ಕಾಂಗ್ರೆಸ್ ಆರೋಪಕ್ಕೆ ಮೊದಲ ಬಾರಿ ಕಡಬದಲ್ಲಿ ಪ್ರೆಸ್ ಮೀಟ್ ಮೂಲಕ ಸ್ಪಷ್ಟನೆ ನೀಡಿದ ಸುಳ್ಯ ಶಾಸಕಿ

kadaba times

ಕಡಬ: ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಸ್ಥಳೀಯ ಕಡಬದ ಕಾಂಗ್ರೆಸ್ ಮುಖಂಡರು ಮಾಡಿರುವ ಆರೋಪಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

kadaba times
uniq

ಕಡಬದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರ ಆರೋಪಗಳನ್ನು ನೇರವಾಗಿ ತಳ್ಳಿಹಾಕಿದರು.

ವಿವೇಚನಾ ಕೋಟಾದಡಿ ಅನುದಾನ ನೀಡಿಕೆ ನಿಯಮಬದ್ಧ: “ಶಾಸಕರಿಗೆ ಸಿಗುವ 25 ಕೋಟಿ ರೂ. ವಿಶೇಷ ಅನುದಾನದಲ್ಲಿ 6 ಕೋಟಿ ರೂ.ಗಳನ್ನು ತಮ್ಮ ವಿವೇಚನೆಯಲ್ಲಿ ನೀಡಲು ನಿಯಮಾವಳಿಯಲ್ಲಿ ಅವಕಾಶವಿದೆ. ಇದು ರಾಜ್ಯದ ಎಲ್ಲಾ ಶಾಸಕರಿಗೂ ಇರುವ ಅಧಿಕಾರವಾಗಿದೆ. ಅದರಂತೆ ನಾನು ನನ್ನ ವಿವೇಚನಾ ಕೋಟಾದಡಿಯಲ್ಲಿ ಕೆಲವು ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ, ಅಲ್ಲಿನ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡಿರುವುದು ನಿಜ. ಇದರಲ್ಲಿ ತಪ್ಪು ಹುಡುಕುವುದು ಸರಿಯಲ್ಲ” ಎಂದು ಶಾಸಕಿ ಸ್ಪಷ್ಟಪಡಿಸಿದರು.

ತಮ್ಮ ಅವಧಿಯಲ್ಲಿ ಯಾವುದೇ ತಾರತಮ್ಯ ನಡೆದಿಲ್ಲ ಎಂದು ತಿಳಿಸಿದ ಅವರು, ಸರ್ಕಾರಿ ಶಾಲೆಗಳ ಕಟ್ಟಡ ನಿರ್ಮಾಣಕ್ಕೆ, ಚರ್ಚ್‌ಗಳ ಆವರಣ ಗೋಡೆ ನಿರ್ಮಾಣಕ್ಕೆ ಹಾಗೂ ಮಸೀದಿಗಳ ಸಂಪರ್ಕ ರಸ್ತೆಗಳ ಅಭಿವೃದ್ಧಿಗೂ ಸಮಾನವಾಗಿ ಅನುದಾನ ಒದಗಿಸಿದ್ದೇನೆ ಎಂದರು.

kadaba times
kadaba times

ಕೋರಿಯಾರ್ ಸರ್ವಋತು ಸೇತುವೆಗೆ 30 ಕೋಟಿ ರೂ. ಮಂಜೂರಾತಿ: ಕಡಬ ತಾಲೂಕಿನ 102ನೇ ನೆಕ್ಕಿಲಾಡಿ ಗ್ರಾಮದ ಕೋರಿಯಾರ್ ಎಂಬಲ್ಲಿ ಕುಮಾರಾಧಾರ ನದಿಗೆ ಸರ್ವಋತು ಸೇತುವೆ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ಲೋಕೋಪಯೋಗಿ ಇಲಾಖೆ ಮುಖಾಂತರ 30 ಕೋಟಿ ರೂ. ಮಂಜೂರುಗೊಳಿಸಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಇದೇ ವೇಳೆ ಪ್ರಕಟಿಸಿದರು. ಈ ಬೃಹತ್ ಯೋಜನೆಯ ಟೆಂಡರ್ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಅವರು ತಿಳಿಸಿದರು.ಕೋರಿಯಾರ್‌ನಿಂದ ಸಂಸದರ ಆದರ್ಶ ಗ್ರಾಮ ಬಳ್ಪವನ್ನು ಸಂಪರ್ಕಿಸುವ ಈ ಸೇತುವೆ ನಿರ್ಮಾಣದಿಂದ ಈ ಭಾಗದ ಸಾರ್ವಜನಿಕರಿಗೆ ಭಾರಿ ಅನುಕೂಲವಾಗಲಿದೆ.

ಸಚಿವ ಸತೀಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದ: “ಮಾಜಿ ಶಾಸಕ ಎಸ್. ಅಂಗಾರ ಅವರು ಈ ಹಿಂದೆ ಕೋರಿಯಾರ್‌ನಲ್ಲಿ ಸೇತುವೆ ನಿರ್ಮಾಣಕ್ಕೆ ಮನವಿ ಸಲ್ಲಿಸಿ ಸರ್ಕಾರದ ಗಮನ ಸೆಳೆದಿದ್ದರು. ನಾನು 2024 ರಲ್ಲಿ ಶಾಸಕಿಯಾದ ಬಳಿಕ ಮತ್ತೆ ಮನವಿ ನೀಡಿ ಸರ್ಕಾರದ ಮೇಲೆ ಒತ್ತಡ ತಂದಿದ್ದೆ. ಈ ಹಿಂದೆ ರಾಜ್ಯದಲ್ಲಿದ್ದ ಆರ್ಥಿಕ ಸಮಸ್ಯೆಯಿಂದಾಗಿ ಯೋಜನೆಗೆ ಮಂಜೂರಾತಿ ಸಿಕ್ಕಿರಲಿಲ್ಲ. ತದನಂತರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಈ ಹಿಂದಿನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಮನವಿ ಮಾಡಿ ಒತ್ತಡ ಹೇರಿದ ಫಲವಾಗಿ ಈಗ ಅನುದಾನ ಮಂಜೂರಾಗಿದೆ. ಇದಕ್ಕಾಗಿ ಸರ್ಕಾರ ಹಾಗೂ ಸಚಿವರಿಗೆ ಧನ್ಯವಾದ ಸಲ್ಲಿಸುತ್ತೇನೆ” ಎಂದು ಶಾಸಕಿ ಹೇಳಿದರು. ಈ ಪತ್ರಿಕಾಗೋಷ್ಠಿಯಲ್ಲಿ ಹಲವಾರು ಪ್ರಮುಖ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು

Related Articles

Latest Articles