23.4 C
Kadaba
Thursday, March 27, 2025

ಹೊಸ ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯ: ಸರಳ ಸಾಮೂಹಿಕ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ 10 ಜೋಡಿಗಳು

ಕಡಬ ಟೈಮ್ಸ್ ವೆಬ್ ತಾಣದಲ್ಲಿ ಸುದ್ದಿಗಳನ್ನು ಪರಿಶೀಲಿಸಿಯೇ ಪ್ರಕಟಿಸಲಾಗುತ್ತಿದೆ. ಒಂದು ವೇಳೆ ಆಪೇಕ್ಷಾರ್ಹ, ಅಥವಾ ತಪ್ಪು ಮಾಹಿತಿಗಳು ಕಂಡು ಬಂದಲ್ಲಿ ಇಲ್ಲವೇ ಸಲಹೆಗಳಿದ್ದರೆ  ಸಂಪಾದಕರ ದೂರವಾಣಿ ಸಂಖ್ಯೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್ಸ್(KADABA TIMES): ಸುಬ್ರಹ್ಮಣ್ಯ: ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯಿ ದತ್ತಿ ಇಲಾಖೆ ಮತ್ತು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾ.24 ರಂದು  ಆದಿ ಸುಬ್ರಹ್ಮಣ್ಯದ ಕಲ್ಯಾಣ ಮಂಟಪದಲ್ಲಿ ನಡೆಯಿತು.

kadabatimes.in

ಸರಳ ಸಾಮೂಹಿಕ ವಿವಾಹದಲ್ಲಿ  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವತಿಯಿಂದ ವಧುವಿಗೆ 48 ಸಾವಿರ ರೂ. ಮೌಲ್ಯದ ತಾಳಿ ಕಂಠಿ, ಕಾಲುಂಗುರ, ಸೀರೆ, ರವಿಕೆ, ಹಾರ ಖರೀದಿಸಲು 10 ಸಾವಿರ ರೂ. ಹಾಗೂ ವರನಿಗೆ ಶರ್ಟ್‌, ವೇಸ್ಟಿ, ಪೇಟ ಖರೀದಿಸಲು 5,000 ರೂ. ನೀಡಲಾಗುತ್ತದೆ. 10 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದು  ಶ್ರೀ ಕ್ಷೇತ್ರದ ಪುರೋಹಿತ ಮಧುಸೂಧನ ಕಲ್ಲೂರಾಯ ಅವರ ನೇತೃತ್ವದಲ್ಲಿ ಅರ್ಚಕ ವರ್ಗದವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

kadabatimes.in
kadabatimes.in

ದಾಂಪತ್ಯ ಜೀವನಕ್ಕೆ ಕಾಲಿರಿಸಿದವರು: ಕಿಶೋರ್‌ ಕೆ.ಜಿ. ಕೊರತ್ತೋಡಿ ಮತ್ತು ಕಾವ್ಯಶ್ರೀ ಪಿ. ಬಾಳುಗೋಡು, ರಘು ಮಂಡೆಕೋಲು ಮತ್ತು ಚಂದ್ರಾವತಿ ಕಬಕ, ಮಂಜುನಾಥ ಸುಬ್ರಹ್ಮಣ್ಯ ಮತ್ತು ಪ್ರಮೀಳ ಸಕಲೇಶಪುರ, ರಂಜಿತ್‌ ಗುಂಡ್ಯ ಮತ್ತು ದಿವ್ಯ ಪೆರ್ಲಂಪಾಡಿ, ನವೀನ ವಿಟ್ಲ ಮತ್ತು ಸ್ವಾತಿ ಮರ್ಕಂಜ, ಸಂತೋಷ್‌ ಬಂಟ್ವಾಳ ಮತ್ತು ವಾರಿಜಾ ಬಂಟ್ವಾಳ, ಸದಾನಂದ ಬಾಳಿಲ ಮತ್ತು ರಮ್ಯ ಎಸ್‌. ಕಳಂಜ, ಸಚಿನ್‌ರಾಜ್‌ ಕೊಲ್ಲಮೊಗ್ರು ಮತ್ತು ದಿವ್ಯ ನಾಲ್ಕೂರು, ಪವಿತ್‌ ಕೋಡಿಂಬಾಳ ಮತ್ತು ಪುಷ್ಪ ಕಲ್ಲುಗುಡ್ಡೆ, ಶ್ರೀಧರ ನಿಡ್ಲೆ ಮತ್ತು ಸುಶೀಲ ನಿಡ್ಲೆ ನವ ಜೋಡಿಗಳು ಪರಸ್ಪರ ಹಾರ ಬದಲಾಯಿಸುವುದರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

kadabatimes.in

ಶುಭಹಾರೈಕೆ: ಶಾಸಕಿ ಭಾಗೀರಥಿ ಮುರುಳ್ಯ, ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯೆ ಮಲ್ಲಿಕಾ ಪಕ್ಕಳ, ಧಾರ್ಮಿಕ ಪರಿಷತ್‌ ಸದಸ್ಯ ಲಕ್ಷ್ಮೀಶ ಗಬಲಡ್ಕ, ಮಾಸ್ಟರ್‌ ಪ್ಲಾನ್‌ ಸಮಿತಿ ಸದಸ್ಯರಾದ ಲೋಲಾಕ್ಷ ಕೈಕಂಬ, ಅಚ್ಯುತ ಗೌಡ ಬಳ್ಪ, ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸು ರಾಜ್‌ ಮತ್ತಿತರರು, ನವಜೋಡಿಗಳ ಮನೆಯವರು, ಸ್ನೇಹಿತರು ಭಾಗವಹಿಸಿ ವಧು-ವರರಿಗೆ ಶುಭಹಾರೈಸಿದರು.

ನಿಮ್ಮೂರಿನ ಸುದ್ದಿಗಳು, ಜಾಹೀರಾತುಗಳಿಗಾಗಿ  93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.ಇಲ್ಲವೇ kadabatimes@gmail.com ಗೆ ಇಮೇಲ್ ಕಳುಹಿಸಬಹುದು. ನಮ್ಮನ್ನು  Facebook ಅಥವಾ Youtube ನಲ್ಲಿ ಹಿಂಬಾಲಿಸಿ.