ಕಡಬ: ಸೈಂಟ್ ಜೋಕಿಮ್ಸ್ ಶಾಲಾ ಶತಮಾನೋತ್ಸವಕ್ಕೆ ಚಾಲನೆ

kadaba times

ಕಡಬದ ಸೈಂಟ್ ಜೋಕಿಮ್ಸ್ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭದ ಧ್ವಜಾರೋಹಣ ಕಾರ್ಯಕ್ರಮವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿದೆ. ಶಿಕ್ಷಣವು ಕೇವಲ ಅಂಕ ಗಳಿಕೆಗೆ ಸೀಮಿತವಾಗದೆ ಮಕ್ಕಳಲ್ಲಿ ಶಿಸ್ತು, ಸಂಸ್ಕಾರ ಹಾಗೂ ಉನ್ನತ ಜೀವನ ಮೌಲ್ಯಗಳನ್ನು ಬೆಳೆಸಬೇಕು ಮತ್ತು ಊರಿನ ವಿದ್ಯಾಸಂಸ್ಥೆಗಳ ನಡುವೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಆರೋಗ್ಯಕರ ಪೈಪೋಟಿ ಇದ್ದಾಗ ಮಾತ್ರ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ದೊರೆಯಲು ಸಾಧ್ಯ ಎಂದು ಉಡುಪಿ ಮುಂಡ್ಕೂರು ಚರ್ಚ್‌ನ ಪ್ರಧಾನ ಧರ್ಮಗುರು ವಂ| ಅಲೆಕ್ಸಾಂಡರ್ ಲೂವಿಸ್ ತಿಳಿಸಿದ್ದಾರೆ.

kadaba times

ಕಡಬ: ಕಡಬದ ಇತಿಹಾಸಪ್ರಸಿದ್ಧ ಸೈಂಟ್ ಜೋಕಿಮ್ಸ್ ಹಿರಿಯ ಪ್ರಾಥಮಿಕ ಶಾಲೆಯ ನೂರು ವರ್ಷಗಳ ಸಂಭ್ರಮಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾದ ಶತಮಾನೋತ್ಸವ ಸಮಾರಂಭದ ಧ್ವಜಾರೋಹಣ ಕಾರ್ಯಕ್ರಮವು ಗುರುವಾರ ಶಾಲಾ ಆವರಣದಲ್ಲಿ ನೆರವೇರಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಉಡುಪಿ ಮುಂಡ್ಕೂರು ಅವರ್ ಲೇಡಿ ಆಫ್ ಫಾತಿಮ ಚರ್ಚ್‌ನ ಪ್ರಧಾನ ಧರ್ಮಗುರುಗಳಾದ ವಂ| ಅಲೆಕ್ಸಾಂಡರ್ ಲೂವಿಸ್ ಅವರು, “ಶಿಕ್ಷಣ ಎನ್ನುವುದು ಕೇವಲ ಅಂಕಗಳಿಕೆಯ ಗುರಿಯನ್ನು ಮಾತ್ರ ಹೊಂದಿರಬಾರದು. ಮಕ್ಕಳಲ್ಲಿ ನೈತಿಕ ಶಿಸ್ತು, ಸಂಸ್ಕಾರ ಹಾಗೂ ಉನ್ನತ ಜೀವನ ಮೌಲ್ಯಗಳನ್ನು ಮೈಗೂಡಿಸುವ ಶಿಕ್ಷಣವೇ ನಿಜವಾದ ಶಿಕ್ಷಣವಾಗಿದೆ. ಒಂದು ಊರಿನ ವಿದ್ಯಾಸಂಸ್ಥೆಗಳ ನಡುವೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಆರೋಗ್ಯಕರ ಪೈಪೋಟಿ ಇದ್ದಾಗ ಮಾತ್ರ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಲಭಿಸಲು ಸಾಧ್ಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕಡಬ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿಯ ಅಧ್ಯಕ್ಷ  ಕೆ.ಎಂ. ಹನೀಫ್ ಅವರು, “ತಾವು ಕಲಿತ ಶಿಕ್ಷಣ ಸಂಸ್ಥೆಗೆ ಸದಾ ಋಣಿಯಾಗಿರುವ ಮೂಲಕ ಅದರ ಸಮಗ್ರ ಬೆಳವಣಿಗೆಗೆ ಕೈಜೋಡಿಸುವುದು ಪ್ರತಿಯೊಬ್ಬ ಹಿರಿಯ ವಿದ್ಯಾರ್ಥಿಯ ಪ್ರಮುಖ ಜವಾಬ್ದಾರಿಯಾಗಿದೆ” ಎಂದು ಕರೆ ನೀಡಿದರು.

