ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್, ಕಾಂಗ್ರೆಸ್ ನಾಯಕರ ಬಂಧನ ಖಂಡಿಸಿ ಕಡಬದಲ್ಲಿ ಕಾಂಗ್ರೆಸ್ ಪ್ರತಿಭಟನೆ

kadaba times

ಕಡಬ: ನವದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಪ್ರಮುಖ ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಕಡಬ ಬ್ಲಾಕ್ ಕಾಂಗ್ರೆಸ್ ಹಾಗೂ ಸುಳ್ಯ ಅಸೆಂಬ್ಲಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕಡಬದ ಮುಖ್ಯ ರಸ್ತೆಯಲ್ಲಿ ಜುಲೈ 22 ರಂದು ಬೃಹತ್ ಪ್ರತಿಭಟನೆ ನಡೆಯಿತು.

kadaba times
uniq

​ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ. ಕೆ. ಅವರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು.

​ಶ್ರೀರಾಮನ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ದೇಶವನ್ನೇ ದೋಚಿದ್ದಾರೆ: ಅಭಿಲಾಷ್ ಪಿ.ಕೆ.

​”ಶ್ರೀರಾಮನ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರವು ಇಂದು ದೇಶದ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದು, ಯುವಜನತೆಯನ್ನು ಹೊಡೆದೋಡಿಸುವ ಕೆಲಸ ಮಾಡುತ್ತಿದೆ. ‘ನೀಟ್’ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಕೇಂದ್ರ ಸರ್ಕಾರದ ಸಂಪೂರ್ಣ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ತಮ್ಮ ಹಕ್ಕುಗಳಿಗಾಗಿ ಹೋರಾಟಕ್ಕಿಳಿದ ವಿದ್ಯಾರ್ಥಿ ಸಮೂಹದ ಮೇಲೆ ಲಾಠಿಚಾರ್ಜ್ ಮಾಡುವ ಮೂಲಕ ದೌರ್ಜನ್ಯ ಎಸಗಲಾಗುತ್ತಿದೆ. ಶ್ರೀರಾಮನ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ದೇಶವನ್ನು ದೋಚುವ ಜೊತೆಗೆ ಶ್ರೀರಾಮ ಮಂದಿರವನ್ನೇ ದೋಚಿ ಹಿಂದೂಗಳ ಭಾವನೆಗೆ ಧಕ್ಕೆ ಉಂಟುಮಾಡಿದೆ. ಕಾಂಗ್ರೆಸ್ ಪಕ್ಷವು ಯಾವತ್ತೂ ಬಡವರ ಹಾಗೂ ಶೋಷಿತರ ಪರ ಇರುವ ಪಕ್ಷವಾಗಿದೆ” ಎಂದು ಅಭಿಲಾಶ್ ಕಿಡಿಕಾರಿದರು.

​ಹೆಣ್ಣುಮಕ್ಕಳ ಮೇಲೆ ಅಮಾನುಷ ನಡೆ ಖಂಡನೀಯ: ಉಷಾ ಅಂಚನ್

​ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್ ಮಾತನಾಡಿ, “ದೇಶದಲ್ಲಿ ಅನ್ಯಾಯವಾಗಿದೆ ಎಂದು ಪ್ರಶ್ನೆ ಮಾಡಲು ಬೀದಿಗಿಳಿದರೆ ಸರ್ಕಾರ ಲಾಠಿ ಪ್ರಹಾರ ಮಾಡಿಸುತ್ತಿದೆ. ನವದೆಹಲಿಯಲ್ಲಿ ಪ್ರತಿಭಟನೆ ವೇಳೆ ಹೆಣ್ಣುಮಕ್ಕಳನ್ನು ಎಳೆದಾಡಿ ಪೊಲೀಸರು ಅಮಾನುಷವಾಗಿ ನಡೆದುಕೊಂಡ ರೀತಿಯನ್ನು ಉಗ್ರವಾಗಿ ಖಂಡಿಸುತ್ತೇವೆ” ಎಂದರು.

kadaba times
kadaba times
​ಪೋಲಿಸರ ಜೊತೆ ಬಿಜೆಪಿ ಗೂಂಡಾಗಳು ಭಾಗಿ?: ಬಾಲಕೃಷ್ಣ ಬಳ್ಳೇರಿ

​ಹಿರಿಯ ಕಾಂಗ್ರೆಸ್ ಮುಖಂಡ ಬಾಲಕೃಷ್ಣ ಬಳ್ಳೇರಿ ಮಾತನಾಡಿ, “ದೆಹಲಿಯಲ್ಲಿ ಪ್ರತಿಭಟನೆಗಿಳಿದ ಅಮಾಯಕ ವಿದ್ಯಾರ್ಥಿಗಳ ಮೇಲೆ ನಡೆಸಿರುವ ಲಾಠಿಚಾರ್ಜ್ ಅತ್ಯಂತ ಖಂಡನೀಯ. ಈ ಕೃತ್ಯದಲ್ಲಿ ಕೇವಲ ಪೊಲೀಸರಷ್ಟೇ ಅಲ್ಲದೆ ಬಿಜೆಪಿಯ ಗೂಂಡಾಗಳು ಸಹ ಭಾಗಿಯಾಗಿರುವ ಶಂಕೆಯಿದೆ” ಎಂದು ಆರೋಪಿಸಿದರು.

​ಈ ಪ್ರತಿಭಟನಾ ಸಭೆಯಲ್ಲಿ ಕಡಬ ಬ್ಲಾಕ್ ಹಾಗೂ ಯುವ ಕಾಂಗ್ರೆಸ್‌ನ ಹಲವು ಪ್ರಮುಖ ನಾಯಕರು, ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

Related Articles

Latest Articles