ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಯುವಕನ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಕೇಸ್ ದಾಖಲು

kadaba times

ಉಪ್ಪಿನಂಗಡಿ: ಪ್ರೀತಿಯ ನಾಟಕವಾಡಿ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ತೀರ್ಥಾಕ್ಷ (23) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಹಾಗೂ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ (SC/ST Act) ಗಂಭೀರ ಪ್ರಕರಣ ದಾಖಲಾಗಿದೆ.

kadaba times
uniq

ಪುತ್ತೂರು ತಾಲೂಕಿನ ಕುರಿಯ ಗ್ರಾಮದ ತೀರ್ಥಾಕ್ಷ (23) ಪ್ರಕರಣದ ಆರೋಪಿಯಾಗಿದ್ದಾನೆ. ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನನ್ವಯ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪಿಯುಸಿ ಓದುತ್ತಿರುವ ಸಂತ್ರಸ್ತ ಬಾಲಕಿಯು ಕಳೆದ ಕೆಲವು ದಿನಗಳಿಂದ ತಡರಾತ್ರಿ ಎದ್ದು ಮನೆಯಿಂದ ಹೊರಗೆ ಹೋಗುತ್ತಿದ್ದಳು. ಈ ಬಗ್ಗೆ ಮನೆಯವರು ಗಮನಿಸಿ ವಿಚಾರಿಸಿದಾಗ, ಮೂತ್ರಶಂಕೆಗಾಗಿ ಹೊರಗೆ ಹೋಗುತ್ತಿರುವುದಾಗಿ ಸಬೂಬು ಹೇಳುತ್ತಿದ್ದಳು. ಆದರೆ, ಇದೇ ಘಟನೆ ಪದೇ ಪದೇ ಮರುಕಳಿಸಿದಾಗ ಅನುಮಾನಗೊಂಡ ಪೋಷಕರು ಬಾಲಕಿಯ ಮೇಲೆ ನಿಗಾ ಇರಿಸಿದ್ದರು.

ಜೂನ್ ನಸುಕಿನ ಜಾವ ಸುಮಾರು 3 ಗಂಟೆಯ ಸುಮಾರಿಗೆ ಬಾಲಕಿ ಎಂದಿನಂತೆ ಹೊರಗೆ ಹೋದಾಗ ಮನೆಯವರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮನೆಯಿಂದ ಸುಮಾರು 500 ಮೀಟರ್ ದೂರದ ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬ ನಿಂತಿರುವುದು ಕಂಡುಬಂದಿದೆ. ಆತನ ಸ್ವಲ್ಪವೇ ದೂರದಲ್ಲಿ ಮಗಳು ಕೂಡ ಇರುವುದನ್ನು ಕಂಡು ಪೋಷಕರು ಆಘಾತಕ್ಕೊಳಗಾಗಿದ್ದಾರೆ.

kadaba times
kadaba times

ಬಳಿಕ ಪೋಷಕರು ಬಾಲಕಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ನೈಜ ಸಂಗತಿ ಬೆಳಕಿಗೆ ಬಂದಿದೆ. ಕೆಲವು ತಿಂಗಳ ಹಿಂದೆ ನಡೆದ ನೇಮೋತ್ಸವವೊಂದರಲ್ಲಿ ತೀರ್ಥಾಕ್ಷನ ಪರಿಚಯವಾಗಿತ್ತು. ಆತನೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದ ಬಾಲಕಿ, ಆತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ.

ಇದೇ ಪ್ರೀತಿಯನ್ನು ದುರುಪಯೋಗಪಡಿಸಿಕೊಂಡ ಆರೋಪಿ ತೀರ್ಥಾಕ್ಷ, ಮೇ 24 ರಂದು ರಾತ್ರಿ ಮನೆಯ ಹಿಂಭಾಗದ ಖಾಲಿ ಜಾಗಕ್ಕೆ ಬರುವಂತೆ ಬಾಲಕಿಗೆ ತಿಳಿಸಿದ್ದಾನೆ. ಅಲ್ಲಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.  ಅಷ್ಟೇ ಅಲ್ಲದೆ, 2026ರ ಫೆಬ್ರವರಿ 21 ರಿಂದ ಜೂನ್ 4 ರ ಅವಧಿಯಲ್ಲಿ ಆರೋಪಿಯು ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಾ ಬಂದಿದ್ದಾನೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಸಂತ್ರಸ್ತೆಯು ದಲಿತ ಸಮುದಾಯಕ್ಕೆ ಸೇರಿರುವುದರಿಂದ ಮತ್ತು ಅಪ್ರಾಪ್ತೆಯಾಗಿರುವುದರಿಂದ ಉಪ್ಪಿನಂಗಡಿ ಪೊಲೀಸರು ಆರೋಪಿಯ ವಿರುದ್ಧ  ಕಠಿಣ ಕಾನೂನು ಕಾಯ್ದೆಗಳಡಿ ಮೊಕದ್ದಮೆ ಹೂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ: 84/2026 ರಂತೆ, ಪೋಕ್ಸೋ ಕಾಯ್ದೆ (POCSO Act) 2012 ರ ಕಲಂ 4, 8, 12, ಭಾರತೀಯ ನ್ಯಾಯ ಸಂಹಿತೆ (BNS 2023) ಕಲಂ 64 (ಅತ್ಯಾಚಾರ) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ತಿದ್ದುಪಡಿ ಕಾಯ್ದೆ 2015 ರ ಸೆಕ್ಷನ್ 3(1)(w)(i)(ii) ಪ್ರಕಾರ ಪ್ರಕರಣ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಠಾಣೆಯ ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

Related Articles

Latest Articles