24.8 C
Kadaba
Saturday, March 15, 2025

ಹೊಸ ಸುದ್ದಿಗಳು

ಕಡಬ: ನದಿ ಮೂಲಕ ತಾತ್ಕಾಲಿಕ ರಸ್ತೆ ನಿರ್ಮಿಸಿದ ಗ್ರಾಮಸ್ಥರು :ಬಳ್ಪ-ಕಡಬ ಇನ್ನು ಬರೇ 6 ಕಿ.ಮೀ

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್, ಕೋಡಿಂಬಾಳ :ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಳ ಗ್ರಾಮದ ಮಜ್ಜಾರು ಎಂಬಲ್ಲಿ  ಗ್ರಾಮಸ್ಥರೇ ಹಣ ಸಂಗ್ರಹಿಸಿ ಶ್ರಮದಾನವನ್ನೂ ಮಾಡಿ ಕುಮಾರಧಾರಾ ನದಿ ಮೂಲಕ ಬೇಸಿಗೆ ಕಾಲದಲ್ಲಿ ಮಾತ್ರ   ಇನ್ನೊಂದು ಗ್ರಾಮಕ್ಕೆ ಸಂಪರ್ಕಿಸಲು  ತಾತ್ಕಾಲಿಕ ಮಾರ್ಗ ನಿರ್ಮಿಸಿದ್ದು  ಈ ಮೂಲಕ  ಒಗ್ಗಟ್ಟಿನಲ್ಲಿ ಬಲವಿದೆ ಎಂದು ತೋರಿಸಿಕೊಟ್ಟಿದ್ದಾರೆ.

kadabatimes.in

ಕಡಬ ತಾಲೂಕಿನ  ಸಂಸದರ ಆದರ್ಶ ಗ್ರಾಮವಗಿರುವ  ಬಳ್ಪದ ಜನರು  ತಾಲೂಕು ಕೇಂದ್ರವನ್ನು ಸಂಪರ್ಕಿಸಲು ಪಂಜ ಮೂಲಕ ಸುಮಾರು 20 ಕಿ.ಮೀ ಹೆಚ್ಚುವರಿಯಾಗಿ ಸಂಚರಿಸಬೇಕು.ಆದರೆ ಈ ಕುಮಾರಧಾರಾ ನದಿ ಮೂಲಕ ತಾತ್ಕಾಲಿಕ ದಾರಿಯಲ್ಲಿ ಬರೇ 6 ಕಿ.ಮೀ ಸಂಪರ್ಕಿಸಬಹುದು.  3 ಕಿ.ಮೀ ಯಲ್ಲಿ  ಮಂಗಳೂರು-ಬೆಂಗಳೂರು ನಡುವಿನ ಕೋಡಿಂಬಾಳ ರೈಲ್ವೆ ನಿಲ್ದಾಣವೂ ಸಿಗುತ್ತದೆ.

kadabatimes.in

ಈ ನಿಟ್ಟಿನಲ್ಲಿ ಗ್ರಾಮಸ್ಥರೇ ಸೇರಿಕೊಂಡು  ಮಜ್ಜಾರು ಕಡವು ಎಂಬಲ್ಲಿ ತಾತ್ಕಾಲಿಕ  ರಸ್ತೆಯೊಂದನ್ನು ನಿರ್ಮಾಣ ಮಾಡಲು ತೀರ್ಮಾನಿಸಿ ಜೊತೆಗೆ ಸಮಿತಿಯನ್ನು ರಚಿಸಿ ಗ್ರಾಮಸ್ಥರ ಸಹಕಾರದಿಂದ ಸುಮಾರು ಐದು ಲಕ್ಷ ರೂ. ಮೊತ್ತವನ್ನು ಸಂಗ್ರಹಿಸಿ  ತಾತ್ಕಾಲಿಕ ರಸ್ತೆ  ಕೆಲಸ ಆರಂಭಿಸಿದ್ದಾರೆ.

