ಕುಂಡಡ್ಕ ಪಾಲ್ಸ್‌ನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ; 7 ದಿನವಾದರೂ ಆರೋಪಿಗಳ ಬಂಧನವಿಲ್ಲ

kadaba times

ಕಡಬ ತಾಲೂಕಿನ ಬಂಟ್ರ ಗ್ರಾಮದ ಕುಂಡಡ್ಕ ಪಾಲ್ಸ್ ಬಳಿ 9ನೇ ತರಗತಿ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ಹಾಗೂ  ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಅಟ್ರಾಸಿಟಿ ಕೇಸ್ ದಾಖಲಾಗಿ 7 ದಿನ ಕಳೆದರೂ ಆರೋಪಿಗಳನ್ನು ಬಂಧಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಐಜಿಪಿ ಹಾಗೂ ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೂ ದೂರು ಸಲ್ಲಿಸಲಾಗಿದೆ. 

kadaba times
uniq

ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ರ ಗ್ರಾಮದ ಕುಂಡಡ್ಕ ಪಾಲ್ಸ್ ಬಳಿ ಶಾಲಾ ವಿದ್ಯಾರ್ಥಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ  ಬೆದರಿಕೆಯೊಡ್ಡಿದ ಘಟನೆ ನಡೆದು ಏಳು ದಿನಗಳು ಕಳೆದಿದ್ದರೂ   ಆರೋಪಿಗಳನ್ನು ಬಂಧಿಸದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಮಕ್ಕಳ ಮೇಲಿನ ದೌರ್ಜನ್ಯವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಆರೋಪಿಗಳನ್ನು ಬಂಧಿಸುವಂತೆ ಹಾಗೂ ಸಂತ್ರಸ್ತ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ಪೊಲೀಸ್ ಮಹಾನಿರೀಕ್ಷಕರಿಗೆ (IGP) ಮತ್ತು ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿದ್ದಾರೆ. ಈ ನಡುವೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೌನವನ್ನು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಘಟನೆಯ ವಿವರ ಹಾಗೂ ಹಿನ್ನೆಲೆ: ಆಗಸ್ಟ್ 03ರಂದು ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ 9ನೇ ತರಗತಿಯ 14 ವರ್ಷದ ಬಾಲಕನು ತನ್ನ ಇಬ್ಬರು ಸಹಪಾಠಿಗಳೊಂದಿಗೆ ಬಂಟ್ರ ಗ್ರಾಮದ ಕುಂಡಡ್ಕ ಜಲಪಾತಕ್ಕೆ ತೆರಳಿದ್ದನು. ಈ ವೇಳೆ ಅಲ್ಲಿಗೆ ಬಂದ ಬಾಲಕಿಯೊಬ್ಬಳ ತಂದೆ (A1), ಉಮೇಶ್ (A2), ದೇವಿಪ್ರಸಾದ್ (A3), ರೋಹಿತ್ (A4) ಹಾಗೂ ಚಂದನ್ (A5) ಎಂಬವರು ಬಾಲಕರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ.

kadaba times
kadaba times

ಈ ಸಂಬಂಧ ಅಪ್ರಾಪ್ತ ಬಾಲಕ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 97/2026 ರಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST Atrocity Act) ದೌರ್ಜನ್ಯ ತಡೆ ಕಾಯ್ದೆಯಡಿ ಕಡಬ ಎಸ್.ಐ ಜಂಬೂರಾಜ್ ಮಹಾಜನ್ ಪ್ರಕರಣ ದಾಖಲಿಸಿಕೊಂಡಿದ್ದರು.

ಕೌಂಟರ್ ಕೇಸ್ ಹುನ್ನಾರ ವಿಫಲ: ಅಟ್ರಾಸಿಟಿ ಪ್ರಕರಣ ದಾಖಲಾಗುತ್ತಿದ್ದಂತೆ ಪ್ರಕರಣದ ತೀವ್ರತೆಯನ್ನು ತಗ್ಗಿಸಲು ಮತ್ತು ಹಾದಿ ತಪ್ಪಿಸಲು ಆರೋಪಿಗಳ ಕಡೆಯಿಂದ ಯತ್ನ ನಡೆದಿತ್ತು. ಘಟನೆ ನಡೆದು 8 ದಿನಗಳ ನಂತರ ಮುಖ್ಯ ಆರೋಪಿಯ ಪುತ್ರಿಯ ಮೂಲಕ ಅಪ್ರಾಪ್ತ ಬಾಲಕರ ವಿರುದ್ಧವೇ ‘ಲೈಂಗಿಕ ದೌರ್ಜನ್ಯ’ದ ಕೌಂಟರ್ ದೂರು ನೀಡಲಾಗಿತ್ತು. ಆದರೆ, ಪೊಲೀಸರು ಪ್ರಾಥಮಿಕ ವಿಚಾರಣೆ ನಡೆಸಿ ವಾಸ್ತವಾಂಶಗಳನ್ನು ಕಲೆಹಾಕುವ ಮೂಲಕ ಕಟ್ಟುಕಥೆಯ ಹುನ್ನಾರವನ್ನು ಬಯಲಿಗೆಳೆದಿದ್ದರು.

ಆರೋಪಿಗಳ ಬಂಧನ ವಿಳಂಬಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಕಡಬ ತಾಲೂಕು ಸಂಚಾಲಕ ವಸಂತ ಕುಬಲಾಡಿ, “ಕಡಬ ಪೊಲೀಸರು ಯಾವುದೇ ರಾಜಕೀಯ ಅಥವಾ ಸ್ಥಳೀಯ ಪ್ರಭಾವ-ಒತ್ತಡಗಳಿಗೆ ಮಣಿಯಬಾರದು. ಮಕ್ಕಳ ಮೇಲೆ ದೌರ್ಜನ್ಯವೆಸಗಿದ ಅಟ್ರಾಸಿಟಿ ಪ್ರಕರಣದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದರು

Related Articles

Latest Articles