ದಕ್ಷಿಣ ಕನ್ನಡ: ಅನೈತಿಕ ಸಂಬಂಧದ ಶಂಕೆ: ಪತ್ನಿಗೆ ಚೂರಿಯಿಂದ ಇರಿದು ಕೊಲೆಗೈದ ಪತಿ

kadaba times

ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉರುಂದಾಡಿಗುಡ್ಡೆಯಲ್ಲಿ ರವಿವಾರ ತಡರಾತ್ರಿ ಕೌಟುಂಬಿಕ ಕಲಹ ತಾರಕಕ್ಕೇರಿ ಪತಿಯೇ ಪತ್ನಿಯನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಲೆಗೈದಿದ್ದಾನೆ. ಪತ್ನಿಯ ನಡತೆಯ ಮೇಲೆ ಶಂಕೆ ವ್ಯಕ್ತಪಡಿಸಿ ನಡೆದ ಗಲಾಟೆಯಲ್ಲಿ ಈ ಕೃತ್ಯ ನಡೆದಿದ್ದು, ಮೂಲತಃ ವಿಜಯಪುರ ಜಿಲ್ಲೆಯ ಸೊನಾಲಿ (30) ಮೃತಪಟ್ಟ ದುರ್ದೈವಿಯಾಗಿದ್ದು, ಪತಿ ಶಿವಲಿಂಗಪ್ಪ ಮಾದರ (40) ಕೊಲೆ ಆರೋಪಿಯಾಗಿದ್ದಾನೆ.

kadaba times
uniq

ಮಂಗಳೂರು: ಪತ್ನಿಯ ನಡತೆಯ ಮೇಲೆ ಅನುಮಾನಗೊಂಡು ಗಂಡನೇ ಆಕೆಗೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉರುಂದಾಡಿಗುಡ್ಡೆ ಎಂಬಲ್ಲಿ ರವಿವಾರ ತಡರಾತ್ರಿ ನಡೆದಿದೆ.

ಮೂಲತಃ ವಿಜಯಪುರ (ಬಿಜಾಪುರ) ಜಿಲ್ಲೆಯವರಾಗಿದ್ದು, ಪ್ರಸ್ತುತ ಕಾವೂರು ಉರುಂದಾಡಿಗುಡ್ಡೆಯಲ್ಲಿ ಹರೀಶ್ ಕುಮಾರ್ ಎಂಬವರ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಸೊನಾಲಿ (30) ಕೊಲೆಯಾದ ಮಹಿಳೆ. ಆಕೆಯ ಪತಿ ಶಿವಲಿಂಗಪ್ಪ ಮಾದರ (40) ಕೊಲೆ ಮಾಡಿದ ಆರೋಪಿ ಎಂದು ಗುರುತಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಪತ್ನಿ ಸೊನಾಲಿಗೆ ಅನೈತಿಕ ಸಂಬಂಧವಿದೆ ಎಂದು ಆರೋಪಿ ಶಿವಲಿಂಗಪ್ಪ ಪದೇ ಪದೇ ಶಂಕಿಸುತ್ತಿದ್ದನು. ಇದೇ ವಿಚಾರವಾಗಿ ದಂಪತಿ ನಡುವೆ ಈ ಹಿಂದೆಯೂ ಹಲವಾರು ಬಾರಿ ತೀವ್ರ ಗಲಾಟೆ, ಜಗಳಗಳು ನಡೆದಿದ್ದವು.

kadaba times
kadaba times

ರವಿವಾರ ತಡರಾತ್ರಿಯೂ ಇದೇ ವಿಚಾರವಾಗಿ ದಂಪತಿಯ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಆಕ್ರೋಶಗೊಂಡ ಶಿವಲಿಂಗಪ್ಪ ಮನೆಯಲ್ಲಿದ್ದ ಚಾಕುವನ್ನು ತಂದು ಪತ್ನಿ ಸೊನಾಲಿಯ ಕುತ್ತಿಗೆ ಹಾಗೂ ದೇಹದ ಭಾಗಗಳಿಗೆ ಮನಬಂದಂತೆ ಇರಿದಿದ್ದಾನೆ. ಚೂರಿ ಇರಿತದಿಂದ ತೀವ್ರ ರಕ್ತಸ್ರಾವವಾಗಿ ಸೊನಾಲಿ ಸ್ಥಳದಲ್ಲೇ ಅಸುನೀಗಿದ್ದಾರೆ.

ತಬ್ಬಲಿಯಾದ ಇಬ್ಬರು ಮಕ್ಕಳು: ಶಿವಲಿಂಗಪ್ಪ ಮಾದರ ಮತ್ತು ಸೊನಾಲಿ ದಂಪತಿಗೆ ಇಬ್ಬರು ಮುಗ್ಧ ಮಕ್ಕಳಿದ್ದು, ಘಟನೆ ನಡೆದ ಸಮಯದಲ್ಲಿ ಮಕ್ಕಳು ಶಿವಲಿಂಗಪ್ಪ ಅವರ ಸಹೋದರಿಯ ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ. ತಾಯಿಯ ಸಾವು ಹಾಗೂ ತಂದೆ ಕೃತ್ಯವೆಸಗಿ ಜೈಲುಪಾಲಾಗುವ ಭೀತಿಯಿಂದ ಮಕ್ಕಳು ಅನಾಥರಾಗುವಂತಾಗಿದೆ.

ಘಟನಾ ಸ್ಥಳಕ್ಕೆ ಕಾವೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆರೋಪಿ ಪತಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Related Articles

Latest Articles