ಕಾಣಿಯೂರು ಗ್ರಾ.ಪಂ ವ್ಯಾಪ್ತಿ: ಕಸ್ತೂರಿ ರಂಗನ್ ವರದಿ ವಿರೋಧಿಸಿ ಗ್ರಾಮಸ್ಥರ ಬೃಹತ್ ಸಭೆ

kadaba times

ಕಾಣಿಯೂರು / ದೋಳ್ಪಾಡಿ:ಕಸ್ತೂರಿ ರಂಗನ್ ವರದಿಯನ್ನು ತೀವ್ರವಾಗಿ ವಿರೋಧಿಸಿ ‘ಮಲೆನಾಡು ಜನಹಿತ ರಕ್ಷಣಾ ವೇದಿಕೆ’ಯ ದೋಳ್ಪಾಡಿ ಗ್ರಾಮ ಸಮಿತಿಯ ಮಹತ್ವದ ಸಭೆಯು ಕಾಣಿಯೂರು ಸಮೀಪದ ದೋಳ್ಪಾಡಿಯಲ್ಲಿ ಇತ್ತೀಚೆಗೆ ಜರುಗಿತು.

kadaba times
uniq

ಸಭೆಯಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕರಾದ ಕಿಶೋರ್ ಶಿರಾಡಿ ಅವರು ವಿಷಯ ಮಂಡಿಸಿ ಮಾತನಾಡಿ, “ಕಸ್ತೂರಿ ರಂಗನ್ ವರದಿ ಜಾರಿಯಾಗುವುದರಿಂದ ಮಲೆನಾಡಿನ ಗ್ರಾಮೀಣ ಪ್ರದೇಶಗಳ ರೈತರು ಹಾಗೂ ಜನಸಾಮಾನ್ಯರಿಗೆ ಹಲವು ರೀತಿಯ ಗಂಭೀರ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ಇದೀಗ ಹೊರಡಿಸಿರುವ 7ನೇ ಕರಡು ಅಧಿಸೂಚನೆಯಲ್ಲಿಯೂ ಮಲೆನಾಡಿನ ಗ್ರಾಮೀಣ ಪ್ರದೇಶಗಳ ಜನಜೀವನ ಹಾಗೂ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದಂತೆ ಹಲವು ಕಠಿಣ ನಿಬಂಧನೆಗಳಿವೆ” ಎಂದು ತೀವ್ರ ಆತಂಕ ವ್ಯಕ್ತಪಡಿಸಿದರು.

“ಕೃಷಿ ಚಟುವಟಿಕೆಗಳು, ರಾಸಾಯನಿಕ ಗೊಬ್ಬರ ಬಳಕೆ, ರಸ್ತೆ ಅಭಿವೃದ್ಧಿ ಹಾಗೂ ಇತರ ಮೂಲಭೂತ ಸೌಕರ್ಯಗಳ ಮೇಲೆ ಈ ವರದಿ ತೀವ್ರ ಪರಿಣಾಮ ಬೀರುವ ಸಾಧ್ಯತೆಯಿದೆ. ಕಸ್ತೂರಿ ರಂಗನ್ ವರದಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ಜನರಿಗೆ ಮಾತ್ರವಲ್ಲದೆ, ಬಾಧಿತ ಗ್ರಾಮಗಳ ಗಡಿಯಿಂದ ಸುಮಾರು 10 ಕಿ.ಮೀ. ವ್ಯಾಪ್ತಿಯಲ್ಲಿರುವ ಗ್ರಾಮಗಳ ಮೇಲೆಯೂ ಇದರ ದುಷ್ಪರಿಣಾಮ ಬೀರಬಹುದು” ಎಂದು ಅವರು ಎಚ್ಚರಿಸಿದರು.

kadaba times
kadaba times

ಪಕ್ಷಾತೀತ, ಜಾತ್ಯತೀತ ಹೋರಾಟಕ್ಕೆ ನಿರ್ಧಾರ:ಮಲೆನಾಡಿನ ಜನರ ಮೂಲಭೂತ ಹಕ್ಕುಗಳನ್ನು ಪ್ರತಿಪಾದಿಸಿದ ಅವರು, “ಪಕ್ಷಾತೀತ, ಜಾತ್ಯತೀತವಾಗಿ, ಜನಹಿತ ಹಾಗೂ ರೈತರ ಹಕ್ಕುಗಳನ್ನು ಎತ್ತಿಹಿಡಿಯಲು ಮತ್ತು ಮಲೆನಾಡಿನ ಜನಜೀವನದ ರಕ್ಷಣೆಗಾಗಿ ವಿಷಯಾಧಾರಿತ ಹಾಗೂ ಸಂಪೂರ್ಣ ಕಾನೂನಾತ್ಮಕವಾಗಿ ಹೋರಾಟವನ್ನು ಮುಂದುವರಿಸಲಾಗುವುದು” ಎಂದು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಗ್ರಾಮ ಸಂಚಾಲಕರಾದ ಸೀತಾರಾಮ ಮರಕ್ಕಡ, ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಪ್ರಮುಖರಾದ ರಮಾನಂದ ಎಣ್ಣೆಮಜಲು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಿಲನ್ ಬಾಳಿಕ, ಗ್ರಾಮ ಸಮಿತಿಯ ಪ್ರಮುಖರು, ಸದಸ್ಯರು ಹಾಗೂ ಗ್ರಾಮದ ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು..

Related Articles

Latest Articles