ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕಾರ

ಸಚಿವರಿಗೆ ಕಡ್ಡಾಯ ಜಿಲ್ಲಾ ಪ್ರವಾಸಕ್ಕೆ ನಿರ್ದೇಶನ

kadaba times

ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರು ತಾಳ್ಮೆ ವಹಿಸಬೇಕು ಹಾಗೂ ಪಕ್ಷದ ಹಿತಾಸಕ್ತಿಯೇ ಮುಖ್ಯ ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ರಾಜೀನಾಮೆ ನೀಡುವುದಾದರೆ ತಕ್ಷಣವೇ ಅಂಗೀಕರಿಸುವುದಾಗಿ ಎಚ್ಚರಿಸಿರುವ ಅವರು, ನೂತನ ಸಚಿವರಿಗೆ ಕಡ್ಡಾಯವಾಗಿ ಜಿಲ್ಲಾ ಪ್ರವಾಸ ಕೈಗೊಂಡು ಜನಸೇವೆಯಲ್ಲಿ ತೊಡಗಿಸಿಕೊಳ್ಳಲು ಸೂಚಿಸಿದ್ದಾರೆ.

kadaba times
uniq

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಪಕ್ಷದ ಶಾಸಕರು ತಾಳ್ಮೆಯಿಂದ ಇರಬೇಕು ಹಾಗೂ ವ್ಯಕ್ತಿಗಿಂತ ಪಕ್ಷದ ಹಿತಾಸಕ್ತಿಯೇ ಮುಖ್ಯ ಎಂದು  ಮುಖ್ಯ ಮಂತ್ರಿ ಡಿ.ಕೆ ಶಿವ ಕುಮಾರ್ ಹೇಳಿದ್ದಾರೆ. 

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವರಿಷ್ಠರ ನಿರ್ಧಾರಕ್ಕೆ ಬದ್ಧವಾಗಿರಲು ಸೂಚಿಸುತ್ತಾ, ರಾಜೀನಾಮೆ ನೀಡುವ ಬೆದರಿಕೆ ಒಡ್ಡುವ ಶಾಸಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಸಚಿವ ಸ್ಥಾನ ಸಿಗದ ಕಾರಣಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ನಡೆಯುತ್ತಿರುವ ಚರ್ಚೆಗಳಿಗೆ ತೀವ್ರವಾಗಿ ಪ್ರತಿಕ್ರಿಯಿಸಿದ ಸಿಎಂ, “ರಾಜೀನಾಮೆ ಕೊಡುವವರನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಯಾರಾದರೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಅದನ್ನು ಕೆಲವೇ ನಿಮಿಷಗಳಲ್ಲಿ ಅಂಗೀಕರಿಸಲಾಗುವುದು. ತಮ್ಮ ಹಾಗೂ ಪಕ್ಷದ ಭವಿಷ್ಯದ ಒಳಿತನ್ನು ಬಯಸುವವರು ಖಂಡಿತ ಸಮಾಧಾನ ಮತ್ತು ತಾಳ್ಮೆಯಿಂದ ಇರುತ್ತಾರೆ” ಎಂದು ಎಚ್ಚರಿಸಿದರು.

ಖರ್ಗೆ, ಬಂಗಾರಪ್ಪ ಅವರ ಹಳೆಯ ದಿನಗಳನ್ನು ನೆನಪಿಸಿದ ಸಿಎಂ:

ತಮ್ಮ ರಾಜಕೀಯ ಜೀವನದ ಹಳೆಯ ದಿನಗಳನ್ನು ಹಾಗೂ ಹಿರಿಯ ನಾಯಕರ ಅನುಭವಗಳನ್ನು ನೆನಪಿಸಿಕೊಂಡ ಮುಖ್ಯಮಂತ್ರಿಗಳು, ತಾಳ್ಮೆಯ ಪ್ರಾಮುಖ್ಯತೆಯನ್ನು ವಿವರಿಸಿದರು. ಹಿಂದೆ ಎನ್. ಧರಂ ಸಿಂಗ್ ಹಾಗೂ ಸಿದ್ದರಾಮಯ್ಯ ಅವರ ಸಚಿವ ಸಂಪುಟ ರಚನೆಯ ಸಂದರ್ಭದಲ್ಲಿ ನನಗೂ ಕೂಡ ಮಂತ್ರಿ ಸ್ಥಾನ ತಪ್ಪಿತ್ತು. ಆದರೆ ನಾನು ತಾಳ್ಮೆ ಕಳೆದುಕೊಳ್ಳದೆ ಸಮಾಧಾನದಿಂದಿದ್ದೆ” ಎಂದರು.

kadaba times
kadaba times

 “ವೀರೇಂದ್ರ ಪಾಟೀಲ್ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಎಸ್. ಬಂಗಾರಪ್ಪ, ಮಲ್ಲಿಕಾರ್ಜುನ ಖರ್ಗೆ ಮತ್ತು ಎನ್. ಧರಂ ಸಿಂಗ್ ಅವರಿಗೂ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಆದರೆ ಅವರೆಲ್ಲರೂ ಕಾಲಕ್ರಮೇಣ ರಾಜ್ಯದ ಮುಖ್ಯಮಂತ್ರಿಗಳಾದರು. ರಾಜಕೀಯದಲ್ಲಿ ಕೆಲವು ಸಂದರ್ಭಗಳಲ್ಲಿ ಸಮಾಧಾನ ಹಾಗೂ ತಾಳ್ಮೆ ಅತ್ಯಂತ ಅಗತ್ಯ” ಎಂದು ಶಾಸಕರಿಗೆ ಕಿವಿಮಾತು ಹೇಳಿದರು.

ಸಚಿವರಿಗೆ ‘ಜಿಲ್ಲಾ ಪ್ರವಾಸ’ ಕಡ್ಡಾಯ:

ಇದೇ ವೇಳೆ ನೂತನ ಹಾಗೂ ಹಾಲಿ ಸಚಿವರಿಗೆ ಸ್ಪಷ್ಟ ನಿರ್ದೇಶನ ನೀಡಿದ ಸಿಎಂ, “ನಾಳೆಯಿಂದಲೇ ಎಲ್ಲ ಸಚಿವರೂ ಕಡ್ಡಾಯವಾಗಿ ತಮ್ಮ ಜಿಲ್ಲಾ ಪ್ರವಾಸಗಳನ್ನು ಕೈಗೊಳ್ಳಬೇಕು. ಜಿಲ್ಲೆಗಳಲ್ಲಿರುವ ಸರ್ಕಾರಿ ಕಚೇರಿಗಳು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸಮಯ ವ್ಯರ್ಥ ಮಾಡದೆ ಪ್ರತಿಯೊಬ್ಬರೂ ಸಾರ್ವಜನಿಕರ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು” ಎಂದು ಕಟ್ಟಪ್ಪಣೆ ಮಾಡಿದರು.

Related Articles

Latest Articles