ಕುಂಡಡ್ಕ ಫಾಲ್ಸ್ ಬಳಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ : ಆರೋಪಿಗಳಿಗೆ ಜಾಮೀನು

kadaba times

ಕಡಬ ತಾಲೂಕಿನ ಬಂಟ್ರ ಗ್ರಾಮದ ಕುಂಡಡ್ಕ ಜಲಪಾತದ ಬಳಿ 9ನೇ ತರಗತಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಜೀವಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳಿಗೆ ಪುತ್ತೂರು ನ್ಯಾಯಾಲಯವು ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

kadaba times
uniq

ಕಡಬ: ಕಡಬ ತಾಲೂಕಿನ ಬಂಟ್ರ ಗ್ರಾಮದ ಕುಂಡಡ್ಕ ಫಾಲ್ಸ್ ಸಮೀಪ 9ನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಅಮಾನವೀಯ ಹಲ್ಲೆ, ಜಾತಿ ನಿಂದನೆ ಹಾಗೂ ಜೀವಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧನದ ಭೀತಿಯಿಂದ  ತಲೆಮರೆಸಿಕೊಂಡಿದ್ದ ಐವರು ಆರೋಪಿಗಳಿಗೆ ಕೊನೆಗೂ ಪುತ್ತೂರು ನ್ಯಾಯಾಲಯವು ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯವು ಈ ಹಿಂದೆ ಸತತ ಮೂರು ಬಾರಿ ಮುಂದೂಡಿತ್ತು. ಇದರಿಂದಾಗಿ ಆರೋಪಿಗಳಿಗೆ ಬಂಧನದ ತೂಗುಗತ್ತಿ ಎದುರಾಗಿತ್ತು. ಇದೀಗ ಪುತ್ತೂರು ನ್ಯಾಯಾಲಯವು ಷರತ್ತುಗಳನ್ನು ವಿಧಿಸಿ ಜಾಮೀನು ಆದೇಶ ನೀಡಿದೆ.

ಘಟನೆಯ ಹಿನ್ನೆಲೆ:ಕಳೆದ ಆಗಸ್ಟ್ 03 ರಂದು ಶಾಲೆಗೆ ರಜೆ ಇದ್ದ ಕಾರಣ, 9ನೇ ತರಗತಿಯ 14 ವರ್ಷದ ಅಪ್ರಾಪ್ತ ಬಾಲಕನು ತನ್ನ ಇಬ್ಬರು ಸಹಪಾಠಿಗಳೊಂದಿಗೆ ಬಂಟ್ರ ಗ್ರಾಮದ ಕುಂಡಡ್ಕ ಜಲಪಾತಕ್ಕೆ ವಿಹಾರಕ್ಕಾಗಿ ತೆರಳಿದ್ದನು.

ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ಬಾಲಕಿಯೊಬ್ಬಳ ತಂದೆ (A1), ಉಮೇಶ್ (A2), ದೇವಿಪ್ರಸಾದ್ (A3), ರೋಹಿತ್ (A4) ಹಾಗೂ ಚಂದನ್ (A5) ಎಂಬವರು ಬಾಲಕರನ್ನು ತಡೆದು ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿತ್ತು.

kadaba times
kadaba times

ಹಲ್ಲೆಗೊಳಗಾದ ಅಪ್ರಾಪ್ತ ವಿದ್ಯಾರ್ಥಿ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣಾ ಪಿಎಸ್‌ಐ ಜಂಬುರಾಜ್ ಮಹಾಜನ್ ಅವರುಅಪರಾಧ ಸಂಖ್ಯೆ: 97/2026ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ (SC/ST Atrocity Act)ಅಡಿಯಲ್ಲಿ ಗಂಭೀರ ಪ್ರಕರಣ ದಾಖಲಿಸಿಕೊಂಡಿದ್ದರು.

ಕಟ್ಟುಕತೆಯ ಕೌಂಟರ್ ದೂರು – ಬಯಲಿಗೆಳೆದಿದ್ದ ಪೊಲೀಸರು:ಅಟ್ರಾಸಿಟಿ ಪ್ರಕರಣ ದಾಖಲಾಗುತ್ತಿದ್ದಂತೆಯೇ ಪ್ರಕರಣದ ತೀವ್ರತೆಯನ್ನು ತಗ್ಗಿಸಲು ಮತ್ತು ಕಾನೂನಿನ ಹಾದಿ ತಪ್ಪಿಸಲು ಆರೋಪಿಗಳ ಕಡೆಯಿಂದ ವ್ಯವಸ್ಥಿತ ಹುನ್ನಾರ ನಡೆದಿತ್ತು. ಘಟನೆ ನಡೆದ 8 ದಿನಗಳ ನಂತರ, ಮುಖ್ಯ ಆರೋಪಿಯ ಪುತ್ರಿಯ ಮೂಲಕ ಬಾಲಕರ ವಿರುದ್ಧವೇ ‘ಲೈಂಗಿಕ ದೌರ್ಜನ್ಯ’ದ ಕೌಂಟರ್ ದೂರು ಕೊಡಿಸಲಾಗಿತ್ತು. ಆದರೆ, ಕಡಬ ಪೊಲೀಸರು ತ್ವರಿತ ಪ್ರಾಥಮಿಕ ವಿಚಾರಣೆ ನಡೆಸಿ ವಾಸ್ತವಾಂಶಗಳನ್ನು ಪರಿಶೀಲಿಸಿದಾಗ, ಅದು ಕಟ್ಟುಕತೆಯ ಸುಳ್ಳು ದೂರು ಎಂಬುದು ಬಯಲಿಗೆ ಬಂದಿತ್ತು.

ಘಟನೆ ನಡೆದು ಹಲವು ದಿನಗಳೇ ಕಳೆದಿದ್ದರೂ ಆರೋಪಿಗಳನ್ನು ಬಂಧಿಸದಿರುವುದು ಸಾರ್ವಜನಿಕರು ಹಾಗೂ ದಲಿತ ಪರ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಮಕ್ಕಳ ಮೇಲಿನ ದೌರ್ಜನ್ಯವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಮತ್ತು ಸಂತ್ರಸ್ತ ಕುಟುಂಬಕ್ಕೆ ಭದ್ರತೆ ನೀಡುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ಪೊಲೀಸ್ ಮಹಾನಿರೀಕ್ಷಕರಿಗೆ (IGP) ಮತ್ತು ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ  ದೂರು ಸಲ್ಲಿಸಿದ್ದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ, ತಲೆಮರೆಸಿಕೊಂಡಿದ್ದ ಐವರು ಆರೋಪಿಗಳು ಪುತ್ತೂರಿನ ಹೆಸರಾಂತ ವಕೀಲರ ಮೂಲಕ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುರಸ್ಕರಿಸಿರುವ ಪುತ್ತೂರು ನ್ಯಾಯಾಲಯವು ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Related Articles

Latest Articles