ಬಿ.ಸಿ. ರೋಡ್‌ನಲ್ಲಿ ಭೀಕರ ಅಪಘಾತ: ಟಿಪ್ಪರ್‌ ಡಿಕ್ಕಿಯಾಗಿ ಸ್ಕೂಟರ್‌ ಸಹಸವಾರ ದುರ್ಮರಣ

kadaba times

ಬಂಟ್ವಾಳದ ಬಿ.ಸಿ. ರೋಡ್ ಎನ್. ಜಿ. ಸರ್ಕಲ್ ಬಳಿ ಅತಿವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಸ್ಕೂಟರ್‌ನಲ್ಲಿದ್ದ ಸಹಸವಾರ ಯಶ್ವಂತ್ ಕುಲಾಲ್ ಮೃತಪಟ್ಟಿದ್ದಾರೆ. ಸ್ಕೂಟರ್ ಸವಾರ ದಯಾನಂದ ಗಂಭೀರವಾಗಿ ಗಾಯಗೊಂಡು ವೆನ್‌ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದಾರೆ. ಆರೋಪಿ ಟಿಪ್ಪರ್ ಚಾಲಕ ಸಲ್ಮಾನ್ ಫಾರುಕ್‌ನನ್ನು ಬಂಟ್ವಾಳ ಸಂಚಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

kadaba times
uniq

ಬಂಟ್ವಾಳ / ಬಿ.ಸಿ. ರೋಡ್:ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಟಿಪ್ಪರ್‌ ಲಾರಿಯೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಭೀಕರ ರಸ್ತೆ ಅಪಘಾತವೊಂದು ಬಂಟ್ವಾಳದ ಬಿ.ಸಿ. ರೋಡ್‌ನ ಎನ್‌. ಜಿ. ಸರ್ಕಲ್‌ ಬಳಿ ಆಗಸ್ಟ್ 6ರ ಸಂಜೆ ಸಂಭವಿಸಿದೆ.

ಅಪಘಾತದಲ್ಲಿ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ಯಶ್ವಂತ್‌ ಕುಲಾಲ್‌ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಆಗಸ್ಟ್ 6ರ ಸಂಜೆ 6:30 ಗಂಟೆಯ ವೇಳೆಗೆ ಕಲ್ಲಡ್ಕ ಕಡೆಯಿಂದ ಲೊರೆಟ್ಟೊ ಕಡೆಗೆ ಬರುತ್ತಿದ್ದ ಟಿಪ್ಪರ್ ವಾಹನವನ್ನು (KA-19-AF-8073) ಅದರ ಚಾಲಕ, ಬಂಟ್ವಾಳ ಪಲ್ಲಮಜಲು ನಿವಾಸಿ ಸಲ್ಮಾನ್‌ ಫಾರುಕ್ (33) ಎಂಬಾತ ಅತಿವೇಗ ಹಾಗೂ ಅಪಾಯಕಾರಿಯಾಗಿ ಚಲಾಯಿಸಿಕೊಂಡು ಬಂದಿದ್ದ ಎನ್ನಲಾಗಿದೆ.

ಈ ವೇಳೆ ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ದಯಾನಂದ ಎಂಬವರು ಯಶ್ವಂತ್‌ ಕುಲಾಲ್‌ ಅವರನ್ನು ಸಹಸವಾರನಾಗಿ ಕುಳ್ಳಿರಿಸಿಕೊಂಡು ತಮ್ಮ ಸ್ಕೂಟರ್‌ನಲ್ಲಿ (KA-70-H-5059) ತೆರಳುತ್ತಿದ್ದರು. ಬಿ.ಸಿ. ರೋಡ್ ಎನ್. ಜಿ. ಸರ್ಕಲ್ ಬಳಿ ಎದುರಾದ ಟಿಪ್ಪರ್ ಲಾರಿಯು ಸ್ಕೂಟರ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ.

kadaba times
kadaba times

ಆಸ್ಪತ್ರೆಯಲ್ಲಿ ಸಹಸವಾರ ಸಾವು: ಡಿಕ್ಕಿಯ ತೀವ್ರತೆಗೆ ಸ್ಕೂಟರ್‌ನಲ್ಲಿದ್ದ ದಯಾನಂದ ಹಾಗೂ ಯಶ್ವಂತ್‌ ಕುಲಾಲ್‌ ರಸ್ತೆಗೆ ಎಸೆಯಲ್ಪಟ್ಟು ತೀವ್ರ ರಕ್ತಸ್ರಾವದಿಂದ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರು ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್‌ಲಾಕ್‌ ಆಸ್ಪತ್ರೆಗೆ ದಾಖಲಿಸಿದರು.

ಆದರೆ ಗಾಯಾಳುಗಳ ಪೈಕಿ ಸಹಸವಾರ ಯಶ್ವಂತ್‌ ಕುಲಾಲ್‌ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಸ್ಕೂಟರ್ ಸವಾರ ದಯಾನಂದ ಅವರು ವೆನ್‌ಲಾಕ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಟಿಪ್ಪರ್ ಚಾಲಕ ಪೋಲೀಸರ ವಶಕ್ಕೆ: ಅಪಘಾತಕ್ಕೆ ಕಾರಣವಾದ ಟಿಪ್ಪರ್ ಚಾಲಕ ಸಲ್ಮಾನ್ ಫಾರುಕ್‌ನನ್ನು ಪೊಲೀಸರು ತಕ್ಷಣವೇ ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 99/2026, ಕಲಂ: 281, 125(A), 106(1) BNS ರಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

KADABA TIMES NEWS
KADABA TIMES NEWShttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಮಾಧ್ಯಮವಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತಿದೆ. ಇದರ ಜೊತೆಗೆ ದ.ಕ ಜಿಲ್ಲೆಯ ಪ್ರಮುಖ ಸುದ್ದಿಗಳು, ರಾಜ್ಯ,ದೇಶದ ಮಹತ್ವದ ಘಟನಾವಳಿಗಳನ್ನು ಸ್ಥಳೀಯರಿಗೆ ತಲುಪಿಸುತ್ತದೆ. ನಮ್ಮನ್ನು ಬೆಂಬಲಿಸಿ ಮತ್ತು ಪ್ರೋತ್ಸಾಹಿಸಿ. ನಿಮ್ಮೂರಿನ ಸುದ್ದಿ ಮಾಹಿತಿಗಳನ್ನು +91 93804 74819 ಗೆ ವಾಟ್ಸಪ್ ಮಾಡಿ.

Related Articles

Latest Articles