ನಾಳೆ (ಆಗಸ್ಟ್ 4)ಕಡಬ ತಾಲೂಕು ಮಟ್ಟದ SC-ST ಕುಂದು ಕೊರತೆ ಸಭೆ

kadaba times

ಕಡಬ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಆಗಸ್ಟ್ 04, 2026ರ ಮಂಗಳವಾರ ಪೂರ್ವಾಹ್ನ 11.00 ಗಂಟೆಗೆ ಕಡಬ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ (SC-ST) ಕುಂದು ಕೊರತೆ ಸಮಿತಿ ಸಭೆಯನ್ನು ಕರೆಯಲಾಗಿದೆ.

kadaba times
uniq

ಕಡಬ:ಕಡಬ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ಸಹಯೋಗದೊಂದಿಗೆ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ (SC-ST) ಕುಂದು ಕೊರತೆ ಸಮಿತಿ ಸಭೆಯನ್ನು ಕರೆಯಲಾಗಿದೆ.

ಕಡಬ ತಹಶೀಲ್ದಾರರ ಮೌಖಿಕ ಆದೇಶದಂತೆ, ಆಗಸ್ಟ್ 04, 2026ರ ಮಂಗಳವಾರ ಬೆಳಿಗ್ಗೆ 11.00 ಗಂಟೆಗೆ ಕಡಬ ತಾಲೂಕು ಆಡಳಿತ ಸೌಧದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಈ ಸಭೆಯು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಜರುಗಲಿದೆ. ಈ ಸಭೆಗೆ ಕಡಬ ತಾಲೂಕಿನ ವಿವಿಧ ಇಲಾಖಾ ಅನುಷ್ಠಾನ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳು ಮತ್ತು ಕುಂದು-ಕೊರತೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲು ಕೋರಲಾಗಿದೆ.

kadaba times
kadaba times

ಸಭೆಗೆ ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್, ಶಿಕ್ಷಣ, ಆರೋಗ್ಯ, ಲೋಕೋಪಯೋಗಿ (PWD), ಪಂಚಾಯತ್ ರಾಜ್, ಮೆಸ್ಕಾಂ, ಪಶುಸಂಗೋಪನೆ ಹಾಗೂ ಅರಣ್ಯ ಇಲಾಖೆಯ ಪ್ರಮುಖ ಅಧಿಕಾರಿಗಳಿಗೆ ಅಧಿಕೃತ ಸೂಚನಾ ಪತ್ರ ರವಾನಿಸಲಾಗಿದೆ.

Related Articles

Latest Articles