POCSO Arrest-ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ:ಯುವಕನನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

kadaba times

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿ ಜೀವಬೆದರಿಕೆಯೊಡ್ಡಿದ್ದ  ಪೋಕ್ಸೋ ಪ್ರಕರಣದ ಆರೋಪಿಯನ್ನು ಧರ್ಮಸ್ಥಳ ಠಾಣಾ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

kadaba times
uniq

ಆಂಧ್ರಪ್ರದೇಶದ ಜಂಗಲ್ಪಲ್ಲಿ ನಿವಾಸಿ ಶ್ರೀಕಾಂತ್ (21) ಬಂಧಿತ ಆರೋಪಿ.

ಘಟನೆಯ ವಿವರ:ಆರೋಪಿ ಶ್ರೀಕಾಂತ್ 2025ರ ಸೆಪ್ಟೆಂಬರ್‌ನಿಂದ ನವೆಂಬರ್ ನಡುವಿನ ಅವಧಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಅತ್ಯಾಚಾರವೆಸಗಿದ್ದನು. ಅಲ್ಲದೆ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದನು. ದೌರ್ಜನ್ಯಕ್ಕೊಳಗಾದ ಬಾಲಕಿ ಗರ್ಭಿಣಿಯಾಗಿದ್ದು, ಇತ್ತೀಚೆಗೆ ಮಗುವಿಗೆ ಜನ್ಮ ನೀಡಿದ್ದಾಳೆ.

ಈ ಕೃತ್ಯಕ್ಕೆ ಸಂಬಂಧಿಸಿದಂತೆ ದಿನಾಂಕ 23.08.2026 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿಅಪರಾಧ ಕ್ರಮಾಂಕ: 60/2026 ಕಲಂಗಳು: 64(2)(m), 65(1), 351(2) BNS ಹಾಗೂ ಕಲಂ 4(2), 6 ಪೋಕ್ಸೋ ಕಾಯ್ದೆ (POCSO Act)ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ತೀವ್ರಗೊಳಿಸಿದ್ದರು.

kadaba times
kadaba times

ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಆರೋಪಿ ಸೆರೆ:ಪ್ರಕರಣ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಿಂದ ತಲೆಮರೆಸಿಕೊಂಡು ಪರಾರಿಯಾಗಿದ್ದ ಆರೋಪಿಯ ಪತ್ತೆಗೆ ಧರ್ಮಸ್ಥಳ ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು.ಧರ್ಮಸ್ಥಳ ಠಾಣಾ ಪಿಎಸ್‌ಐ (PSI) ಸಮರ್ಥ್ ಆರ್. ಗಾಣಿಗೇರ ಅವರ ನೇತೃತ್ವದಲ್ಲಿ ಹೆಡ್ ಕಾನ್ಸ್‌ಟೇಬಲ್‌ಗಳಾದ ವೃಷಭ (HC 418), ಮಹೇಶ್ (HC 369) ಹಾಗೂ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಚರಣ್ ರಾಜ್ (CPC 975) ಅವರಿದ್ದ ತಂಡವು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ದಿನಾಂಕ 25.08.2026 ರಂದು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಆರೋಪಿ ಶ್ರೀಕಾಂತ್‌ನನ್ನು ದಸ್ತಗಿರಿ ಮಾಡಿದೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ (Judicial Custody) ವಿಧಿಸಿ ಆದೇಶಿಸಿದೆ.

Related Articles

Latest Articles