ಪೆರಿಯಶಾಂತಿ ಬಳಿ ಹೆದ್ದಾರಿಯ ಗುಡ್ಡ ಕುಸಿತ: ಮಣ್ಣು ,ಬೃಹತ್ ಮರ ತೆರವು

kadaba times

ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಪೆರಿಯಶಾಂತಿಯಲ್ಲಿ ಸತತ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಗುಡ್ಡ ಕುಸಿದು, ಬೃಹತ್ ಮರವೊಂದು ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದಿದೆ. ಇದರಿಂದ ಕೆಲಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ನಂತರ ಚತುಷ್ಪಥ ಕಾಮಗಾರಿಯ ಗುತ್ತಿಗೆ ಸಂಸ್ಥೆ ಸಿಬ್ಬಂದಿ ಜೆಸಿಬಿ ಮೂಲಕ ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದ್ದಾರೆ

kadaba times
uniq

ಕಡಬ ತಾಲೂಕಿನಾದ್ಯಂತ ಕಳೆದ ಮೂರು ದಿನಗಳಿಂದ ಬಿಡುವಿಲ್ಲದೆ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ನೆಲ್ಯಾಡಿಯ ಪೆರಿಯಶಾಂತಿ ಸಮೀಪ ಭಾನುವಾರ ಗುಡ್ಡ ಕುಸಿತ ಸಂಭವಿಸಿದೆ.

ಗುಡ್ಡ ಕುಸಿತದ ರಭಸಕ್ಕೆ ಅದರ ಮೇಲಿದ್ದ ಬೃಹತ್ ಗಾತ್ರದ ಮರವೊಂದು ರಾಷ್ಟ್ರೀಯ ಹೆದ್ದಾರಿ (NH 75) ಮಧ್ಯಕ್ಕೆ ಉರುಳಿ ಬಿದ್ದಿದ್ದು, ಕೆಲಕಾಲ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ತಬ್ಧಗೊಂಡಿತ್ತು.

ಗುಡ್ಡ ಕುಸಿತದಿಂದಾಗಿ ಭಾರಿ ಪ್ರಮಾಣದ ಮಣ್ಣು ಹಾಗೂ ಮರದ ಕಾಯಿಗಳು ರಸ್ತೆಬದಿಯ ಎರಡೂ ದಿಕ್ಕಿನ ಹಾದಿಗಳನ್ನು ಆವರಿಸಿಕೊಂಡಿದ್ದರಿಂದ ನೂರಾರು ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಯಿತು. ವಾಹನ ಚಾಲಕರು ಹಾಗೂ ಪ್ರಯಾಣಿಕರು ತೀವ್ರ ಪರದಾಟ ನಡೆಸಿದರು.

kadaba times
kadaba times

ವಿಷಯ ತಿಳಿಯುತ್ತಿದ್ದಂತೆಯೇ ತಕ್ಷಣವೇ ಸ್ಪಂದಿಸಿದ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿಯ ಗುತ್ತಿಗೆ ಸಂಸ್ಥೆಯ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದರು. ತಕ್ಷಣವೇ ಜೆಸಿಬಿ ಯಂತ್ರವನ್ನು ಸ್ಥಳಕ್ಕೆ ಕರಸಿ, ರಸ್ತೆಗೆ ಬಿದ್ದಿದ್ದ ಅಪಾರ ಪ್ರಮಾಣದ ಮಣ್ಣು ಹಾಗೂ ಬೃಹತ್ ಮರವನ್ನು ತೆರವುಗೊಳಿಸಿ, ಸುಗಮ ವಾಹನ ಸಂಚಾರಕ್ಕೆ ಹಾದಿ ಸಗಮಗೊಳಿಸಿದರು.

ಧಾರಾಕಾರ ಮಳೆ ಮುಂದುವರಿದಿರುವುದರಿಂದ ಘಾಟಿ ಹಾಗೂ ಮಲೆನಾಡು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಬದಿಯ ಗುಡ್ಡ ಪ್ರದೇಶಗಳಲ್ಲಿ ಮತ್ತಷ್ಟು ಕುಸಿತ ಉಂಟಾಗುವ ಭೀತಿ ಎದುರಾಗಿದ್ದು, ವಾಹನ ಚಾಲಕರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

Related Articles

Latest Articles