ಕೋರ್ಟ್‌ನಿಂದಲೇ ಎಸ್ಕೇಪ್ ಆಗಲು ಯತ್ನಿಸಿದ್ದ ಸಿರಿಬಾಗಿಲಿನ ವ್ಯಕ್ತಿಗೆ ಜೈಲು ಶಿಕ್ಷೆ

kadaba times

ಕೊಲೆ ಪ್ರಕರಣದ ವಿಚಾರಣೆಗಾಗಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ ಕಲಾಪದ ವೇಳೆಯೇ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದ ಸಿರಿಬಾಗಿಲು ನಿವಾಸಿ ಜಯೇಶ್ @ ಜಯೇಶ್ ಕಾಂತ್ ಎಸ್. (41) ಎಂಬಾತನಿಗೆ ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯವು 2 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

kadaba times
uniq

ಪುತ್ತೂರು: ನ್ಯಾಯಾಲಯದಲ್ಲಿ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲೇ ಪೊಲೀಸರ ಕಣ್ತಪ್ಪಿಸಿ ತಪ್ಪಿಸಿಕೊಂಡು ಓಡಿಹೋಗಲು ಯತ್ನಿಸಿದ್ದ ಕೊಲೆ ಪ್ರಕರಣದ ಆರೋಪಿಯೊಬ್ಬನಿಗೆ ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ (ACJM) ನ್ಯಾಯಾಲಯವು ಎರಡು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.

 ಸಿರಿಬಾಗಿಲು ನಿವಾಸಿ ಜಯೇಶ್ @ ಜಯೇಶ್ ಕಾಂತ್ ಎಸ್., ಶಾಹಿರ್ @ ಶಾಕಿರ್ (41) ಶಿಕ್ಷೆಗೆ ಗುರಿಯಾದ ಆರೋಪಿ.

2016ರ ಕೋರ್ಟ್ ಕಲಾಪದ ವೇಳೆ ನಡೆದಿದ್ದ ಹೈಡ್ರಾಮಾ: ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣವೊಂದರಲ್ಲಿ (ಅಪರಾಧ ಸಂಖ್ಯೆ: 120/2008, ಕಲಂ: 450, 302, 201 IPC) ಜಯೇಶ್ ಪ್ರಮುಖ ಆರೋಪಿಯಾಗಿದ್ದ. ಈ ಪ್ರಕರಣದ ನ್ಯಾಯಾಂಗ ವಿಚಾರಣೆಗಾಗಿ ದಿನಾಂಕ 05-04-2016 ರಂದು ಆತನನ್ನು ಮಂಗಳೂರಿನ ಕೇಂದ್ರ ಕಾರಾಗೃಹದಿಂದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಕರೆತರಲಾಗಿತ್ತು.

ನ್ಯಾಯಾಲಯದ ಕಲಾಪಗಳು ನಡೆಯುತ್ತಿದ್ದ ಸಂದರ್ಭದಲ್ಲಿ ಆರೋಪಿ ಜಯೇಶ್ ಏಕಾಏಕಿ ನ್ಯಾಯಾಲಯದ ಆವರಣದಿಂದ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದನು. ತಕ್ಷಣವೇ ಎಚ್ಚೆತ್ತ ಪೊಲೀಸರು ಆತನನ್ನು ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು. ಈ ಸಂಬಂಧ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪದಡಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 91/2016, ಕಲಂ 224 IPC ಅಡಿಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿತ್ತು.

kadaba times
kadaba times

ನ್ಯಾಯಾಲಯದಿಂದ 2 ವರ್ಷ ಜೈಲು ಶಿಕ್ಷೆ ಪ್ರಕಟ:ಸದರಿ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಪುತ್ತೂರಿನ ಮಾನ್ಯ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ್ ಅವರು, ಆರೋಪಿಯ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಅಕ್ಟೋಬರ್ 5 ರಂದು (05-10-2026) ಆರೋಪಿ ಜಯೇಶ್‌ಗೆ 2 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಅಭಿಯೋಜನೆ ಮತ್ತು ತನಿಖೆ: ಘಟನೆ ನಡೆದ ಸಂದರ್ಭದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಸಬ್‌‌ ಇನ್‌ಸ್ಪೆಕ್ಟರ್ ಆಗಿದ್ದ ಖಾದರ್ ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ, ಸಾಕ್ಷ್ಯಾಧಾರಗಳೊಂದಿಗೆ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು.

ಸರ್ಕಾರದ ಪರವಾಗಿ ಕಾನೂನು ಅಭಿಯೋಜಕರಾದ (Prosecutor) ಮನೋಜ್ ಕುಮಾರ್ ಅವರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು.

Related Articles

Latest Articles