kadaba times
uniq

ಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗೂ ಉದ್ಯಮಿ ಪ್ರಸಾದ್ ಎನ್. ಕೆ. ಕಡಬ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆಯು ತನ್ನ ಸುದೀರ್ಘ ವಿದ್ಯಾಕ್ಷೇತ್ರದ ಕೊಡುಗೆಯ ಮೂಲಕ ಗ್ರಾಮೀಣ ಭಾಗದ ಸಾವಿರಾರು ಮಕ್ಕಳಿಗೆ ಉಜ್ವಲ ಭವಿಷ್ಯವನ್ನು ರೂಪಿಸಿಕೊಟ್ಟಿದೆ ಎಂದು ಶ್ಲಾಘಿಸಿದರು.

ನಿವೃತ್ತ ಹಾಗೂ ಹಾಲಿ ಶಿಕ್ಷಕರಿಗೆ ಗೌರವ ಸಮರ್ಪಣೆ: ಸಮಾರಂಭದ ಅಧ್ಯಕ್ಷತೆಯನ್ನು ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ| ಪ್ರಕಾಶ್ ಪಾವ್ಲ್ ಡಿ’ಸೋಜಾ ವಹಿಸಿದ್ದರು. ಇದೇ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕರು ಹಾಗೂ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು ಶಾಲು ಹೊದಿಸಿ ಗೌರವಿಸಲಾಯಿತು. ಸಭಾ ಕಾರ್ಯಕ್ರಮದ ಬಳಿಕ ಹಳೆ ವಿದ್ಯಾರ್ಥಿಗಳು ಹಾಗೂ ನಿವೃತ್ತ ಶಿಕ್ಷಕರಿಂದ ವಿಶೇಷ ವಿಚಾರಗೋಷ್ಠಿ ನಡೆಯಿತು.

ವೇದಿಕೆಯಲ್ಲಿ ಕಡಬ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ನೀಲಾವತಿ ಶಿವರಾಂ, ಶತಮಾನೋತ್ಸವ ಸಮಿತಿ ಸಂಯೋಜಕ ಕ್ಷೇವಿಯರ್ ಬೇಬಿ, ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ವಂ| ಸುನಿಲ್ ಪ್ರವೀಣ್ ಪಿಂಟೋ, ಸೈಂಟ್ ಜೋಕಿಮ್ಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷೆ ಜೆಸಿಂತ ವೇಗಸ್, ಕಾರ್ಯದರ್ಶಿ ಜೇಮ್ಸ್ ಕ್ರಿಶಲ್ ಡಿ’ಸೋಜಾ, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಗಣೇಶ್ ಡಿ., ಸೈಂಟ್ ಜೋಕಿಮ್ಸ್ ಪಿಯು ಕಾಲೇಜಿನ ಪ್ರಾಂಶುಪಾಲ ಕಿರಣ್‌ಕುಮಾರ್, ಪ್ರೌಢಶಾಲಾ ಮುಖ್ಯಶಿಕ್ಷಕಿ ಶ್ರೀಲತಾ, ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ದಕ್ಷಾ ಪ್ರಸಾದ್ ಉಪಸ್ಥಿತರಿದ್ದರು.

Related Articles

Latest Articles