kadabatimes.in

ಬಳ್ಪ, ಕೇನ್ಯ, ಮಜ್ಜಾರು ಭಾಗದ ಹಿರಿಯರು,  ಯುವಕರು  ಮಕ್ಕಳೆನ್ನದೇ ಸುಮಾರು 200ಕ್ಕೂ ಅಧಿಕ ಮಂದಿ ಗ್ರಾಮಸ್ಥರು  ಶ್ರಮದಾನದ ಮೂಲಕ ಈ ರಸ್ತೆ ನಿರ್ಮಾಣದ  ಕೆಲಸಕ್ಕೆ ಸಹಕಾರ ನೀಡುತ್ತಿದ್ದಾರೆ. ವಾರದೊಳಗಡೆ ತಾತ್ಕಾಲಿಕ  ರಸ್ತೆ ಕೆಲಸ ಪೂರ್ಣಗೊಂಡು ವಾಹನ ಸಂಚಾರಕ್ಕೆ ಮುಕ್ತವಾಗಲಿದೆ.

ಕಲ್ಲು, ಮಣ್ಣು, ಮರಳು, ಮತ್ತು ಸಿಮೆಂಟ್ ಪೈಪ್​ ಮುಂತಾದ ಪರಿಕರಗಳಿಂದ ನಿರ್ಮಿಸುತ್ತಿರುವ ಈ ತಾತ್ಕಾಲಿಕ ರಸ್ತೆ  ಮಳೆಗಾಲದಲ್ಲಿ ನೆರೆ ನೀರಿಗೆ ಹಾನಿಯಾಗಲಿದೆ.  ಮುಂದಿನ ವರ್ಷ ಬೇಸಿಗೆ ಕಾಲದಲ್ಲಿ ಮತ್ತೆ ಪುನ‌ರ್ ನಿರ್ಮಾಣ ಮಾಡಬೇಕಾಗುತ್ತದೆ.  ಇಲ್ಲಿ ಶಾಶ್ವತ ಸಂಪರ್ಕ ಸೇತುವೆ ಪೂರ್ಣವಾದರೆ ಕಡಬ, ಕೋಡಿಂಬಾಳ ರೈಲ್ವೆ ನಿಲ್ದಾಣ, ಪ್ರಸಿದ್ಧ ಪ್ರವಾಸಿ ಮತ್ತು ಕಾರಣಿಕ ಕ್ಷೇತ್ರಗಳಾದ ಮಜ್ಜಾರು, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಸೇರಿದಂತೆ ಮಂಗಳೂರು, ಬೆಂಗಳೂರು ಮತ್ತು ಸುಳ್ಯ, ಮಡಿಕೇರಿ, ಕೇರಳ ಕಡೆಗೂ ಸಂಪರ್ಕ ಕೊಂಡಿಯಾಗಲಿದೆ.

kadabatimes.in

ಈ ಭಾಗದಲ್ಲಿ ಸುಮಾರು 200 ರಿಂದ 300ಮೀಟರ್​ ಉದ್ದದ ಒಂದು ಸುಸಜ್ಜಿತವಾದ ಸೇತುವೆ ನಿರ್ಮಿಸಲು  ಜನಪ್ರತಿನಿಧಿಗಳು ಸರ್ಕಾರದ ಗಮನ ಸೆಳೆಯಲು  ಮುಂದಾಗಬೇಕಿದೆ. ಸಂಸದರ ಆದರ್ಶ ಗ್ರಾಮವಾಗಿರುವುದರಿಂದ  ಈ ಸೇತುವೆ ಸಂಪರ್ಕ ಕಲ್ಪಿಸುವ ಬಳ್ಪ ಗ್ರಾಮದ ರಸ್ತೆಗಳು ಬಹುತೇಕ ಎಲ್ಲಾ ಕಡೆಗಳಲ್ಲಿ ಈಗಾಗಲೇ ಕಾಂಕ್ರೀಟಿಕರಣವಾಗಿವೆ.  ಆದ್ದರಿಂದ ಸಂಬಂಧಿಸಿದ ಇಲಾಖಾಧಿಕಾರಿಗಳು ಮತ್ತು ಜನ ಪ್ರತಿನಿಧಿಗಳು ಮಜ್ಜಾರುಕಡವು ಭಾಗದಲ್ಲಿ ಪೂರ್ಣಕಾಲಿಕ ಸೇತುವೆ ನಿರ್ಮಾಣಕ್ಕೆ ಮುಂದಾಗಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.