
ಕಡಬ: ತಾಲೂಕಿನ ಅತ್ಯಂತ ಪ್ರಮುಖ ಸಂಪರ್ಕ ರಸ್ತೆಗಳಲ್ಲೊಂದಾದ ಕಡಬ-ಸುಬ್ರಹಮಣ್ಯ ಮುಖ್ಯ ರಸ್ತೆಯ ಕೋಟೆಹೊಳೆ ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸೇತುವೆಯ ಕಾಮಗಾರಿಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರಳ್ಯ ನೇತೃತ್ವದ ಪ್ರಮುಖರ ತಂಡವು ಜಂಟಿಯಾಗಿ ವೀಕ್ಷಿಸಿ, ಪರಿಶೀಲನೆ ನಡೆ್ಸಿದರು.


ಕುಕ್ಕೆ ಶ್ರೀ ಸುಬ್ರಹಣ್ಯ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಈ ಪ್ರಮುಖ ರಸ್ತೆಯಲ್ಲಿ ಕೋಟೆಹೊಳೆಯ ಸೇತುವೆ ನಿರ್ಮಾಣವು ಸಾರ್ವಜನಿಕ ಹಾಗೂ ವಾಹನ ಸವಾರರ ಸುಗಮ ಸಂಚಾರದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಪ್ರಮುಖರಾದ ರಾಕೇಶ್ ರೈ ಕೆಡೆಂಜಿ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಹಾಗೂ ವಿನಯ್ ಕಂದಡ್ಕ ಅವರು ಉಪಸ್ಥಿತರಿದ್ದು ಕಾಮಗಾರಿಯ ಕುರಿತು ಮಾಹಿತಿ ಪಡೆದುಕೊಂಡರು.
ಅಲ್ಲದೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ ಕಂಜಿಪಿಲಿ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಪುಷ್ಪ ಮೇದಪ್ಪ ಹಾಗೂ ಎಸ್.ಸಿ. ಮೋರ್ಚಾದ ಅಣ್ಣಿ ಎಲ್ತಿಮಾರ್ ಸೇರಿದಂತೆ ಹಲವು ಪ್ರಮುಖರು ಮತ್ತು ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಸೇತುವೆ ನಿರ್ಮಾಣದಿಂದ ಈ ಭಾಗದ ಸಾರ್ವಜನಿಕರಿಗೆ ಆಗುವ ಅನುಕೂಲಗಳ ಕುರಿತು ವಿಚಾರ ವಿನಿಮಯ ಮಾಡಿಕೊಂಡರು


