34.9 C
Kadaba
Friday, March 14, 2025

ಹೊಸ ಸುದ್ದಿಗಳು

ಖಾಯಂ ವೈದ್ಯರು, ಸಿಬ್ಬಂದಿಗಳ ನೇಮಕಕ್ಕೆ ಒತ್ತಯಿಸಿ ಕೊಯಿಲ ಆಸ್ಪತ್ರೆ ಮುಂಭಾಗ ಪ್ರತಿಭಟನಾ ಸಭೆ

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಆಲಂಕಾರು/ರಾಮಕುಂಜ: ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿ ಮತ್ತು  ಸಿಬ್ಬಂದಿಗಳ ನೇಮಕಾತಿ ಆಗ್ರಹಿಸಿ ಆಸ್ಪತ್ರೆ ಮುಂಭಾಗ ಕೊಯಿಲ-ರಾಮಕುಂಜ ಜನಪರ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಸಭೆ ಶುಕ್ರವಾರ ನಡೆದಿದ್ದು ಬೇಡಿಕೆ ಈಡೇರದಿದ್ದರೆ  ತಾಲೂಕು ಮಟ್ಟದಲ್ಲಿ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

kadabatimes.in

ಜನಪರ ಹೊರಾಟ ಸಮಿತಿ ಅಧ್ಯಕ್ಷ ಲಕ್ಷ್ಮೀ ನಾರಾಯಣ  ರಾವ್ ಆತೂರು ಮಾತನಾಡಿ, 7  ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ಗ್ರಾಮದ ಜನರು  ಈ ಆಸ್ಪತ್ರೆಯನ್ನು ಆಶ್ರಯಿಸಿದ್ದಾರೆ. ಮೂಲಭೂತ ಸೌಕಯ್ಯಗಳಿದ್ದರೂ  ಕಳೆದ 8  ವರ್ಷಗಳಿಂದ  ಖಾಯಂ ವೈದ್ಯರ ,   ಸಿಬ್ಬಂದಿಗಳ ಕೊರತೆಯಿದೆ.   ಸಮಸ್ಯೆ  ಪರಿಹರಿಸುವಂತೆ ಸಂಬಂದಪಟ್ಟವರಿಗೆ ಮನವಿ ಸಲ್ಲಿಸುತ್ತಲೆ ಬರಲಾಗಿದೆಈ ಪ್ರತಿಭಟನೆ ನಮ್ಮದು ಮೊದಲ ಹೆಜ್ಜೆ ಬೇಡಿಕೆ ಈಡೇರದಿದ್ದರೆ  ತಾಲೂಕು ಮಟ್ಟದಲ್ಲಿ ಹೋರಾಟ ಮುಂದುವರಿಸಲಾಗುವುದು ಎಂದರು.

kadabatimes.in

ಪ್ರತಿಭಟನೆ ಉದ್ದೇಶಿಸಿ ಜನಪರ ಹೋರಾಟ ಸಮಿತಿ ಕಾರ್ಯದರ್ಶಿ ಜುನೈದ್ ಕೆಮ್ಮಾರ, ಆತೂರು ಸದಾಶಿವ  ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವಾಧ್ಯಕ್ಷ ಯದುಶ್ರೀ ಆನೆಗುಂಡಿ, ಕೊಯಿಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಫಲೂಲುದ್ಧೀನ್ ಮತ್ತಿತರರು ಮಾತನಾಡಿದರು.

kadabatimes.in

ಸ್ಥಳಕ್ಕಾಮಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ|ತಿಮ್ಮಯ್ಯ  ಪ್ರತಿಭಟನ ನಿರತರೊಡನೆ  ಮಾತನಾಡಿ, ವೈದ್ಯರ ನೇಮಕಾತಿ ಸರಕಾರದ ಮಟ್ಟದಲ್ಲಿ ನಡೆಯಬೇಕಿದೆ, ಇಲ್ಲಿನ ಸಿಬ್ಬಂದಿಗಳ ನೇಮಕಾತಿಯ ಬಗ್ಗೆ ಈಗಾಗಲೇ ಸರಕಾರಕ್ಕೆ ಮನವಿ ಮಾಡಲಾಗಿದೆ,  ಸದ್ಯದ ಸಮಸ್ಯೆ ಪರಿಹರಿಸಲು ಇಲ್ಲಿಗೆ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯನ್ನು ವಾರದಲ್ಲಿ ಎರಡು ದಿನ ಹಾಗೂ ಶಿರಾಡಿ ಪ್ರಾಥಮಿಕ ಆರೋಗ್ಯಕೇಂದ್ರ ವೈದ್ಯಾಧಿಕಾರಿಯವರನ್ನು ವಾರದಲ್ಲಿ ಎರಡು  ದಿನ ನಿಯೋಜನೆ ಮಾಡಲಾಗುವುದು, ಸುಳ್ಯದ ಕೆವಿಜಿ ವೈದ್ಯಕೀಯ ಕಾಲೇಜಿನಿಂದ ಪೋಸ್ಟ್ ಗ್ರಾಜುವೇಟ್ಸ್ ಳನ್ನು ಕರೆಸಿಕೊಳ್ಳಲಾಗುವುದು ಎಂದು ಹೇಳಿದರು.

kadabatimes.in

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ|ದೀಪಕ್ ರೈ ಉಪಸ್ಥಿತರಿದ್ದರು. ಪ್ರತಿಭಟನೆಯಲ್ಲಿ ಕೊಯಿಲ ಗ್ರಾಮ ಪಂಚಾತಿಯ ಅಧ್ಯಕ್ಷೆ ಪುಷ್ಪಾ ಸುಭಾಸ್ ಶೆಟ್ಟಿ ಸಹಿತ ಹಲವಾರು ಮಂದಿ ಭಾಗವಹಿಸಿದ್ದರು.