Karnataka High Court |ಬುರುಡೆ’ ಚಿನ್ನಯ್ಯ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ವಜಾ

kadaba times

ಬೆಂಗಳೂರು:ಧರ್ಮಸ್ಥಳ ದೇವಾಲಯದ ವಿರುದ್ಧ 200 ಕೋಟಿ ರೂಪಾಯಿ ವೆಚ್ಚದಲ್ಲಿ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿ ‘ಬುರುಡೆ’ ಚಿನ್ನಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಉಚ್ಚ ನ್ಯಾಯಾಲಯ (ಹೈಕೋರ್ಟ್) ವಜಾಗೊಳಿಸಿದೆ.

kadaba times
uniq

​ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಪೀಠವು, ಅರ್ಜಿದಾರರ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲು ಅವಕಾಶವಿದೆ ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದೆ.
​

​ಧರ್ಮಸ್ಥಳದಲ್ಲಿ ತಾನು ಕಾನೂನು ಬಾಹಿರವಾಗಿ ಹಲವು ಮೃತದೇಹಗಳನ್ನು ಹೂತು ಹಾಕಿರುವುದಾಗಿ ತಲೆಬುರುಡೆಯೊಂದಿಗೆ ನ್ಯಾಯಾಲಯಕ್ಕೆ ಬಂದು ಹೇಳಿಕೆ ನೀಡಿದ್ದ ಚಿನ್ನಯ್ಯ, ನಂತರ ಎಸ್.ಐ.ಟಿ. (SIT) ತನಿಖೆಯ ವೇಳೆ ತಾನು ಸುಳ್ಳು ಹೇಳುತ್ತಿರುವುದಾಗಿ ಒಪ್ಪಿಕೊಂಡು ಜೈಲು ಸೇರಿದ್ದ.ಇದಾದ ಬಳಿಕ, ಆತ ಹೈಕೋರ್ಟ್‌ಗೆ ಮತ್ತೊಂದು ಅರ್ಜಿ ಸಲ್ಲಿಸಿದ್ದ. ಚಿತ್ರದುರ್ಗದ ಸಾಮಾಜಿಕ ಕಾರ್ಯಕರ್ತೆ ರಮಾ ನಾಗರಾಜ್ ಸಲ್ಲಿಸಿದ್ದ ಅರ್ಜಿಯೊಂದಿಗೆ ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ಈ ಆದೇಶ ನೀಡಿದೆ.

​SITಯಿಂದ ಹೈಕೋರ್ಟ್‌ಗೆ ಅಂತಿಮ ವರದಿ ಸಲ್ಲಿಕೆ:
​ವಿಚಾರಣೆ ವೇಳೆ, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ನ್ಯಾಯಾಲಯಕ್ಕೆ ಮಾಹಿತಿ ನೀಡಿ, “ತಮ್ಮ ತನಿಖೆ ಪೂರ್ಣಗೊಂಡಿದ್ದು, ಅಂತಿಮ ವರದಿಯನ್ನು ಈಗಾಗಲೇ ಸಲ್ಲಿಸಲಾಗಿದೆ” ಎಂದು ತಿಳಿಸಿದೆ. ಅಲ್ಲದೆ, ಚಿನ್ನಯ್ಯ ಮಾಡಿರುವ ಸುಳ್ಳು ಆರೋಪಗಳಿಗೆ ಎಸ್.ಐ.ಟಿ. ತೀವ್ರ ವಿರೋಧವನ್ನೂ ವ್ಯಕ್ತಪಡಿಸಿದೆ.
​

kadaba times
kadaba times

ಚಿನ್ನಯ್ಯ ಮಾಡಿದ್ದ ಆರೋಪವೇನು?
​ಚಿನ್ನಯ್ಯ ತನ್ನ ಅರ್ಜಿಯಲ್ಲಿ ಸೌಜನ್ಯ ಹೋರಾಟಗಾರರು, ನಟ ಪ್ರಕಾಶ್ ರಾಜ್ ಹಾಗೂ ಸಾಮಾಜಿಕ ಕಾರ್ಯಕರ್ತೆ ರಮಾ ನಾಗರಾಜ್ ಸೇರಿದಂತೆ ಕೆಲವರು ₹200 ಕೋಟಿ ಹಣಕಾಸಿನ ನೆರವಿನೊಂದಿಗೆ ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರುವ ಉದ್ದೇಶದಿಂದ ಷಡ್ಯಂತ್ರ ರೂಪಿಸಿದ್ದಾರೆ.
​ಗಿರೀಶ್ ಮಟ್ಟಣ್ಣನವರ್ ಹಾಗೂ ಮಹೇಶ್ ತಿಮರೋಡಿ ತಮ್ಮ ಮೇಲೆ ಒತ್ತಡ ಹೇರಿ ಸುಳ್ಳು ಹೇಳಿಕೆ ನೀಡುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದ.

​ನ್ಯಾಯಾಲಯದಲ್ಲಿ ಹಿರಿಯ ವಕೀಲರ ವಾದ:ರಮಾ ನಾಗರಾಜ್ ಅವರ ಪರವಾಗಿ ಹಿರಿಯ ವಕೀಲೆ ವೃಂದಾ ಗೋವರ್, ವಕೀಲ ನಿತಿನ್ ಹಾಗೂ ಹಿರಿಯ ವಕೀಲ ಬಾಲನ್ ಅವರ ತಂಡದ ಜಯಂತ್ ಟಿ. ವಾದ ಮಂಡಿಸಿದರು.
​”ಸಾಮಾಜಿಕ ಹೋರಾಟವನ್ನು ಹತ್ತಿಕ್ಕುವ ಉದ್ದೇಶದಿಂದ ಹಾಗೂ ಹೋರಾಟಗಾರರನ್ನು ಬೆದರಿಸಿ ಮಾನಸಿಕವಾಗಿ ಕುಗ್ಗಿಸಲು ನ್ಯಾಯಾಂಗ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ” ಎಂದು ಅವರು ಪೀಠಕ್ಕೆ ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಚಿನ್ನಯ್ಯ ಸಲ್ಲಿಸಿದ್ದ ₹200 ಕೋಟಿ ಷಡ್ಯಂತ್ರದ ಆರೋಪಗಳ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

Related Articles

Latest Articles