
ಸುಬ್ರಹ್ಮಣ್ಯ: ಇಲ್ಲಿನ ಠಾಣಾ ವ್ಯಾಪ್ತಿಯ ಏನೆಕಲ್ಲು ಗ್ರಾಮದ ತೋಟವೊಂದಕ್ಕೆ ನುಗ್ಗಿ ಅಡಿಕೆ ಕಳ್ಳತನ ಮಾಡಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ.


ಈ ಘಟನೆ ಅ.8ರಂದು ನಡೆದಿದ್ದು, ಏನೆಕಲ್ಲಿನ ಸುಜಿತ್ ಎಂಬವರ ತೋಟಕ್ಕೆ ನುಗ್ಗಿ ಅಡಿಕೆ ಕಳ್ಳತನ ನಡೆಸಿದ್ದಾನೆ . 112 ಪೊಲೀಸರು ಸ್ಥಳಕ್ಕೆ ಆಗಮಿಸಿ ವ್ಯಕ್ತಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.


ಕಳೆದ ಹಲವು ದಿನಗಳಲ್ಲಿ ಇದೇ ರೀತಿ ಕಳ್ಳತನ ನಡೆಸಿರುವುದರಿಂದ ಸಂಶಯದ ಮೆರೆಗೆ ಸ್ಥಳೀಯರು ಕಳ್ಳನನ್ನು ಹಿಡಿಯಲು ಕಾದು ಕುಳಿತಿದ್ದರು. ಈತನ ಗುರುತನ್ನು ಸ್ಥಳೀಯರು ಪತ್ತೆ ಹಚ್ಚಿದ್ದು ಬಳಿಕ 112 ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಆತನನ್ನು ಠಾಣೆಗೆ ಒಯ್ದಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಲಭಿಸಿಲ್ಲ.
