ಎಡಮಂಗಲ ಗ್ರಾಮ ಕಡಬ ಪೊಲೀಸ್ ಠಾಣೆಗೆ ಸೇರ್ಪಡೆಯಾಗುತ್ತಾ?

kadaba times

ಕಡಬ ತಾಲೂಕಿನ ಎಡಮಂಗಲ ಗ್ರಾಮವನ್ನು ಪ್ರಸ್ತುತ 13 ಕಿ.ಮೀ ದೂರವಿರುವ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಕೇವಲ 6 ಕಿ.ಮೀ ಅಂತರದಲ್ಲಿರುವ ಕಡಬ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರ್ಪಡೆಗೊಳಿಸುವ ಪ್ರಸ್ತಾವನೆಯು ಇಲಾಖಾ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದು ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಅವರ ಪ್ರಶ್ನೆಗೆ ರಾಜ್ಯ ಗೃಹ ಸಚಿವರು ವಿಧಾನಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದಾರೆ

kadaba times
uniq

ಕಡಬ / ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮವನ್ನು ಪ್ರಸ್ತುತ ವ್ಯಾಪ್ತಿಯಲ್ಲಿರುವ ಬೆಳ್ಳಾರೆ ಪೊಲೀಸ್ ಠಾಣೆಯಿಂದ ಕಡಬ ಪೊಲೀಸ್ ಠಾಣೆಗೆ ಸೇರ್ಪಡೆಗೊಳಿಸುವ ಪ್ರಸ್ತಾವನೆಯು ಸರ್ಕಾರದ ಇಲಾಖಾ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಕರ್ನಾಟಕ ವಿಧಾನಸಭೆಯ ಅಧಿವೇಶನದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಅವರು ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ 335ಕ್ಕೆ ಗೃಹ ಸಚಿವರು ಈ ಲಿಖಿತ ಮಾಹಿತಿ ನೀಡಿದ್ದಾರೆ.

ಶಾಸಕಿ ಭಾಗೀರಥಿ ಮುರುಳ್ಯ ಅವರ ಪ್ರಶ್ನೆ: “ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಎಡಮಂಗಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಡಮಂಗಲ ಗ್ರಾಮವನ್ನು ಪ್ರಸ್ತುತ ಭೌಗೋಳಿಕವಾಗಿ 13 ಕಿ.ಮೀ. ದೂರದಲ್ಲಿರುವ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಿಂದ, ಕೇವಲ 6 ಕಿ.ಮೀ ದೂರದಲ್ಲಿರುವ ಕಡಬ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡಿಸುವ ಕುರಿತು ಸರ್ಕಾರ ಯಾವ ಕ್ರಮ ಕೈಗೊಂಡಿದೆ ಹಾಗೂ ಸದರಿ ಗ್ರಾಮವನ್ನು ಕಡಬ ಠಾಣಾ ವ್ಯಾಪ್ತಿಗೆ ಸೇರಿಸಲು ಇರುವ ತೊಡಕುಗಳೇನು?” ಎಂದು ಶಾಸಕರು ಪ್ರಶ್ನಿಸಿದ್ದರು.

ಗೃಹ ಸಚಿವರ ಲಿಖಿತ ಉತ್ತರ: ಶಾಸಕರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು:

  • ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲ ಗ್ರಾಮವು ಪ್ರಸ್ತುತ ಬೆಳ್ಳಾರೆ ಪೊಲೀಸ್ ಠಾಣೆಯ ವ್ಯಾಪ್ತಿಗೆ ಒಳಪಟ್ಟಿದೆ.

    kadaba times
    kadaba times
  • ಎಡಮಂಗಲದಿಂದ ಪಾಲೋಳಿಯ ಮೂಲಕ ಕಡಬಕ್ಕೆ ಹೊಸ ಸೇತುವೆಯ ನಿರ್ಮಾಣವಾಗಿದ್ದು, ಸೇತುವೆ ನಿರ್ಮಾಣದಿಂದಾಗಿ ಎಡಮಂಗಲ ಗ್ರಾಮಕ್ಕೆ ಕಡಬ ತಾಲೂಕು ಕೇಂದ್ರವು ಅತ್ಯಂತ ಹತ್ತಿರವಾಗಿರುತ್ತದೆ.

  • ಎಡಮಂಗಲ ಗ್ರಾಮವು ಬೆಳ್ಳಾರೆ ಪೊಲೀಸ್ ಠಾಣೆಯಿಂದ 13 ಕಿ.ಮೀ ಹಾಗೂ ಕಡಬ ಪೊಲೀಸ್ ಠಾಣೆಯಿಂದ ಕೇವಲ 06 ಕಿ.ಮೀ ಅಂತರದಲ್ಲಿದೆ.

  • ಈ ಹಿನ್ನೆಲೆಯಲ್ಲಿ ಎಡಮಂಗಲ ಗ್ರಾಮವನ್ನು ಕಡಬ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರ್ಪಡೆಗೊಳಿಸುವ ಪ್ರಸ್ತಾವನೆಯು ಪೊಲೀಸ್ ಇಲಾಖಾ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಹೊಸ ಸೇತುವೆ ನಿರ್ಮಾಣದ ಬಳಿಕ ಎಡಮಂಗಲ ಜನರಿಗೆ ಕಡಬ ಸಂಪರ್ಕ ಸುಲಭವಾಗಿದ್ದು, ಪೊಲೀಸ್ ಠಾಣಾ ವ್ಯಾಪ್ತಿಯೂ ಬದಲಾದರೆ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಹಾಗೂ ಕಾನೂನು ಸುವ್ಯವಸ್ಥೆ ಪಾಲನೆಗೆ ಹೆಚ್ಚು ಅನುಕೂಲವಾಗಲಿದೆ ಎಂಬುದು ಸಾರ್ವಜನಿಕರ ನಿರೀಕ್ಷೆಯಾಗಿದೆ.

Related Articles

Latest Articles