿ ಇಬ್ಬರೂ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು ಹಾಗೂ ಮಗಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಿದ್ದರು ಎನ್ನಲಾಗಿದೆ.

kadaba times
kadaba times

ಎಂದಿನಂತೆ ಬೆಳಗ್ಗೆ ಎದ್ದಿದ್ದ ಶ್ವೇತಾ ಕಾಲೇಜಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಳು. ಈ ವೇಳೆ ತಂದೆ ಕೆಲಸದ ನಿಮಿತ್ತ ಮನೆಯಿಂದ ಹೊರಗೆ ತೆರಳಿದ್ದರು, ತಾಯಿ ಮಾತ್ರ ಮನೆಯಲ್ಲಿದ್ದರು. ತಾಯಿ ಬೇರೆ ಕೆಲಸದಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ, ಕೊಠಡಿಯೊಳಗೆ ಹೋದ ಶ್ವೇತಾ ನೇಣು ಬಿಗಿದುಕೊಂಡಿದ್ದಾಳೆ. ತಾಯಿ ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ನಿಗೂಢವಾದ ಆತ್ಮಹತ್ಯೆಗೆ ಕಾರಣ: ಕಾಲೇಜಿಗೆ ಹೊರಡಲು ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿನಿ ದಿಢೀರನೆ ಇಂತಹ ನಿರ್ಧಾರ ಕೈಗೊಳ್ಳಲು ನಿಖರ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related Articles

Latest Articles