Supreme Court Order:ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣದ ಮರುತನಿಖೆಗೆ 3 ತಿಂಗಳ ಗಡುವು ನೀಡಿ ಆದೇಶ

kadaba times

ನವದೆಹಲಿ / ಬೆಳ್ತಂಗಡಿ: ರಾಜ್ಯಾದ್ಯಂತ ಭಾರಿ ಸಂಚಲನಕ್ಕೆ  ಕಾರಣವಾಗಿದ್ದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಪ್ರಕರಣದ ಸಮಗ್ರ ಮರುತನಿಖೆಗೆ ಆದೇಶ ನೀಡಿರುವ ನ್ಯಾಯಾಲಯ, ತನಿಖೆಯನ್ನು ಪೂರ್ಣಗೊಳಿಸಲು ಮೂರು ತಿಂಗಳ  ಗಡುವನ್ನು ನಿಗದಿಪಡಿಸಿದೆ.

kadaba times
uniq

ಕೇಂದ್ರ ತನಿಖಾ ದಳ (CBI) ಈ ಹಿಂದೆ ನಡೆಸಿದ ತನಿಖೆಯಲ್ಲಿ ಆರೋಪಿಗಳನ್ನು ಖುಲಾಸೆಗೊಳಿಸಲಾಗಿತ್ತು. ಇದನ್ನು ಪ್ರಶ್ನಿಸಿ ಹಾಗೂ ಮರುತನಿಖೆಗೆ ಕೋರಿ ಸೌಜನ್ಯಾ ಅವರ ತಾಯಿ ಕುಸುಮಾವತಿ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ, ನ್ಯಾಯಕ್ಕಾಗಿ ಅವರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ (SLP) ಸಲ್ಲಿಸಿದ್ದರು.

ಸಿಬಿಐ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಕಿಡಿ: ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಹಾಗೂ ಸಂಜೀವ್ ಸಚ್‌ದೇವ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡಿದೆ. ವಿಚಾರಣೆ ವೇಳೆ ಸಿಬಿಐನ ತನಿಖಾ ವೈಖರಿಯನ್ನು ನ್ಯಾಯಪೀಠ ಕಟುವಾಗಿ ಟೀಕಿಸಿದೆ:

  • “ಸಿಬಿಐ ಅಧಿಕಾರಿಗಳು ಯಾವುದೇ ಸ್ವತಂತ್ರ ತನಿಖೆಯನ್ನು ನಡೆಸಿಲ್ಲ. ಬದಲಾಗಿ ತನಿಖಾ ಅಧಿಕಾರಿಯೇ ನ್ಯಾಯಾಧೀಶರಂತೆ ವರ್ತಿಸಿದ್ದಾರೆ.”

  • “ಹಿಂದೆ ಸಂಗ್ರಹಿಸಲಾಗಿದ್ದ ಹಳೆಯ ಸಾಕ್ಷ್ಯಗಳನ್ನು ಮೇಲ್ನೋಟಕ್ಕೆ ಪರಿಶೀಲಿಸಿ ವರದಿ ಸಲ್ಲಿಸಲಾಗಿದೆ ಹೊರತು, ನೈಜ ಅಪರಾಧಿಗಳನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ವಸ್ತುನಿಷ್ಠ ತನಿಖೆ ಮಾಡಿಲ್ಲ.”

    kadaba times
    kadaba times
  • ಇದು ಕಳಪೆ ಹಾಗೂ ಸ್ವತಂತ್ರವಲ್ಲದ ಪರಾವಲಂಬಿ ತನಿಖೆಯಾಗಿದ್ದು, ಸಿಬಿಐನ ಅತ್ಯಂತ ಕೆಟ್ಟ ಕಾರ್ಯವೈಖರಿಯನ್ನು ಪ್ರತಿಬಿಂಬಿಸುತ್ತದೆ ಎಂದು ನ್ಯಾಯಾಲಯ ಜುಲೈನಲ್ಲಿ ನಡೆದ ಕಲಾಪದಲ್ಲೇ ತರಾಟೆಗೆ ತೆಗೆದುಕೊಂಡು ತೀರ್ಪನ್ನು ಕಾಯ್ದಿರಿಸಿತ್ತು.

ತನ್ನ ಮಗಳಿಗೆ ನ್ಯಾಯ ಸಿಗಬೇಕು ಎಂದು ಕಳೆದ ಹಲವು ವರ್ಷಗಳಿಂದ ಎಡೆಬಿಡದೆ ನ್ಯಾಯಾಲಯಗಳು ಹಾಗೂ ಸಾರ್ವಜನಿಕ ವೇದಿಕೆಗಳಲ್ಲಿ ಹೋರಾಟ ನಡೆಸಿಕೊಂಡು ಬಂದಿರುವ ತಾಯಿ ಕುಸುಮಾವತಿ ಗೌಡ ಅವರಿಗೆ ಸುಪ್ರೀಂ ಕೋರ್ಟ್‌ನ ಈ ಆದೇಶವು ಹೊಸ ಭರವಸೆ ಮೂಡಿಸಿದೆ.

ಮರುತನಿಖೆಯನ್ನು ಪಾರದರ್ಶಕವಾಗಿ ನಡೆಸಿ ಮೂರು ತಿಂಗಳೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್  ನಿರ್ದೇಶನ ನೀಡಿದ್ದು, ಮುಂದಿನ ದಿನಗಳಲ್ಲಿ ತನಿಖಾ ಹಾದಿ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬುದು  ಕುತೂಹಲ ಕೆರಳಿಸಿದೆ.

Related Articles

Latest Articles