
ಕಡಬ:ಕೋಡಿಂಬಾಳ ಗ್ರಾಮದ ಕಾಂಞರವಿಳ ನಿವಾಸಿ, ತಂಗಚ್ಚನ್ ಅವರ ಪತ್ನಿ ಅನ್ನಮ್ಮ ತಂಗಚ್ಚನ್ (68) ಅವರು ಅಲ್ಪಕಾಲದ ಅಸೌಖ್ಯದಿಂದ ಕಡಬದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.


ಕಳೆದ ಕೆಲ ಸಮಯದಿಂದ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದ ಅವರು ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಕಡಬದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಕೊನೆಯುಸಿರೆಳೆದಿದ್ದಾರೆ.
ಅ.14ರಂದು ಅಂತಿಮ ವಿಧಿವಿಧಾನ: ಮೃತರ ಪುತ್ರಿ ಹಾಗೂ ಸೊಸೆ ವಿದೇಶದಲ್ಲಿ ಉದ್ಯೋಗದಲ್ಲಿರುವ ಕಾರಣ, ಅವರು ಊರಿಗೆ ಆಗಮಿಸಿದ ಬಳಿಕ ಅಕ್ಟೋಬರ್ 14ರ ಬುಧವಾರದಂದು ಮೃತರ ಸ್ವಗೃಹದಲ್ಲಿ ಧಾರ್ಮಿಕ ಪ್ರಾರ್ಥನೆ ಹಾಗೂ ಅಂತಿಮ ವಿಧಿವಿಧಾನಗಳು ನಡೆಯಲಿವೆ.


ಬಳಿಕ ಕೋಡಿಂಬಾಳದ ಸಂತ ಜಾರ್ಜ್ ಮಲಂಕರ ಕ್ಯಾಥೋಲಿಕ್ ಚರ್ಚ್ನಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.ಮೃತರು ಪತಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ
