ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಹಿಂಬಾಲಿಸಿದ ವ್ಯಕ್ತಿ ಪೋಕ್ಸೋ ಕೇಸಿನಲ್ಲಿ ಜೈಲು ಪಾಲು

kadaba times

16 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ನಿರಂತರವಾಗಿ ಹಿಂಬಾಲಿಸಿ (Stalking) ಕಿರುಕುಳ ನೀಡುತ್ತಿದ್ದ ಆರೋಪದಡಿ ಸರಪಾಡಿ ನಿವಾಸಿ ಜಯಂತ್ (47) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು  ಹಾಗೂ ಬಿಎನ್‌ಎಸ್ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

kadaba times
uniq

ಕಾಲೇಜಿಗೆ ತೆರಳುತ್ತಿದ್ದ 16 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳನ್ನು ನಿರಂತರವಾಗಿ ಬಸ್ಸಿನಲ್ಲಿ ಹಾಗೂ ಬಸ್ ನಿಲ್ದಾಣದಲ್ಲಿ ಬೆನ್ನುಬಿದ್ದು ಮಾನಸಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ನಿವಾಸಿ ಜಯಂತ್ (47) ಬಂಧಿತ ಆರೋಪಿ.

ಘಟನೆಯ ವಿವರ: ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿಯೊಬ್ಬಳು ವಿದ್ಯಾಭ್ಯಾಸ ಮಾಡುತ್ತಿದ್ದು, ಕಳೆದ ಕೆಲವು ದಿನಗಳಿಂದ ಮಧ್ಯವಯಸ್ಕ ವ್ಯಕ್ತಿಯೊಬ್ಬ ಬಾಲಕಿ ಬಸ್ಸಿನಲ್ಲಿ ಪ್ರಯಾಣಿಸುವಾಗ ಆಕೆಯನ್ನು ನಿರಂತರವಾಗಿ ಹಿಂಬಾಲಿಸುತ್ತಿದ್ದನು.

ಆಗಸ್ಟ್ 19ರಂದು ಸಂಜೆ ವೇಳೆಗೆ ಬಾಲಕಿಯು ಮನೆಗೆ ತೆರಳಲು ಕಲ್ಲಡ್ಕ ಬಸ್ ನಿಲ್ದಾಣಕ್ಕೆ ಬಂದಾಗಲೂ ಸದರಿ ವ್ಯಕ್ತಿ ಅಲ್ಲಿಗೆ ಬಂದು ಬಾಲಕಿಯನ್ನೇ ದುರುದ್ದೇಶದಿಂದ ದಿಟ್ಟಿಸಿ ನೋಡುತ್ತಿದ್ದನು. ಇದರಿಂದ ತೀವ್ರ ಭಯಭೀತಳಾದ ಬಾಲಕಿಯು ತಕ್ಷಣವೇ ಸಮೀಪದಲ್ಲೇ ತಾಯಿ ಕೆಲಸ ಮಾಡುತ್ತಿದ್ದ ಕಚೇರಿಗೆ ತೆರಳಿ ವಿಷಯ ತಿಳಿಸಿದ್ದಾಳೆ.

kadaba times
kadaba times

ತಾಯಿ ತನ್ನ ಕಚೇರಿಯ ಮಾಲೀಕರೊಂದಿಗೆ ಕೂಡಲೇ ಕಲ್ಲಡ್ಕ ಬಸ್ ನಿಲ್ದಾಣಕ್ಕೆ ಬಂದು ಪರಿಶೀಲಿಸಿದಾಗ ಆ ವ್ಯಕ್ತಿ ಅಲ್ಲೇ ನಿಂತಿರುವುದು ಕಂಡುಬಂದಿದೆ. ಆತನನ್ನು ತಡೆದು ಪ್ರಶ್ನಿಸಿದಾಗ ಆತ ತನ್ನ ಹೆಸರು ಜಯಂತ್ ಎಂದು ತಿಳಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ.

ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು: ಘಟನೆಗೆ ಸಂಬಂಧಿಸಿ ಬಾಲಕಿಯ ತಾಯಿ ನೀಡಿದ ಅಧಿಕೃತ ದೂರಿನ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 116/2026, ಕಲಂ: 78 ಬಿಎನ್‌ಎಸ್ (BNS 2023 – ಮಹಿಳೆಯರನ್ನು ಹಿಂಬಾಲಿಸುವುದು) ಹಾಗೂ ಕಲಂ: 12 ಪೋಕ್ಸೋ ಕಾಯ್ದೆ (POCSO Act 2012) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೆತ್ತಿಕೊಂಡ ಬಂಟ್ವಾಳ ನಗರ ಠಾಣಾ ಪೊಲೀಸರು ಆರೋಪಿ ಸರಪಾಡಿ ನಿವಾಸಿ ಜಯಂತ್‌ನನ್ನು ವಶಕ್ಕೆ ಪಡೆದು, ತೀವ್ರ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Related Articles

Latest Articles